ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಶೋಧನೆ ವಿದ್ಯಾರ್ಥಿನಿ ದೀಪಾ ತಟ್ಟಿಮನಿ ಅವರಿಗೆ ನವದೆಹಲಿಯ ಇಂಡಿಯನ್ ಗ್ಯಾಲಕ್ಸಿ ಫೌಂಡೇಶನ್ 2023ನೇ ವರ್ಷದ ನ್ಯಾಷನಲ್ ವುಮೆನ್ ಎಕ್ಸಲೆನ್ಸ್ ಪ್ರಶಸ್ತಿ ನೀಡಿದೆ.
ಡಾ. ದೀಪಾ ತಟ್ಟಿಮನಿ ಅವರು ಮಹಿಳಾ ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರಗೌಡ ಕಾಕಡೆ ಅವರ ಮಾರ್ಗದರ್ಶನದಲ್ಲಿ ಪಿಎಚ್‌ಡಿ ಅಧ್ಯಯನ ಮಾಡುತ್ತಿದ್ದಾರೆ. ಜ್ಞಾನದೀಪ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆಯಾಗಿ ಸುಮಾರು ಐದು ವರ್ಷಗಳಿಂದ ಇವರು ಸಲ್ಲಿಸಿದ ಸಮಾಜ ಸೇವೆ, ಮಹಿಳಾ ಸಬಲೀಕರಣಕ್ಕಾಗಿ ಸಲ್ಲಿಸಿದ ಸೇವೆ ಹಾಗೂ ಮಹಿಳಾ ಶಿಕ್ಷಣಕ್ಕೆ ನೀಡಿದ ಕೊಡುಗೆ ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಪತ್ರಕರ್ತೆಯಾಗಿಯೂ ಕಾರ್ಯ ನಿರ್ವಹಿಸಿದ ದೀಪಾ ಹಲವಾರು ಸಾಮಾಜಿಕ ಅಭಿವೃದ್ಧಿ ಲೇಖನಗಳನ್ನು ಬರೆದಿದ್ದಾರೆ. ಅವರ ಈ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ನವದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೇಂದ್ರ ಸಚಿವ ಕಪೀಲ ಪಾಟೀಲ, ಸಂಸದ ಎಂ. ಪಿ. ನವನೀತ ರಾಣಾ, ಡಾ. ಮನೀಶ ಗವಾಯಿ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.