ಯುವಜನತೆ ಧಾರ್ಮಿಕ ಮನೋಭಾವ, ದೇಶಾಭಿಮಾನ ಬೆಳೆಸಿಕೊಳ್ಳಬೇಕು- ರಮೇಶ ಜಿಗಜಿಣಗಿ

ವಿಜಯಪುರ: ಯುವಜನತೆ ಧಾರ್ಮಿಕ ಮನೋಭಾವ ಮತ್ತು ದೇಶಾಭಿಮಾನ ಬೆಳೆಸಿಕೊಂಡು ಮುನ್ನಡೆಯಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಕರೆ ನೀಡಿದ್ದಾರೆ. ನಗರದ ಪ್ರತಿಷ್ಠಿತ ಗಜಾನನ ಮಹಾಮಂಡಳ ವತಿಯಿಂದ ಶ್ರೀ ಶಿವಾಜಿ ಮಹಾರಾಜರ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಉತ್ಸವ ಮೂರ್ತಿಯ ವಿಸರ್ಜನೆ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಬಳಿಕ ಮಾತನಾಡಿದ ಅವರು, ಗಜಾನನ ಮಹಾಮಂಡಳ ಸಮಾಜಮುಖಿ ಕಾರ್ಯ ಚಟುವಟಿಕೆಗಳಿಗೆ ಸದಾ ಪ್ರೋತ್ಸಾಹಿಸುತ್ತಾ ಬಂದಿದೆ.  ಈ ಮಹಾಮಂಡಳದ ಕಾರ್ಯ ಚಟುವಟಿಕೆಗಳಿಗೆ ಸದಾ ಸಾಥ್ ನೀಡುತ್ತಾ ಬಂದಿದ್ದೇನೆ.  ಮುಂದೆಯೂ ಕೂಡ ಈ […]

ಪ್ರಕೃತಿ ವಿಕೋಪ ತಡೆಗಟ್ಟಲು ಸಂಬಂಧಿಸಿದ ಇಲಾಖೆಗಳು ಸದಾ ಸರ್ವ ಸನ್ನದ್ದವಾಗಿರಬೇಕು- ಮಹಾದೇವ ಮುರಗಿ

ವಿಜಯಪುರ: ಜಿಲ್ಲೆಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳನ್ನು ನಿರ್ವಹಿಸಲು ಸಂಬಂಧಿಸಿದ ಇಲಾಖೆಗಳು ಸರ್ವ ಸನ್ನದ್ಧವಾಗಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಮಟ್ಟದ ವಿಕೋಪ ನಿರ್ವಹಣಾ ಯೋಜನೆ ವಿಜಯಪುರ ಹಾಗೂ ಕಂದಾಯ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ವಿಪತ್ತು ನಿರ್ವಹಣಾ ಕುರಿತು ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಕೃತಿ ವಿಕೋಪಗಳನ್ನು ನಿರ್ವಹಿಸಲು ಮುಂಚಿತವಾಗಿ ಯೋಜನೆಗಳನ್ನು ರೂಪಿಸಿಕೊಳ್ಳಬೇಕು.  ಮಳೆಗಾಲದಲ್ಲಿ ಸಂಭವಿಸಬಹುದಾದ ಅತಿವೃಷ್ಟಿಯ ಕುರಿತು ಮುನ್ನೆಚ್ಚರಿಕೆ ಕ್ರಮ […]

ಕೊಟ್ಪಾ ಕಾಯ್ದೆ ಸಮರ್ಪಕ ಅನುಷ್ಠಾನ ಮಾಡಿ- ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಯಲ್ಲಿ ಕೊಟ್ಪಾ ಕಾಯ್ದೆಯ ಸೆಕ್ಷನ್-4ರ ನಾಮಫಲಕದ ಗೋಡೆ ಬರಹ ಬರೆಸುವುದು ಹಾಗೂ ನಾಮಫಲಕಗಳನ್ನು ಶಾಲಾ-ಕಾಲೇಜಿನ ಪ್ರವೇಶ ದ್ವಾರದಲ್ಲಿ ಅಳವಡಿಸುವುದು ಸೇರಿದಂತೆ ಜಿಲ್ಲೆಯಾದ್ಯಂತ ಕೊಟ್ಪಾ ಕಾಯ್ದೆ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೊಟ್ಪಾ ಕಾಯ್ದೆ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರತಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೊಟ್ಪಾ ಕಾಯ್ದೆಯ ನಾಮಫಲಕ ಗೋಡೆ ಬರಹ ಬರೆಸಬೇಕು. ಶಾಲಾ ಕಾಲೇಜಿನ ಕಂಪೌಂಡಿನಿಂದ 100 ಮೀಟರ್ ಅಂತರದಲ್ಲಿ […]