ನಾನು ಯತ್ನಾಳ ಸ್ನೇಹಿತರಿಬ್ಬರೂ ಒಂದೇ ಇದ್ದೇವೆ- ಸೋಷಿಯಲ್ ಮೀಡಿಯಾದಲ್ಲಿ ತೇಜೋವಧೆ ಸಲ್ಲದು- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಯತ್ನಾಳ ಮತ್ತು ನಾನು ಸ್ನೇಹಿತರು.  ಇಂದು ವೇದಿಕೆಯಲ್ಲಿ ಅಕ್ಕಪಕ್ಕದಲ್ಲಿಯೇ ಕುಳಿತಿದ್ದೇವೆ.  ನಾವೆಲ್ಲ ಒಂದೇ ಇದ್ದೇವೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ವಿಜಯಪುರದಲ್ಲಿ ಬಿಜೆಪಿ ಜಿಲ್ಲಾ ಮಟ್ಟದ ಶಂಖನಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ತಾವು ಇಬ್ಬರೂ ಕಾರ್ಯಕ್ರಮದಲ್ಲಿ ಅಕ್ಕಪಕ್ಕದಲ್ಲಿಯೇ ಕುಳಿತಿದ್ದರೂ ಯಾಕೆ ಮಾತನಾಡಿಲ್ಲ? ಭಿನ್ನಮತ ಮುಂದುವರೆದಿದೆಯೇ ಎಂದು ಪತ್ರಕರ್ತರು ಕೇಳಿದಾಗ ಸಂಸದ ರಮೇಶ ಜಿಗಜಿಣಗಿ ಜಾಣತನದ ಉತ್ತರ ನೀಡಿದರು. ನಾವಿಬ್ಬರೂ […]

ಬಿಜೆಪಿ ಮುಳುಗಿದ ಹಡಗು- ಕರ್ನಾಟಕದಲ್ಲಿ ಗಂಟುಮೂಟೆ ಕಟ್ಟುವ ಸಮಯ ಬರಲಿದೆ- ಸಚಿವ ಎಂ ಬಿ ಪಾಟೀಲ ವಾಗ್ದಾಳಿ

ವಿಜಯಪುರ: ಬಿಜೆಪಿ ಮುಳುಗಿದ ಹಡಗು.  ಕರ್ನಾಟಕದಲ್ಲಿ ಗಂಟುಮೂಟೆ ಕಟ್ಟುವ ಸಮಯ ಬರಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಸೈನಿಕ ಶಾಲೆಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಚೈತ್ರಾ ಕುಂದಾಪುರ ಅವರು ಬಿಜೆಪಿ ಟೆಕೆಟ್ ಕೊಡಿಸುವುದಾಗಿ ಹೇಳಿ ವಂಚಿಸಿರುವ ಆರೋಪ ಮತ್ತು ಇಂಥ ಪ್ರಕರಣಗಳಿಂದ ಉಂಟಾಗುತ್ತಿರುವ ವಿದ್ಯಮಾನಗಳ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ […]

ಸನಾತನ ಧರ್ಮ ಉಳಿದರೆ ಮಾತ್ರ ಹಿಂದುಗಳು, ದಲಿತರು, ಸಂವಿಧಾನ ಉಳಿಯಲು ಸಾಧ್ಯ- ಶಾಸಕ ಯತ್ನಾಳ

ವಿಜಯಪುರ: ಸನಾತನ ಧರ್ಮ ಉಳಿದರೆ ಮಾತ್ರ ಹಿಂದುಗಳು, ದಲಿತರು ಮತ್ತು ಸಂವಿಧಾನ ಉಳಿಯಲು ಸಾಧ್ಯ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಶಂಖನಾದ ಕಾರ್ಯಕ್ರಮದಲ್ಲಿ ಪಾಲ್ಗೋಂಡು ಅವರು ಮಾತನಾಡಿದರು. ಕರ್ನಾಟಕದ ಸಿಎಂ ಟ್ವೀಟ್ ಮಾಡಿ, ಮನುವಾದ ಮತ್ತು ಮನುಸ್ಮೃತಿ ಚರ್ಚೆ ಮಾಡುತ್ತಾರೆ.  ನಾವು ಎಂದಾದರೂ ಮನುಸ್ಮೃತಿ ಬಗ್ಗೆ ಚರ್ಚೆ ಮಾಡಿದ್ದೇವಾ? ಸಂವಿಧಾನ ಬದಲು ಮಾಡುವುದಾಗಿ ಹೇಳಿದ್ದೀವಾ? ಎಂದು ಅವರು ಪ್ರಶ್ನಿಸಿದರು. ಮೀಸಲಾತಿ ಪ್ರಮಾಣ ಹೆಚ್ಚು ಮಾಡಿದ್ದೇ ಬಿಜೆಪಿ.  […]

ಬಾಗಲಕೋಟೆ ಹೋಮಿಯೋಪಥಿ ಕಾಲೇಜನಲ್ಲಿ ಪ್ರಜಾಪ್ರಭುತ್ವ ದಿನ ಆಚರಣೆ

ಬಾಗಲಕೋಟೆ: ನಗರದ ಬಿ. ವಿ. ವಿ. ಎಸ್. ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು.  ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಚಾರ್ಯ ಡಾ. ಅರುಣ ವಿ. ಹೂಲಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪ್ರಪಂಚ ಯುದ್ಧ ಮುಕ್ತವಾದರೆ ಪ್ರತಿಯೊಬ್ಬನೂ ಶಾಂತಿ, ಸಮಾಧಾನದಿಂದ ಬದುಕಬಹುದು.  ಇದರಿಂದ ದೇಶದ ಅಭಿವೃದ್ಧಿಯಾಗುತ್ತದೆ.  ಹಿಂಸೆಯಿಂದ ಏನನ್ನೂ ಗಳಿಸಲು ಸಾಧ್ಯವಿಲ್ಲ.  ಪ್ರೀತಿಯಿಂದ ಎಲ್ಲವನ್ನೂ ಸಾಧಿಸಬಹುದು ಎಂಬುದನ್ನು ನೆನಪಿಸುವುದೇ ಪ್ರಜಾಪ್ರಭುತ್ವ ದಿನದ ಉದ್ದೇಶವಾಗಿದೆ ಎಂದು ಹೇಳಿದರು. ಪ್ರತಿಯೊಬ್ಬ ಪ್ರಜೆಯೂ ಮತದಾನದ ಮಹತ್ವವನ್ನು ಅರಿತುಕೊಂಡಿರಬೇಕು.  ಯಾವುದೇ […]

ಸುಸ್ಥಿರ ಆರೋಗ್ಯಕ್ಕೆ ಉತ್ತಮ ಪರಿಸರ ಅಗತ್ಯ- ಪೃಕೃತಿಯ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ- ಡಾ. ವೈ. ಎಂ. ಜಯರಾಜ

ವಿಜಯಪುರ: ಪರಿಸರವನ್ನು ಕಾಪಾಡಿದರೆ, ಪ್ರಕೃತಿ ನಮ್ಮೆಲ್ಲರನ್ನು ರಕ್ಷಿಸುತ್ತದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಹೇಳಿದ್ದಾರೆ.  ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂಡಿಯನ್ ಅಸೋಶಿಯೇಶನ್ ಆಪ್ ಪ್ರಿವೆಂಟಿವ್ ಆಂಡ್ ಸೋಷಿಯಲ್ ಮೆಡಿಸೀನ್ ಆಯೋಜಿಸಿರುವ 3ನೇ ರಾಜ್ಯ ಮಟ್ಟದ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಪರಿಸರ ಹದಗೆಡಲು ಮನುಷ್ಯರೇ ಕಾರಣ.  ಆಹಾರ, ನೀರು, ಗಾಳಿ ಸೇರಿದಂತೆ ಪ್ರತಿಯೊಂದೂ ಕಲುಷಿತವಾಗುತ್ತಿದ್ದು, ಇದರ ದುಷ್ಪರಣಿಮಾಮಗಳು ಮನುಷ್ಯರು ಮತ್ತು ಪ್ರಾಣಿಗಳ ಮೇಲಾಗುತ್ತಿದೆ.  ಉತ್ತಮ ಪರಿಸರ ಪ್ರಕೃತಿಯ […]