ವಿಜಯಪುರ: ರೋಗಿಗಳ ಆರೋಗ್ಯ ಸುಧಾರಣೆಗೆ ಮತ್ತು ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವೈದ್ಯರು ಸದಾ ಕಾರ್ಯೋನ್ಮುಖರಾಗಿರುತ್ತಾರೆ ಎಂದು ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಉಪಪ್ರಾಚಾರ್ಯ ಡಾ. ಎಂ. ಬಿ. ಪಾಟೀಲ ಹೇಳಿದ್ದಾರೆ.
ನಗರದ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸೆ ವಿಭಾಗ ಮತ್ತು ಶ್ರೀ ಬಿ. ಎಂ. ಪಾಟೀಲ ನರ್ಸಿಂಗ್ ಮಹಾವಿದ್ಯಾಲಯದ ಸಹಯೋಗದಲ್ಲಿ ಸೋಮವಾರ ನಡೆದ ವಿಶ್ವ ರೋಗಿಗಳ ಸುರಕ್ಷತಾ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವೈದ್ಯಕೀಯ ದೋಷಗಳನ್ನು ಕಡಿಮೆ ಮಾಡಲು ಮತ್ತು ರೋಗಿಗಳ ಆರೋಗ್ಯ ಸುಧಾರಿಸುವ ಕಾಳಜಿಯ ಹಿನ್ನೆಲೆಯಲ್ಲಿ ವಿಶ್ವ ರೋಗಿಗಳ ಸುರಕ್ಷತಾ ದಿನ ಆಚರಿಸಲಾಗುತ್ತಿದೆ. ಈ ಬಾರಿ ರೋಗಿಗಳ ಸುರಕ್ಷತೆಗಾಗಿ ರೋಗಿಗಳನ್ನು ತೊಡಗಿಸಿಕೊಳ್ಳಿ ಘೋಷವಾಕ್ಯದಡಿ ಕಾರ್ಯಕ್ರಮಗಳು ನಡೆಯುತ್ತಿವೆ. ವೈದ್ಯಕೀಯ ದೋಷಗಳನ್ನು ಕಡಿಮೆ ಮಾಡಲು ಮತ್ತು ರೋಗಿಗಳು ಒಟ್ಟಾರೆ ಆರೋಗ್ಯದ ಫಲಿತಾಂಶಗಳನ್ನು ಸುಧಾರಿಸುವ ಸುದ್ದದ್ದೇಶದಿಂದ ವಿಶ್ವ ಆರೋಗ್ಯ ಸಂಸ್ಥೆ ಈ ದಿನ ಆಚರಿಸುತ್ತಿದೆ ಎಂದು ಅವರು ಹೇಳಿದರು.
ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ.ಕೋಟೆಣ್ಣವರ ಮಾತನಾಡಿ, ವಿಶ್ವ ರೋಗಿಗಳ ಸುರಕ್ಷತಾ ದಿನಾಚರಣೆ ಮಹತ್ವ ರೋಗಿಗಳ ಮತ್ತು ಅವರ ಕುಟುಂಬ ಸದಸ್ಯರ ಪಾತ್ರದ ಬಗ್ಗೆ ವಿವರಿಸಿದರು.
ಶಸ್ತ್ರ ಚಿಕಿತ್ಸೆ ವಿಭಾಗದ ಸಹ ಪ್ರಾಧ್ಯಾಪಕ ಡಾ. ದಯಾನಂದ.ಬಿರಾದಾರ ಮಾತನಾಡಿ, ರೋಗಿಗಳ ಯೋಗಕ್ಷೇಮ ಕಾಪಾಡುವಲ್ಲಿ ವೈದ್ಯರು, ದಾದಿಯರು ಮತ್ತು ರೋಗಿಗಳು ಸ್ಪಂದಿಸುವ ಕುರಿತು ಪ್ರಾತ್ಯಕ್ಷಿಕೆಯೊಂದಿಗೆ ವಿವರಿಸಿದರು.
ಈ ಸಂದರ್ಭದಲ್ಲಿ ಶಸ್ತ್ರ ಚಿಕಿತ್ಸೆ ವಿಭಾಗದ ಸಹ ಪ್ರಾಧ್ಯಾಪಕ ಡಾ. ವಿಕ್ರಂ ಸಿಂದಗಿಕರ, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಸಾಲ್ಮನ್ ಚೋಪಡೆ, ಡಾ. ಪ್ರಸಾದ ಬಿರಾದಾರ, ಡಾ. ಅಶ್ವಿನ್ ಸೇರಿದಂತೆ ಸುಮಾರು 120 ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು
ಪ್ರಾಧ್ಯಾಪಕ ಮಂಜುನಾಥ ಪಾಟೀಲ ಸ್ವಾಗತಿಸಿ, ವಂದಿಸಿದರು.