ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಮುಧೋಳದ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಪುನಶ್ಚೇತನಗೊಳಿಸಲು ಅಲ್ಪಾವಧಿ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮುಧೋಳ ತಾಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2023-24 ನೇ ವರ್ಷದ ಕಬ್ಬು ಅರೆಯುವ ಕಾರ್ಯವನ್ನು ಲೀಸ್ ಮೂಲಕ ಪುನರಾರಂಭಿಸುವ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಬೆಂಗಳೂರಿನಲ್ಲಿ ಸಿಎಂ ಸಿದ್ಧರಾಮಯ್ಯ ರನ್ನ‌ ಸಹಕಾರ ಸಕ್ಕರೆ ಕಾರ್ಖಾನೆ ಪುನಶ್ಚೇತನ ಕುರಿತು ಸಭೆ ನಡೆಸಿದರು

ಕಬ್ಬು ಅರೆಯುವ ಕಾರ್ಯ ಪ್ರಾರಂಭವಾಗಬೇಕು. ಪುನಶ್ಚೇತನದಿಂದ ರೈತರಿಗೂ ಅನುಕೂಲ ವಾಗಬೇಕು. ಅಲ್ಪಮಟ್ಟದ ಹೂಡಿಕೆಗೆ ಸಿದ್ದವಿರುವ ಸಂಸ್ಥೆಗಳು ಟೆಂಡರ್ ನಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಭಾವತಿ ಹಿರೇಮಠ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಆಯುಕ್ತ ರವಿಕುಮಾರ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌