ಪ್ರತಿಷ್ಠಿತ ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕಿಗೆ ಈ ವರ್ಷ ರೂ. 1.22 ಕೋ. ನಿವ್ವಳ ಲಾಭ- ಅಧ್ಯಕ್ಷ ವಿಜಯಕುಮಾರ ಡಿ. ಇಜೇರಿ
ವಿಜಯಪುರ: ಜಿಲ್ಲೆಯ ಪ್ರತಿಷ್ಠಿತ 1.22 ಕೋ. ನಿವ್ವಳ ಲಾಭ- ಅಧ್ಯಕ್ಷ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದಲ್ಲಿ ರೂ. 1. 22 ಕೋ. ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ವಿಜಯಕುಮಾರ ಡಿ. ಇಜೇರಿ ತಿಳಿಸಿದ್ದಾರೆ. ನಗರದ ಆಶ್ರಮ ರಸ್ತೆಯಲ್ಲಿರುವ ಶ್ರೀ ಪರಮಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಸಮುದಾಯ ಭವನದಲ್ಲಿ ನಡೆದ ಬ್ಯಾಂಕಿನ 111ನೇ ಸರ್ವ ಸಾಧಾರಣ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದ ಸಹಕಾರಿ ರಂಗದಲ್ಲಿ ಬೆಳೆದ ಕೆಲವೇ ಬ್ಯಾಂಕುಗಳಲ್ಲಿ ನಮ್ಮ […]
ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ -4ರ ಯೋಜನೆ- ಕಾಮಗಾರಿಗಳ ಪರಿಶೀಲನೆ ನಡಸಿದ ಡಿಸಿ ಟಿ. ಭೂಬಾಲನ್
ವಿಜಯಪುರ: ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಕೋಲ್ಹಾರ, ಮನಗೂಳಿ ಹಾಗೂ ನಿಡಗುಂದಿ ಪಟ್ಟಣ ಪಂಚಾಯಿತಿ ಮತ್ತು ಬಸವನ ಬಾಗೇವಾಡಿ ಪುರಸಭೆ ವ್ಯಾಪ್ತಿಯಡಿ ಕೈಗೊಂಡಿರುವ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ-4ರ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಕೋಲ್ಹಾರ, ಮನಗೂಳಿ ಹಾಗೂ ನಿಡಗುಂದಿ ಮತ್ತು ಬಸವನ ಬಾಗೇವಾಡಿಗೆ ಭೇಟಿ ನೀಡಿದ ಅವರು, ಈ ಕಾಮಗಾರಿಯ ಸಿಸಿ ರಸ್ತೆ ಹಾಗೂ ಡಾಂಬರ ರಸ್ತೆಗಳ ಪರಿಶೀಲನೆ ನಡೆಸಿದರು. ಅಂದಾಜು ಪತ್ರಿಕೆಯಂತೆ ಕಾಮಗಾರಿಯ ಅಳತೆ ಹಾಗೂ ಗುಣಮಟ್ಟ ಕಾಪಾಡಿಕೊಂಡು ಕಾರ್ಯ ನಿರ್ವಹಿಸಲು ಅಭಿಯಂತರರು, […]
ಪೌರ ಕಾರ್ಮಿಕರ ಯೋಜನೆಗಳ ಸದುಪಯೋಗ ಪಡೆದು ಉತ್ತಮ ಬದುಕು ರೂಪಿಸಿಕೊಳ್ಳಿ- ಮಹಾದೇವ ಮುರಗಿ ಕರೆ
ವಿಜಯಪುರ: ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಪೌರ ಕಾರ್ಮಿಕರ ಪಾತ್ರ ಅತೀ ಮುಖ್ಯವಾಗಿದೆ. ಪೌರ ಕಾರ್ಮಿಕರ ಹಿತ ಕಾಪಾಡಲು ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಉತ್ತಮ ಬದುಕು ರೂಪಿಸಿಕೊಳ್ಳುವಂತೆ ಪೌರ ಕಾರ್ಮಿಕರಿಗೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಕರೆ ನೀಡಿದ್ದಾರೆ. ನಗರಾಭಿವೃದ್ದಿ ಇಲಾಖೆ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ವತಿಯಿಂದ ನಗರದ ಬೇಗಂ ತಲಾಬ್ ಆವರಣದಲ್ಲಿ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಪೌರಕಾರ್ಮಿಕರ ಸೇವೆ […]
ರಾಜ್ಯಕ್ಕೆ ಮೂರು ಜನ ಡಿಸಿಎಂ ಅಗತ್ಯವಿಲ್ಲ- ಸಿಎಂ, ಡಿಸಿಎಂ ಸಮರ್ಥರಿದ್ದಾರೆ- ಸಚಿವ ಶಿವಾನಂದ ಎಸ್. ಪಾಟೀಲ
ವಿಜಯಪುರ: ರಾಜ್ಯಕ್ಕೆ ಮೂರು ಡಿಸಿಎಂ ಗಳ ಅವಶ್ಯಕತೆ ಇಲ್ಲ. ಮುಖ್ಯಮಂತ್ರಿಯೂ ಸಮರ್ಥರಿದ್ದಾರೆ. ಉಪಮುಖ್ಯಮಂತ್ರಿಯೂ ಸಮರ್ಥರಿದ್ದಾರೆ. ಅವಶ್ಯಕತೆಗೆ ಅನುಗುಣವಾಗಿ ಹೈಕಮಾಂಡ್ ನಿರ್ಣಯ ಮಾಡಿದರೆ ಅದು ಹೈಕಮಾಂಡಿಗೆ ಬಿಟ್ಟಿದ್ದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಮತ್ತು ಎ. ಪಿ. ಎಂ. ಸಿ ಸಚಿವ ಶಿವಾನಂದ ಎಸ್. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಧ್ಯಕ್ಕೆ ಹೊಸದಾಗಿ ಡಿಸಿಎಂ ಗಳ ಅವಶ್ಯಕತೆ ಇಲ್ಲ. ಐದರಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ ಎಂದು ಅವರು ಹೇಳಿದರು. ಸಾಮಾಜಿಕ ನ್ಯಾಯ […]