ವಿಜಯಪುರ ಡಿಸಿಸಿ ಬ್ಯಾಂಕಿಗೆ ರೂ. 14.30 ಕೋ. ನಿವ್ವಳ ಲಾಭ- ಬ್ಯಾಂಕಿನ ಅಧ್ಯಕ್ಷ ಶಿವಾನಂದ ಎಸ್. ಪಾಟೀಲ
ವಿಜಯಪುರ: ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ(DCC) ಬ್ಯಾಂಕು 2022-23ನೇ ಆರ್ಥಿಕ ವರ್ಷದಲ್ಲಿ ರೂ. 14.30 ಕೋ. ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಶಿವಾನಂದ ಎಸ್. ಪಾಟೀಲ ತಿಳಿಸಿದ್ದಾರೆ. ಬ್ಯಾಂಕಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕು ತನ್ನ ಎಲ್ಲ ಕಾರ್ಯಕ್ರಮಗಳನ್ನು ವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸಿ, ಆದಾಯ ತೆರಿಗೆ ಪೂರ್ವ ರೂ. 19.31 ಕೋ. ಲಾಭ ಗಳಿಸಿದ್ದು, ನಿಯಮಾನುಸಾರ ರೂ. 5.01 ಕೋ. ತೆರಿಗೆ ಪಾವತಿಸಿ ನಂತರ ರೂ. 14.30 ಕೋ. ನಿವ್ವಳ ಲಾಭ ಗಳಿಸಿದೆ. ಇದು […]
ಸೆ. 25 ರಂದು ಜನತಾ ದರ್ಶನ- ಅಹವಾಲು ಕುಂದು, ಕೊರತೆ ದಾಖಲಿಸಿ ಪರಿಹಾರ ಪಡೆದುಕೊಳ್ಳಲು ಡಿಸಿ ಟಿ. ಭೂಬಾಲನ ಮನವಿ
ವಿಜಯಪುರ: ಜಿಲ್ಲಾ ಮಟ್ಟದ ಅಹವಾಲುಗಳನ್ನು ಆಲಿಸಲು ಸೆ. 25ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಬೆ. 10 ಗಂಟೆಗೆ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲು-ಕುಂದು ಕೊರತೆ ದಾಖಲಿಸಿ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕರು ಹಲವಾರು ರೀತಿಯ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲು ಸಲ್ಲಿಸುತ್ತಿರುವುದರಿಂದ ಸದರಿ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ […]
ಆವಾಸ್ ಯೋಜನೆ ಅನುದಾನ ಬಿಡುಗಡೆ- ಜಿಪಿಎಸ್ ಮಾಡಿಸಲು ಅಧಿಕಾರಿಗಳಿಗೆ ಎಂ.ಎಲ್ಸಿ ಸುನೀಲಗೌಡ ಬಿ. ಪಾಟೀಲ ಸೂಚನೆ
ವಿಜಯಪುರ: ಬಬಲೇಶ್ವರ ಹಾಗೂ ತಿಕೋಟಾ ತಾಲೂಕು ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಪ್ರಧಾನಮಂತ್ರಿ ಆವಾಸ ಯೋಜನೆಯಡಿ 2021-22 ನೇ ಸಾಲಿನಲ್ಲಿ ವಸತಿ ರಹಿತರಿಗೆ ಮನೆ ಕಟ್ಟಲು ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ. ಆದ್ದರಿಂದ ಕೂಡಲೇ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಈ ಮನೆಗಳ ಜಿ.ಪಿ.ಎಸ್ ಮಾಡಿ, ಫಲಾನುಭವಿಗಳು ಮನೆಕಟ್ಟಿಕೊಳ್ಳಲು ಅನುಕೂಲ ಮಾಡಿಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತಿಕೋಟಾ ತಾಲೂಕಿನ ಅರಕೇರಿ, ಬಾಬಾನಗರ, ಬರಟಗಿ, ಬಿಜ್ಜರಗಿ, ಘೋಣಸಗಿ, ಹೊನವಾಡ, ಜಾಲಗೇರಿ, ಕನಮಡಿ, ಕೋಟ್ಯಾಳ, […]
ಬಡ ವಿದ್ಯಾರ್ಥಿಗಳು ವೈದ್ಯರಾಗುವ ಕನಸು ನನಸು ಮಾಡಲು ಸಹಾಯ ಹಸ್ತ ಚಾಚಿದ ಸಚಿವ ಎಂ. ಬಿ. ಪಾಟೀಲ
ವಿಜಯಪುರ: ನೀಟ್ ಪಾಸಾಗಿ ವೈದ್ಯಕೀಯ ಸೀಟು ಸಿಕ್ಕರೂ ಆರ್ಥಿಕ ಸಮಸ್ಯೆಯಿಂದಾಗಿ ಪರದಾಡುತ್ತಿದ್ದ ಇಬ್ಬರು ಬಡ ವಿದ್ಯಾರ್ಥಿಗಳಿಗೆ ಎಂ.ಬಿ.ಬಿ.ಎಸ್. ಪ್ರವೇಶ ಪಡೆಯಲು ನೆರವಾಗುವ ಮೂಲಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ಸಹಾಯ ಹಸ್ತ ಚಾಚಿದ್ದಾರೆ. ಬಬಲೇಶ್ವರ ತಾಲೂಕಿನ ಸಂಗಾಪೂರ ಎಸ್. ಎಚ್. ಮತ್ತು ವಿಜಯಪುರ ತಾಲೂಕಿನ ಬರಟಗಿ ಗ್ರಾಮದ ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣ ವೆಚ್ಚವನ್ನು ಬಿ. ಎಲ್. ಡಿ. ಇ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಸಚಿವ ಎಂ. […]