ಗಾಂಧಿ, ಶಾಸ್ತ್ರಿ ಜನ್ಮದಿನ ಅ. 2ರಂದೇ ಲಿಂ. ಜಯದೇವ ಜಗದ್ಗುರುಗಳ ಜಯಂತಿ ಆಚರಿಸಿ- ಗಾಣಿಗ ಗುರುಪೀಠದ ಜಗದ್ಗುರು ಕರೆ

ವಿಜಯಪುರ: ಮಹಾತ್ಮ ಗಾಂಧಿ ಮತ್ತು ಲಾಲ ಬಹದ್ದೂರ ಶಾಸ್ತ್ರಿ ಅವರ ಜಯಂತಿ ದಿನ ಅ. 2ರಂದೇ ರಾಜ್ಯಾದ್ಯಂತ ಗಾಣಿಗ ಗುರುಪೀಠದ ಪ್ರಥಮ ಜಗದ್ಗುರು ಲಿಂ. ಜಯದೇವ ಜಗದ್ಗುರುಗಳ ಜಯಂತೋತ್ಸವ ಆಚರಿಸೋಣ ಎಂದು ಗಾಣಿಗ ಗುರುಪೀಠದ ಡಾ. ಜಯಬಸವ ಕುಮಾರ ಜಗದ್ಗುರು ಸಮಾಜಕ್ಕೆ ಕರೆ ಕೊಟ್ಟಿದ್ದಾರೆ. ನಗರದ ವನಶ್ರೀ ಸಂಸ್ಥಾನ ಮಠದಲ್ಲಿ ನಡೆದ ಲಿಂ. ಜಯದೇವ ಜಗದ್ಗುರುಗಳ 85ನೇ ಜಯಂತೋತ್ಸವ ಮತ್ತು 14ನೇ ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಮಹಾತ್ಮಾ ಗಾಂಧಿ ಮತ್ತು ಶಾಸ್ತ್ರಿಯವರ ತತ್ವಾದರ್ಶಗಳಂತೆ […]

ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ

ವಿಜಯಪುರ: ರಾಷ್ಟೃಪಿತ ಮಹಾತ್ಮ ಗಾಂಧಿಜೀಯವರ 154ನೇ ಮತ್ತು ಮಾಜಿ ಪ್ರಧಾನಿ ಲಾಲಬಹಾದ್ದೂರ ಶಾಸ್ತ್ರೀಜಿಯವರ 119ನೇ ಜಯಂತಿಯನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ, ಭಾರತ ಬಹುಬಾಷೆ, ಬಹುಸಂಸ್ಕೃತಿ, ಬಹುಜನಾಂಗ ಹಾಗೂ ಬಹುಜಾತಿ ವ್ಯವಸ್ಥೆ ಹೊಂದಿರುವ ದೇಶವಾಗಿದೆ.  ಹೀಗಾಗಿ ಇಲ್ಲಿ ಎಲ್ಲರೂ ಒಂದಾಗಿ ಬಾಳುವುದು ಮತ್ತು ಎಲ್ಲ ಜನಾಂಗವನ್ನು ಬೆಸೆಯಲು ಅಹಿಂಸೆ ಮಾರ್ಗವೊಂದೆ ಎಂದು ಅಹಿಂಸಾ ಮಾರ್ಗದಿಂದಲೇ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು ರಾಷ್ಟ್ರಪಿತ ಮಹಾತ್ಮ ಗಾಂಧಿ.  ಅವರ ಮಾರ್ಗದಲ್ಲಿ […]

ಗಾಂಧಿ, ಶಾಸ್ತ್ರಿ ದೇಶಕಂಡ ಅಪ್ರತೀಮ ನಾಯಕರು- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ ಶಾಸ್ತ್ರಿ ಅವರು ಈ ದೇಶಕ್ಕೆ ಅಮೂಲ್ಯವಾದ ಕೊಡುಗೆಗಳನ್ನು ನೀಡಿದ್ದು, ಇಂಥ ಮಹಾನ್ ವ್ಯಕ್ತಿಗಳ ಪ್ರಾಮಾಣಿಕತೆ, ತ್ಯಾಗ, ನಿಷ್ಠೆಯಂತಹ ಉತ್ತಮ ಸಂದೇಶಗಳು, ತತ್ವಾದರ್ಶಗಳು ಹಾಗೂ ಜೀವನ ಮೌಲ್ಯಗಳನ್ನು ಮುಂದಿನ ಯುವ ಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಇವರ ಸಹಯೋಗದಲ್ಲಿ ಅ. 2ರಂದು ನಗರದ ಗಾಂಧಿ ಭವನದಲ್ಲಿ ಆಯೋಜಿಸಲಾದ ಮಹಾತ್ಮ ಗಾಂಧೀಜಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಅವರ ಜಯಂತಿ […]

ತಾಂತ್ರಿಕತೆ ಬೆಳೆದಂತೆ ಅವಿಭಕ್ತ ಕುಟುಂಬದಿಂದ ವಿಭಕ್ತವಾದಿ ಮಾರ್ಪಡುತ್ತಿವೆ- ಎಡಿಸಿ ಮಹಾದೇವ ಮುರಗಿ ಕಳವಳ

ವಿಜಯಪುರ: ತಾಂತ್ರಿಕತೆ ಬೆಳೆದಂತೆ ಅವಿಭಕ್ತ ಕುಟುಂಬಗಳು ವಿಭಕ್ತ ಕುಟುಂಬಗಳಾಗಿ ಮಾರ್ಪಡುತ್ತಿವೆ ಎಂದು ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ ಕಳವಳ ವ್ಯಕ್ತಪಡಿಸಿದ್ದಾರೆ.  ನಗರದ ಜಿ. ಪಂ. ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ […]

ಬ್ಯಾನರ್ ಪ್ರಕರಣ ಸಿಬಿಐಗೆ ವಹಿಸಲಿ- ಖೊಟ್ಟಿ ಮತದಾನದ ಕುರಿತು ಸಿದ್ದೇಶ್ವರ ದೇವಸ್ಥಾನದಲ್ಲಿ ಶಾಸಕರು ಪ್ರಮಾಣ ಮಾಡಲಿ- ಅಬ್ದುಲ್ ಹಮೀದ್ ಮುಶ್ರಿಫ್

ವಿಜಯಪುರ: ನಗರದಲ್ಲಿ ಇತ್ತೀಚೆಗೆ ಬ್ಯಾನರ್ ಹರಿದ ಪ್ರಕರಣ ಮತ್ತು ವಿಧಾನಸಭೆ ಚುನಾವಣೆ  ಸಂದರ್ಭದಲ್ಲಿ ನಡೆದ ಖೊಟ್ಟಿ ಮತದಾನ ಪ್ರಕರಣಗಳನ್ನು ಸಿಬಿಐ ತನಿಖೆ ಮಾಡಿಸಬೇಕು ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರಿಫ್ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ನಗರ ಶಾಸಕರು ಅನಾವಶ್ಯಕವಾಗಿ ಪಾಕಿಸ್ತಾನ ಹೆಸರಿನ ಮೇಲೆ ರಾಜಕೀಯ ಮಾಡುತ್ತಿದ್ದಾರೆ.  ವಿಧಾನ ಸಭೆ ಚುನಾವಣೆ ಸಂದರ್ಭದಲ್ಲಿ ಚಿಂಚೋಳಿ, ಬೀದರ, ನಾಗಠಾಣ, ಸೇಡಂ ಸೇರಿದಂತೆ ಹಲವಾರು ಕಡೆಯಿಂದ ಜನರನ್ನು ಕರೆಯಿಸಿ ಖೊಟ್ಟಿ ಮತದಾನ ಮಾಡಿಸಿ ಗೆದ್ದಿದ್ದಾರೆ.  ಈ ಕುರಿತು ಸಾಕ್ಷಿ […]

ಕ್ರೀಡಾಸಕ್ತಿ ಬೆಳೆಸಿಕೊಳ್ಳಲು ಯುವಕರಿಗೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಕರೆ

ವಿಜಯಪುರ: ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕವಾಗಿ ಗಟ್ಟಿಗೊಳ್ಳುವುದರೊಂದಿಗೆ ಮಾನಸಿಕ ಸದೃಢತೆ ಹೊಂದಲು ಯುವಕರು ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು. ನಗರದ ಡಾ. ಬಿ. ಆರ್. ಅಂಬೇಡ್ಕರ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯ 13 ತಾಲೂಕುಗಳಲ್ಲಿ ವಿಜೇತರಾದ ಕ್ರೀಡಾಪಟುಗಳು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆಯನ್ನು ಹೊಂದಿದ್ದು, ಕ್ರೀಡಾ ನಿಯಮಗಳಿಗೆ ಬದ್ಧರಾಗಿ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತರಬೇಕೆಂದು ಕರೆ ನೀಡಿದರು. ಕ್ರೀಡೆ […]

ವಂದೇ ಭಾರತ ರೈಲು ಸೇವೆ ಸೋಲಾಪುರದಿಂದ ವಿಜಯಪುರದವರೆಗೆ ವಿಸ್ತರಿಸಲು ಪ್ರಯತ್ನ- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಮಹಾರಾಷ್ಟ್ರದ ಸೋಲಾಪುರವರೆಗೆ ಸಂಚರಿಸುವ ವಂದೆ ಭಾರತ ರೈಲು ಸೇವೆಯನ್ನು ಬಸವನಾಡು ವಿಜಯಪುರದವರೆಗೆ ವಿಸ್ತರಿಸಲು ಪ್ರಯತ್ನಿಸುವುದಾಗಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ವಿಜಯಪುರ ತಾಲೂಕಿನ ಅಲಿಯಾಬಾದ ಬಳಿ ನೂತನವಾಗಿ ನಿರ್ಮಿಸಲಾಗಿರುವ ರೇಲ್ವೆ ಗೂಡ್ಸಶೆಡ್ ಉದ್ಘಾಟಿಸಿ ಅವರು ಮಾತನಾಡಿದರು. ವಿಜಯಪುರ ರೈಲ್ವೆ ನಿಲ್ದಾಣದ  ಜನದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ನಿಲ್ದಾಣದಲ್ಲಿ ಪ್ಯಾಸೆಂಜರ್ ಹಾಗೂ ಎಕ್ಸಪ್ರೆಸ್ ರೈಲುಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ತಡೆಯಲು ಪ್ರತ್ಯೇಕವಾದ ಗೂಡ್ಸಶೆಡ್ ಸೌಲಭ್ಯವನ್ನು ಕಲ್ಪಿಸಲು ಅಲಿಯಾಬಾದ್‌ನಲ್ಲಿ ಗೂಡ್ಸ್ ಟರ್ಮಿನಲ್‌ ಅಭಿವೃದ್ದಿ ಪಡಿಸಲಾಗಿದೆ.  ವಿಜಯಪುರ ನಗರದ […]