ವಿಜಯಪುರ: ಕ್ರೀಡೆಗಳು ಮಾನವನ ಆರೋಗ್ಯಕ್ಕೆ ಟಾನಿಕ್ ಇದ್ದಂತೆ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮಾನಸಿಕ ಮತ್ತು ದೈಹಿಕವಾಗಿ ಸದೃಡರಾಗಬಹುದು ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಎಸ್ ಸೋಮನಾಳ ಹೇಳಿದ್ದಾರೆ.
ನಗರದ ಹೊರ ವಲಯದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ 2022-23ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನದ ಅಂಗವಾಗಿ ಅಂತರ ವಿಭಾಗಗಳ ಸ್ನಾತಕ ಮತ್ತು ಸ್ನಾತಕೋತ್ತರ ಹಾಗೂ ಸಂಶೋಧನೆ ವಿದ್ಯಾರ್ಥಿನಿಯರು, ಬೋಧಕ, ಬೋಧಕರ ಹೊರತಾದ ಸಿಬ್ಬಂದಿಗಳಿಗಾಗಿ ಏರ್ಪಡಿಸಿದ್ದ ನಾನಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಕ್ರೀಡಾ ನಿರ್ದೇಶಕ ಪ್ರೊ. ಸಕ್ಪಾಲ್ ಹೂವಣ್ಣ, ಶಿಕ್ಷಣ ನಿಕಾಯದ ಡೀನ್ ಪ್ರೊ. ರಾಜಕುಮಾರ ಪಿ. ಮಾಲಿಪಾಟೀಲ, ವಿದ್ಯಾರ್ಥಿ ಕ್ಷೇಮಪಾಲನೆ ನಿರ್ದೇಶಕಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ, ಹಣಕಾಸು ಉಪ ಅಧಿಕಾರಿ ಡಾ. ಹಣಮಂತಯ್ಯ ಪೂಜಾರಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕ ಡಾ. ಶ್ರೀನಿವಾಸ ಉಪಸ್ಥಿತರಿದ್ದರು.