ವಿಜಯಪುರ ಜಿಲ್ಲೆಯಲ್ಲಿ ಸೆ.25ರಂದು ಜನತಾ ದರ್ಶನ- ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜನೆಗೆ ಡಿಸಿ ಟಿ. ಭೂಬಾಲನ ಸೂಚನೆ

ವಿಜಯಪುರ: ಜಿಲ್ಲಾ ಮಟ್ಟದ ಸಾರ್ವಜನಿಕರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜನತಾ ದರ್ಶನ  ಕಾರ್ಯಕ್ರಮ ಹಮ್ಮಿಕೊಂಡು ಪರಿಹಾರ ಒದಗಿಸಲು ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಸೆ.25ರಂದು ಬೆಳಿಗ್ಗೆ 10 ಗಂಟೆಗೆ    ನಗರದ ಕಂದಗಲ್ ಹನುಮಂತರಾಯ ರಂಗಮAದಿರದಲ್ಲಿ ಆಯೋಜಿಸಿದ ಜನತಾ ದರ್ಶನ ಕಾರ್ಯಕ್ರಮಕ್ಕೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ ಸೂಚನೆ ನೀಡಿದ್ದಾರೆ. 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನತಾ ದರ್ಶನ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಆಯೋಜಿಸಿರುವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ಹೆಚ್ಚಿನ ಜನರು ಭಾಗವಹಿಸಲಿದ್ದು, ಸ್ಥಳಾವಕಾಶ ನೋಡಿಕೊಂಡು ರಂಗಮAದಿರದ ಹೊರಭಾಗದಲ್ಲಿಯೂ ಸಹ ಆಸನ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸ್ವೀಕೃತವಾಗುವ ಅಹವಾಲುಗಳಿಗೆ ತಕ್ಷಣ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಪೂರ್ವಸಿದ್ಧತೆ ಕೈಗೊಳ್ಳಬೇಕು. ಜನತಾ ದರ್ಶನದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದAತೆ ಜನಜಂಗುಳಿವಾಗದAತೆ ನೋಡಿಕೊಂಡು ವ್ಯವಸ್ಥಿತವಾಗಿ ಸಾರ್ವಜನಿಕರ ಅಹವಾಲು ಕುಂದುಕೊರತೆÀ ಸ್ವೀಕಾರ ವ್ಯವಸ್ಥೆ ಕಲ್ಪಿಸಬೇಕು.

ಸಾರ್ವಜನಿಕರಿಂದ ಸಲ್ಲಿಕೆಯಾಗುವ ಅಹವಾಲುಗಳಿಗೆ ಸ್ಥಳದಲ್ಲಿಯೇ ನೋಂದಣಿ ಮಾಡಿಕೊಳ್ಳಲು 15 ಕೌಂಟರ್‌ಗಳ ವ್ಯವಸ್ಥೆ  ಮಾಡಿ, ಸಾರ್ವಜನಿಕರಿಂದ ಸಲ್ಲಿಕೆಯಾದ ಅಹವಾಲುಗಳನ್ನು  ಸಾರ್ವಜನಿಕ ಕುಂದು ಕೊರತೆ ನಿವಾರಣಾ ವ್ಯವಸ್ಥೆ (ಐಪಿಜಿಆರ್‌ಎಸ್)ಯಲ್ಲಿ ನೊಂದಾಯಿಸಿಕೊಳ್ಳಬೇಕು.  ಇದಕ್ಕೆ ಅವಶ್ಯಕವಿರುವ ಕಂಪ್ಯೂಟರ್, ಪ್ರಿಂಟರ್, ವಿದ್ಯುತ್ ಸಂಪರ್ಕ ಸೇರಿದಂತೆ ಎಲ್ಲ  ತಾಂತ್ರಿಕ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಎಲ್ಲ ಕೌಂಟರ್ ಮೇಲ್ವಿಚಾರಣೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ವಿಜಯಪುರದಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ ಅಧ್ಯಕ್ಷತೆಯಲ್ಲಿ ಜನತಾ ದರ್ಶನ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು

ವ್ಯವಸ್ಥಿವಾಗಿ ಜನತಾ ದರ್ಶನ ಕಾರ್ಯಕ್ರಮ ನಿರ್ವಹಣೆಗಾಗಿ ಕೆಬಿಜೆಎನ್‌ಎಲ್,  ಇಂಡಿ ಹಾಗೂ ಆಲಮಟ್ಟಿ ಎಸ್‌ಎಲ್‌ಓ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ವಿವಿಧ ನಿಗಮಗಳು, ಹೆಸ್ಕಾಂ, ಗ್ರಾಮೀಣ ಕುಡಿಯುವ ನೀರು, ಸಹಕಾರ ಸಂಘಗಳು, ಸೇರಿದಂತೆ ವಿವಿಧ ಇಲಾಖೆಗಳಿಂದ ಓರ್ವ ಲ್ಯಾಪಟಾಪ್ ಆಪರೇಟ್‌ರ್‌ನ್ನು  ಎನ್‌ಐಸಿ ಇಲಾಖೆಯಿಂದ ಸೂಕ್ತ ತರಬೇತಿ ಒದಗಿಸಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಿದ್ಧತೆ ಕೈಗೊಳ್ಳಲಾಗುವುದರಿಂದ  ಸಂಬAಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಸಿಬ್ಬಂದಿಗಳನ್ನು ನಿಯೋಜನೆಗೆ ಕ್ರಮ ವಹಿಸುವಂತೆ ಸೂಚಿಸಿದ ಅವರು, ಎಲ್ಲ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಜನತಾ ದರ್ಶನ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಜನತಾ ದರ್ಶನ ಕಾರ್ಯಕ್ರಮದಲ್ಲಿ ನಾನಾ ಇಲಾಖೆಗಳ ನಾನಾ ವಿಷಯಗಳ ಕುರಿತು ಸಾರ್ವಜನಿಕರು ತಮ್ಮ ಅಹವಾಲುಗಳನ್ನು ತೋಡಿಕೊಳ್ಳುತ್ತಾರೆ. ಈ ಸಂದರ್ಭದಲ್ಲಿ ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲು ಇಲಾಖೆಯ ಎಲ್ಲ ಯೋಜನೆ, ಕಾರ್ಯಕ್ರಮಗಳ ಕುರಿತು ಅರಿವು ಹೊಂದಿದÀ, ತಾಳ್ಮೆಯಿಂದ ವಿವರಿಸುವ, ಕ್ರೀಯಾಶೀಲ ತಾಲೂಕಾ ಮಟ್ಟದ ಅಧಿಕಾರಿಗಳನ್ನು ತರಬೇತುಗೊಳಿಸಿ ನಿಯೋಜಿಸಬೇಕು. ನಿಯೋಜಿತ ಅಧಿಕಾರಿಗಳು ಸಹ ಸಾರ್ವಜನಿಕರಿಂದ ಸೌಜನ್ಯಯುತವಾಗಿ ನಡೆದುಕೊಳ್ಳಬೇಕು ಎಂದು ಸೂಚಿಸಿದರು.

ಕಾರ್ಯಕ್ರಮ ನಡೆಯುವ ಆವರಣದಲ್ಲಿ ನಿರಂತರ ವಿದ್ಯುತ್ ವ್ಯವಸ್ಥೆ, ವೈ-ಫೈ ವ್ಯವಸ್ಥೆ, ಇಂಟರ್‌ನೆಟ್, ಕಂಪ್ಯೂಟರ್, ಆಸನಗಳ ವ್ಯವಸ್ಥೆ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು ಕಾರ್ಯಕ್ರಮದಲ್ಲಿ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು ಕಡ್ಡಾಯವಾಗಿ ಹಾಜರಿರಬೇಕು. ಎಂದು ಸೂಚಿಸಿದರು.

ಸಾರ್ವಜನಿಕರು ಕುಂದು ಕೊರತೆ ನಿವಾರಣಾ ವ್ಯವಸ್ಥೆ (IPGRS)  https://ipgrs.karnataka.gov.in ತಂತ್ರಾಂಶದಲ್ಲಿ ದಾಖಲಿಸುವುದರೊಂದಿಗೆ ಪರಿಹಾರ ಕಂಡುಕೊಳ್ಳಬಹುದು.  ಸಾರ್ವಜನಿಕರು ತಮ್ಮ ಅಹವಾಲುಗಳನ್ನು ನೋಂದಾಯಿಸಲು 1902ಗೆ ಕರೆ ಮಾಡುವ ಮೂಲಕವೂ ಸಹ ನೋಂದಾಯಿಸಿಕೊಳ್ಳಬಹುದಾಗಿದೆ.. ಈ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಲಿದ್ದು, ಸಾರ್ವಜನಿಕರು ತಮ್ಮ ಅಹವಾಲು-ಕುಂದು ಕೊರತೆಗಳನ್ನು ಖುದ್ದಾಗಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.

ಇತ್ತೀಚೆಗೆ ನಡೆದ ಮುಖ್ಯಮಂತ್ರಿಗಳ ಸಭೆಯ ನಿರ್ದೇಶದಂತೆ  ಕೃಷಿ ಇಲಾಖೆ ಗೊಬ್ಬರ ಮತ್ತು ಬೀಜ ದಾಸ್ತಾನು ಇರಿಸಿಕೊಳ್ಳಬೇಕು. ಈ ಮಾಹೆಯೊಳಗೆ ನಿಗದಿತ ಗುರಿಯಂತೆ ಬೆಳೆ ಸಮೀಕ್ಷೆ ಪೂರ್ಣಗೊಳಿಸಬೇಕು. ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ತ್ವರಿತವಾಗಿ ಸ್ಪಂದಿಸಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು. ಉಪವಿಭಾಗಾಧಿಕಾರಿಗಳು ತಮ್ಮ ಹಂತದಲ್ಲಿ ಪ್ರಕರಣಕ್ಕೆ ಸಂಬAಧಿಸಿದAತೆ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ನಿಗದಿತವಾಗಿ ಕಾಲಕಾಲಕ್ಕೆ ನಡೆಸಬೇಕು. ಸಿಂಧುತ್ವ ಪ್ರಮಾಣ ಪತ್ರ ಶೀಘ್ರ ವಿಲೇವಾರಿಗೆ ಕ್ರಮ ವಹಿಸಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಅರ್ಹರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಪ್ರಾಥಮಿಕ ಶಾಲೆಯಲ್ಲಿನ ಖಾಲಿ ಕೊಠಡಿಗಳನ್ನು ಗುರುತಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸರ್ವೇ ಮಾಡಿ ವರದಿ ಸಲ್ಲಿಸಬೇಕು.  ಅಂಗನವಾಡಿ ಕಟ್ಟಡಕ್ಕಾಗಿ ಸೂಕ್ತ ಜಾಗವನ್ನು ಗುರುತಿಸಬೇಕು. ಜಿಲ್ಲೆಯಲ್ಲಿರುವ ಪ್ರಸವಪೂರ್ವ ಲಿಂಗ ಪತ್ತೆ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಕಾಲಕಾಲಕ್ಕೆ ತಪಾಸಣೆ ನಡೆಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಬರುವ ವಸತಿ ನಿಲಯಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರು, ಚರಂಡಿ, ಶೌಚಾಲಯ ಸೇರಿದಂತೆ ಎಲ್ಲ ಮೂಲಭೂತ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅಗತ್ಯ ಸೂಚನೆ ನೀಡಿದರು.

ಎಲ್ಲ ಇಲಾಖೆ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆ ಹಾಗೂ ದೂರವಾಣಿ ಕರೆಗಳಿಗೆ ಸ್ಪಂದಿಸಬೇಕು. ಜಿಲ್ಲಾ ಮಟ್ಟದ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಕಾರ್ಯನಿರ್ವಹಿಸಬೇಕು. ಸಕಾಲ ಯೋಜನೆಯಲ್ಲಿ ದಾಖಲೆಯಾಗುವ ಅರ್ಜಿಗಳನ್ನು ತ್ವರಿತ ವಿಲೇವಾರಿಗೆ ಕ್ರಮವಹಿವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ವಿಜಯಪುರ ಉಪವಿಭಾಗಾಧಿಕಾರಿ ಬಸವಣಪ್ಪ ಕಲಶೆಟ್ಟಿ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ ಮೆಕ್ಕಳಕಿ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌