ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಮುಧೋಳದ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಪುನಶ್ಚೇತನಗೊಳಿಸಲು ಅಲ್ಪಾವಧಿ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮುಧೋಳ ತಾಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2023-24 ನೇ ವರ್ಷದ ಕಬ್ಬು ಅರೆಯುವ ಕಾರ್ಯವನ್ನು ಲೀಸ್ ಮೂಲಕ ಪುನರಾರಂಭಿಸುವ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಕಬ್ಬು ಅರೆಯುವ ಕಾರ್ಯ ಪ್ರಾರಂಭವಾಗಬೇಕು. ಪುನಶ್ಚೇತನದಿಂದ ರೈತರಿಗೂ ಅನುಕೂಲ ವಾಗಬೇಕು. ಅಲ್ಪಮಟ್ಟದ ಹೂಡಿಕೆಗೆ ಸಿದ್ದವಿರುವ ಸಂಸ್ಥೆಗಳು ಟೆಂಡರ್ ನಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಅವರು ಹೇಳಿದರು. ಈ […]

ಗುಮ್ಮಟ ನಗರಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ- ಗಮನ ಸೆಳೆದ ಭವ್ಯ ಮೆರವಣಿಗೆ

ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಮುಸ್ಲಿಂ ಬಾಂಧವರು ಸಂಭ್ರಮದಿಂದ ಈದ್- ಮಿಲಾದ್ ಆಚರಿಸಿದರು.  ಪ್ರವಾದಿ ಮಹಮ್ಮದ್‌ ಪೈಗಂಬರ್‌ ಅವರ ಜನ್ಮ ದಿನವಾದ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಮೆರವಣಿಗೆ ನಡೆಸಲಾಯಿತು.  ಧರ್ಮಗುರುಗಳು, ಸಮಾಜದ ಮುಖಂಡರ ನೇತೃತ್ವದಲ್ಲಿ ನಡೆದ ಜೂಲೂಸ್‌ ನಲ್ಲಿ ಸಾವಿರಾರು ಜನರು ಪಾಲ್ಗೋಂಡರು.  ಮೆರವಣಿಗೆ ನಡೆದ ರಸ್ತೆಗಳಲ್ಲಿ ಹಬ್ಬದ ಶುಭ ಕೋರುವ ಬ್ಯಾನರ್‌ಗಳು ರಾರಾಜಿಸಿದವು.  ನಗರದ ನಾನಾ ಮಸೀದಿ ಮತ್ತು ದರ್ಗಾಗಳಿಗೆ ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು.  ಮುಸ್ಲಿಮರ ಪವಿತ್ರ ಕ್ಷೇತ್ರಗಳಾದ ಮೆಕ್ಕಾ ಮತ್ತು ಮದೀನಾದ […]

ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ನಾನಾ ಗ್ರಾಮಗಳಿಗೆ ಗಾಂಧಿ ಗ್ರಾಮ ಪುರಸ್ಕಾರ- ಸುನೀಲಗೌಡ ಪಾಟೀಲ ಸಂತಸ- ಸಕಲ ನೆರವಿನ ಭರವಸೆ

ವಿಜಯಪುರ: ಜನಪರ ಕಾರ್ಯಗಳ ಮೂಲಕ ಈ ಬಾರಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಎಲ್ಲ ಗ್ರಾಮ ಪಂಚಾಯಿತಿಗಳ ಸಾಧನೆಗಳು ಹೆಮ್ಮೆ ತರಿಸಿದೆ ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಬಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಿಜಯಪುರ ಜಿಲ್ಲೆಯ ಆಹೇರಿ, ಮುತ್ತಗಿ, ನಾಗರಬೆಟ್ಟ, ಯಂಕಂಚಿ, ಚವಡಿಹಾಳ, ಬಿಜ್ಜರಗಿ, ಹೊನಗನಹಳ್ಳಿ, ಕೂಡಗಿ, ಆಲಮಟ್ಟಿ, ಮಿಣಜಗಿ, ರಾಮನಹಳ್ಳಿ, ಚಿಕ್ಕರೂಗಿ ಮತ್ತು ನಿವರಗಿ ಗ್ರಾಮ ಪಂಚಾಯಿತಿಗಳು ಈ ಬಾರಿ ಗಾಂಧಿಗ್ರಾಮ […]

ಶಾಸಕ ಯತ್ನಾಳ ಭಾವಚಿತ್ರವಿದ್ದ ಫ್ಲೆಕ್ಸ್ ಹರಿದು ಹಾಕಿದ ಕಿಡಿಗೇಡಿಗಳು- ಆರೋಪಿಗಳ ವಿರುದ್ಧ ಕ್ರಮಕ್ಕೆ ರಾಘವ ಅಣ್ಣಿಗೇರಿ ಆಗ್ರಹ- ತನಿಖೆ ನಡೆಸಿ ಕ್ರಮ- ಎಸ್ಪಿ ಸೋನಾವಣೆ

ವಿಜಯಪುರ: ಗಣೇಶೋತ್ಸವದ ಅಂಗವಾಗಿ ನಗರದ ಶಿವಾಜಿ ಚೌಕಿನಲ್ಲಿ ಹಾಕಲಾಗಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಭಾವಚಿತ್ರವಿದ್ದ ಬೃಹತ್ ಫ್ಲೆಕ್ಸ್ ನ್ನು ಕಿಡಿಗೇಡಿಗಳು ಹರಿದು ಹಾಕಿದ್ದು, ಯತ್ನಾಳ ಬೆಂಬಲಿಗರಿಂದ ಆಕ್ರೋಶ ವ್ಯಕ್ತವಾಗಿದೆ. ನಗರದ ಶಿವಾಜಿ ಚೌಕ್ ಬಳಿ ಗಣೇಶೋತ್ಸವಕ್ಕೆ ಶುಭಾಷಯ ಕೋರಿ ಯತ್ನಾಳ ಬೆಂಬಲಿಗರು ಸುಮಾರು 30 ಅಡಿ ಎತ್ತರದ ಬೃಹತ್ ಫ್ಲೆಕ್ಸ್ ಹಾಕಿದ್ದರು.  ಈ ಫ್ಲೆಕ್ಸ್ ನಲ್ಲಿ ಯತ್ನಾಳ ಫೋಟೋವನ್ನು ಹಾಕಲಾಗಿದೆ.  ವಿಷಯ ತಿಳಿಯುತ್ತಿದ್ದಂತೆ ವಿವೇಕಾನಂದ ಸೇನೆ ಅಧ್ಯಕ್ಷ ರಾಘವ ಅಣ್ಣಿಗೇರಿ ಮತ್ತೀತರ ಮುಖಂಡರು ಸ್ಥಳಕ್ಕೆ […]

ಪ್ರಾಣಿಜನ್ಯ ರೋಗಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲಾಧಿಕಾರಿ ಟಿ. ಭೂಬಾಲನ ಸೂಚನೆ

ವಿಜಯಪುರ: ಪಶುಸಂಗೋಪನಾ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಪ್ರಾಣಿಜನ್ಯ ರೋಗಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿರುವ ನಾಯಿಗಳ ಮಾಹಿತಿ ಸಂಗ್ರಹಿಸಬೇಕು. ಪ್ರಾಣಿಜನ್ಯ ರೋಗಗಳ  ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯೊಂದಿಗೆ ಪಶುಸಂಗೋಪನಾ ಇಲಾಖೆ ಕೈ ಜೋಡಿಸಿ, ಬೀದಿ ನಾಯಿಗಳಿಗೆ ಚುಚ್ಚುಮದ್ದು ಹಾಕುವುದು, ಜನಸಂದಣಿ ಇರುವ ಸ್ಥಳಗಳಲ್ಲಿ ರೋಗಗಳ ಕುರಿತು ತಿಳುವಳಿಕೆ ಮೂಡಿಸಿ, ರೋಗ ಕುರಿತು […]

ನೀರಾವರಿ ಸಲಹಾ ಸಮಿತಿ ತೀರ್ಮಾನದಂತೆ ಆಲಮಟ್ಟಿ ಜಲಾಷಯದ ಎಲ್ಲ ಕಾಲುವೆಗಳಿಗೆ ನೀರು ಹರಿಸಲು ರೈತರಿಂದ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಐಸಿಸಿ ಸಭೆಯ ತೀರ್ಮಾನದಂತೆ ಆಲಮಟ್ಟಿಯಲ್ಲಿರುವ ಲಾಲ ಬಹದ್ದೂರ ಶಾಸ್ತ್ರಿ ಜಲಾಶಯದ ವ್ಯಾಪ್ತಿಯ ಎಲ್ಲ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಟಿ. ಭೂಬಾಲನ ಅವರ ಮೂಲಕ ಸಮಿತಿಯ ಅಧ್ಯಕ್ಷ ಮತ್ತು ಸಚಿವ ಆರ್. ಬಿ. ತಿಮ್ಮಾಪುರ ಅವರಿಗೆ ಮನವಿ ಪತ್ರ ಸಲ್ಲಿಸಿದರು.   ಈ ಸಂದರ್ಭದಲ್ಲಿ ಮಾತನಾಡಿದ, ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಕಳೆದ ಆಗಷ್ಟ 21 ರಂದು ಆಲಮಟ್ಟಿಯಲ್ಲಿ […]

ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಜಿಲ್ಲೆಯಲ್ಲಿ ಪ್ರವಾಸೊದ್ಯಮ ಅಭಿವೃದ್ದಿಗೆ ಒತ್ತು ನೀಡಲಾಗುವುದು- ಟಿ. ಭೂಬಾಲನ

ವಿಜಯಪುರ: ಜಿಲ್ಲೆಯ ಐತಿಹಾಸಿಕ ಸ್ಮಾರಕಗಳಿಗೆ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ದಿಗೆ ಒತ್ತು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ ಅವರು ಹೇಳಿದ್ದಾರೆ  ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಪ್ರವಾಸೋದ್ಯಮ ಮಂತ್ರಾಲಯ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ರೋಟರಿ ಕ್ಲಬ್-ಮಾನ್ಯುಮೆಂಟಲ್ ಹೆರಿಟೇಜ್ ಸಿಟಿ, ಆರ್. ಕೆ. ಎಂ ಆಯರ್ವೇದ ಮೆಡಿಕಲ್ ಕಾಲೇಜ್ ಹಾಗೂ ಹಾಸ್ಪಿಟಲ್ ಮತ್ತು ಪಿಜಿ ರಿಸರ್ಚ ಸೆಂಟರ್ ಇವರ ಸಹಯೋಗದಲ್ಲಿ ನಗರದ […]