ವಿಜಯಪುರ: ನಗರದ ಸಂಚಾರ ದಟ್ಟಣೆ ಮತ್ತೀತರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಲು ಪೊಲೀಸ್ ಇಲಾಖೆ ಹೊಸ ಹೆಲ್ಪಲೈನ್ ವ್ಯವಸ್ಥೆ ಮಾಡಿದೆ.
ಈ ಕುರಿತು ಮಾಹಿತಿ ನೀಡಿರುವ ಎಸ್ಪಿ ಸೋನಾವಣೆ ರಿಷಿಕೇಶ ಭಗವಾನ, ಸಾರ್ವಜನಿಕರು 827791008 ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಅಥವಾ ವಾಟ್ಸಾಪ್ ಗೆ ಸಂದೇಶ ಕಳುಹಿಸುವ ಮೂಲಕ ದೂರು ನೀಡಬಹುದು ಎಂದು ತಿಳಿಸಿದ್ದಾರೆ. ಈ ಹೊಸ ನಂಬರಿಗೆ ಕರೆ ಮಾಡಿ ಅಥವಾ ವಾಟ್ಸಾಪ್ ಮೂಲಕ ಮಾಹಿತಿ ನೀಡಿದರೆ, ಟ್ರಾಫಿಕ್ ಜಾಮ್ ಸೇರಿದಂತೆ ಸಂಚಾರಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.