ಸೆ. 25 ರಂದು ಜನತಾ ದರ್ಶನ- ಅಹವಾಲು ಕುಂದು, ಕೊರತೆ ದಾಖಲಿಸಿ ಪರಿಹಾರ ಪಡೆದುಕೊಳ್ಳಲು ಡಿಸಿ ಟಿ. ಭೂಬಾಲನ ಮನವಿ

ವಿಜಯಪುರ: ಜಿಲ್ಲಾ ಮಟ್ಟದ ಅಹವಾಲುಗಳನ್ನು ಆಲಿಸಲು ಸೆ. 25ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಬೆ. 10 ಗಂಟೆಗೆ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲು-ಕುಂದು ಕೊರತೆ ದಾಖಲಿಸಿ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕರು ಹಲವಾರು ರೀತಿಯ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲು ಸಲ್ಲಿಸುತ್ತಿರುವುದರಿಂದ ಸದರಿ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರ ಒದಗಿಸಲು ಪ್ರತಿ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡು ಪರಿಹಾರ ಕಲ್ಪಿಸುವಂತೆ ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಾರ್ವಜನಿಕರು ತಮ್ಮ ಕುಂದು ಕೊರತೆ ಅಹವಾಲುಗಳನ್ನು ಸಾರ್ವಜನಿಕ ಕುಂದು ಕೊರತೆ ನಿವಾರಣಾ ವ್ಯವಸ್ಥೆ IPGRS https://ipgrs.karnataka.gov.in ತಂತ್ರಾಂಶದಲ್ಲಿ ದಾಖಲಿಸುವುದರೊಂದಿಗೆ ತಮ್ಮ ಅಹವಾಲು-ಕುಂದು ಕೊರತೆಗಳನ್ನು ದಾಖಲಿಸಿ ಸಹ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌