ಬಾಗಲಕೋಟೆ ಹೋಮಿಯೋಪಥಿ ಕಾಲೇಜನಲ್ಲಿ ಪ್ರಜಾಪ್ರಭುತ್ವ ದಿನ ಆಚರಣೆ

ಬಾಗಲಕೋಟೆ: ನಗರದ ಬಿ. ವಿ. ವಿ. ಎಸ್. ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು. 

ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಚಾರ್ಯ ಡಾ. ಅರುಣ ವಿ. ಹೂಲಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಪ್ರಪಂಚ ಯುದ್ಧ ಮುಕ್ತವಾದರೆ ಪ್ರತಿಯೊಬ್ಬನೂ ಶಾಂತಿ, ಸಮಾಧಾನದಿಂದ ಬದುಕಬಹುದು.  ಇದರಿಂದ ದೇಶದ ಅಭಿವೃದ್ಧಿಯಾಗುತ್ತದೆ.  ಹಿಂಸೆಯಿಂದ ಏನನ್ನೂ ಗಳಿಸಲು ಸಾಧ್ಯವಿಲ್ಲ.  ಪ್ರೀತಿಯಿಂದ ಎಲ್ಲವನ್ನೂ ಸಾಧಿಸಬಹುದು ಎಂಬುದನ್ನು ನೆನಪಿಸುವುದೇ ಪ್ರಜಾಪ್ರಭುತ್ವ ದಿನದ ಉದ್ದೇಶವಾಗಿದೆ ಎಂದು ಹೇಳಿದರು.

ಪ್ರತಿಯೊಬ್ಬ ಪ್ರಜೆಯೂ ಮತದಾನದ ಮಹತ್ವವನ್ನು ಅರಿತುಕೊಂಡಿರಬೇಕು.  ಯಾವುದೇ ಆಸೆ- ಆಮೀಷಗಳಿಗೆ ಮರುಳಾಗದೆ ಉತ್ತಮ ನಾಯಕನನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.

ಪ್ರಾಧ್ಯಾಪಕ ಡಾ. ರವಿ ಎಸ್ ಕೋಟೆಣ್ಣವರ ಭಾರತದ ಸಂವಿಧಾನದ ಪ್ರಸ್ತಾವನೆಯನ್ನು ಭೋದಿಸಿದರು.  ಡಾ. ವಿಜಯಲಕ್ಶ್ಮಿ ಪಾಟೀಲ ಸ್ವಾಗತಿಸಿದರು.  ಡಾ. ಶ್ವೇತಾ ಪಾಟೀಲ ವಂದಿಸಿದರು.  ಡಾ. ಜಯಲಕ್ಷ್ಮಿ ಪಾಟೀಲ ನಿರೂಪಿಸಿದರು.

Leave a Reply

ಹೊಸ ಪೋಸ್ಟ್‌