ಬ್ಯಾನರ್ ಹರಿದ ಕಿಡಿಗೇಡಿಗಳನ್ನು ಗಡಿಪಾರು ಮಾಡಲು ಆಗ್ರಹ- ಬಿಜೆಪಿ ಮುಖಂಡರಿಂದ ಡಿಸಿ, ಎಸ್ಪಿಗೆ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಗಣೇಶೋತ್ಸವದ ಅಂಗವಾಗಿ ನಗರದಲ್ಲಿ ಅಳವಡಿಸಲಾಗಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಬೃಹತ್ ಫ್ಲೆಕ್ಸ್ ಹರಿದಿರುವ ಆರೋಪಿಗಳನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ವಿಜಯಪುರ ಮಹಾನಗರ ಪಾಲಿಕೆ ಸದಸ್ಯರು ಮತ್ತು ಬಿಜೆಪಿ ಮುಖಂಡರು ಗುಮ್ಟ ನಗರಿಯಲ್ಲಿ ಡಿಸಿ ಮತ್ತು ಎಸ್ಪಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.  ಗುರುವಾರ ನಗರದ ಶಿವಾಜಿ ವೃತ್ತದಲ್ಲಿ ಹಾಕಲಾಗಿದ್ದ ಶಾಸಕ ಬಸನಗೌಡ ಪಾಟೀ ಯತ್ನಾಳ ಅವರ ಬೃಹತ್ ಫ್ಲೆಕ್ಸ್ ನ್ನು ಕಿಡಿಗೇಡಿಗಳು ಹರಿದು ಹಾಕಿದ್ದರು.  ಈ ವಿಷಯ ತಿಳಿಯುತ್ತಿದ್ದಂತೆ ಯತ್ನಾಳ ಬೆಂಬಲಿಗರು ಶಿವಾಜಿ ಚೌಕಿಗೆ […]

ಐತಿಹಾಸಿಕ ಗೋಳಗುಮ್ಮಟವನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆ ಮಾಡುವಂತೆ ಪ್ರಧಾನಿಗೆ ಸಂಸದ ರಮೇಶ ಜಿಗಜಿಣಗಿ ಪತ್ರ

ವಿಜಯಪುರ: ನಗರದ ವಿಶ್ವವಿಖ್ಯಾತ ಗೋಳಗುಮ್ಮಟವನ್ನು ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಸಂಸದ ರಮೇಶ ಜಿಗಜಿಣಗಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿರೆ. ಐತಿಹಾಸಿಕ ವಿಜಯಪುರವು 80ಕ್ಕೂ ಹೆಚ್ಚು ಭಾರತೀಯ ಪುರಾತತ್ವ ಸರ್ವೇಕ್ಷಣೆ ಇಲಾಖೆ(ಎಎಸ್‌ಐ) ಸಂರಕ್ಷಿತ ಸ್ಮಾರಕಗಳನ್ನು ಹೊಂದಿದೆ.  ಅತೀ ಹೆಚ್ಚು ಸ್ಮಾರಕಗಳನ್ನು ಹೊಂದಿರುವ ವಿಜಯಪುರ ಭಾರತದ ಅತಿ ದೊಡ್ಡ ಪ್ರವಾಸಿ ಕೇಂದ್ರವಾಗಿದೆ.  ರೋಮ್‌ನ ಸೇಂಟ್ ಪೀಟರ್ಸ್ ಬೆಸಿಲಿಕಾದ ನಂತರದ ಗಾತ್ರದಲ್ಲಿ ಇದುವರೆಗೆ ನಿರ್ಮಿಸಲಾದ ಎರಡನೇ ಅತಿದೊಡ್ಡ ಗುಮ್ಮಟ […]

ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಅಖಂಡ ಕರ್ನಾಟಕ ರೈತ ಸಂಘದಿಂದ ಗುಮ್ಮಟ ನಗರಿಯಲ್ಲಿ ಪ್ರತಿಭಟನೆ

ವಿಜಯಪುರ: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವದನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ವತಿಯಿಂದ ವಿಜಯಪುರದಲ್ಲಿ ಪ್ರತಿಭಟನೆ ನಡೆಸಾಯಿತು.  ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಪ್ರತಿನಿತ್ಯ ತಮಿಳುನಾಡಿಗೆ 5000 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದ್ದು, ಕೂಡಲೇ ನೀರು ಹರಿಸುವುದನ್ನು ಸ್ಥಗಿತಗೊಳಿಸಬೇಕು.  ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರದವರು ಕಾವೇರಿ ಜಲಾಶಯದ ಈ ಸದ್ಯ ಇರುವ ನೀರಿನ ಮಟ್ಟವನ್ನು ಪಲಶೀಲನೆ ಮಾಡದೆ ತಮಿಳುನಾಡಿಗೆ 5000 ಕ್ಯೂಸೆಕ್ ನೀರು […]

ದೇಶದಲ್ಲೇ ಮೊದಲ ಹೈಬ್ರಿಡ್ ಟಿವಿಎಆರ್ ವಿಧಾನದ ಮೂಲಕ ತಿರುಚಿಕೊಂಡಿದ್ದ ಹೃದಯದ ಮಹಾಅಪಧಮನಿಯ ಕವಾಟದ ಬಲಾವಣೆ

ಬೆಂಗಳೂರು: ಹೃದಯದಿಂದ ರಕ್ತಸಾಗಿಸುವ ಮಹಾಪಧನಿಯ ಕವಾಟವು ಸಂಪೂರ್ಣ ತಿರುಚಿಕೊಂಡು, ಹೃದಯ ವೈಫಲ್ಯದಿಂದ ಬಳಲುತ್ತಿದ್ದ ೬೪ ವರ್ಷದ ಮಹಿಳೆಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಟ್ರಾನ್ಸ್‌ಕ್ಯಾಥೆಟರ್ ಮಹಾಪಧಮನಿಯ ವಾಲ್ವ್ ರಿಪ್ಲೇಸ್‌ಮೆಂಟ್( TAVR) ವಿಧಾನದ ಮೂಲಕ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಇದು ಭಾರತದಲ್ಲೇ ಮೊದಲ ಬಾರಿಗೆ  ಹೈಬ್ರಿಡ್‌ TAVR ವಿಧಾನದ ಮೂಲಕ ನಡೆಸಿದ  ಶಸ್ತ್ರಚಿಕಿತ್ಸೆಯಾಗಿದೆ. ಅತ್ಯಂತ ಸವಾಲಿನ ಹಾಗೂ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನಡೆಸಲು ಹೃದ್ರೋಗ ತಜ್ಞರು, ಹೃದಯ ಶಸ್ತ್ರಚಿಕಿತ್ಸಕರು, ಸಾಮಾನ್ಯ ಶಸ್ತ್ರಚಿಕಿತ್ಸಕರು, ಆಂತರಿಕ ಔಷಧ ತಜ್ಞರು, ಗ್ಯಾಸ್ಟ್ರೋಎಂಟರಾಲಜಿಸ್ಟ್‌, ನೆಫ್ರಾಲಜಿಸ್ಟ್‌ ಮತ್ತು ಅರಿವಳಿಕೆಶಾಸ್ತ್ರಜ್ಞ ಸೇರಿದಂತೆ […]