ನೀರು ಪೂರೈಕೆ ವಿಳಂಬ ಸಹಿಸಲ್ಲ- 10 ದಿನಗಳಲ್ಲಿ ವಿಜಯಪುರ ನಗರಕ್ಕೆ ಸಮರ್ಪಕ ನೀರು ಪೂರೈಸಿ- ಡಿಸಿ ಟಿ. ಭೂಬಾಲನ ಖಡಕ್ ಸೂಚನೆ

ವಿಜಯಪುರ: ನಗರದ ಕುಡಿಯುವ ನೀರಿನ ಪೂರೈಕೆಯಲ್ಲಿ ಆಗುವ ವಿಳಂಬವನ್ನು ಸಹಿಸುವುದಿಲ್ಲ. ಯಾವುದೇ ತಾಂತ್ರಿಕ, ಸಿವಿಲ್ ಕಾಮಗಾರಿ ಸಮಸ್ಯೆ ನಿವಾರಿಸಿಕೊಂಡು 10 ದಿನಗಳೊಳಗಾಗಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ವಿಷಯದಲ್ಲಿ ಲೋಪ-ವಿಳಂಬ ಅನುಸರಿಸಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ನಗರದ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ […]

ಅಸಮರ್ಪಕ ವಿದ್ಯುತ್ ಪೂರೈಕೆ, ಮಹಿಷಿ ದಸರಾ ವಿಚಾರ- ರಾಜ್ಯ ಸರಕಾರದ ವಿರುದ್ಧ ಮಾಜಿ ಸಚಿವ ಎಸ್. ಎ. ರಾಮದಾಸ ವಾಗ್ದಾಳಿ

ವಿಜಯಪುರ: ಸರಕಾರದ ಮುಂದಾಲೋಚನೆ ಕೊರತೆಯಿಂದಾಗಿ ರಾಜ್ಯದಲ್ಲಿ ವಿದ್ಯುತ್ ಕೊರತೆ ಉಂಟಾಗಿದೆ ಎಂದು ಮಾಜಿ ಸಚಿವ ಎಸ್. ಎ. ರಾಮದಾಸ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಡ್ ಶೆಡ್ಡಿಂಗ್ ವಿಚಾರವಾಗಿ ಖಾರವಾಗಿ ಪ್ರತಿಕ್ರಿಯೆ ನೀಡಿದರು. ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರದಲ್ಲಿದ್ದಾಗ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ದೇಶದಲ್ಲಿ ಕರ್ನಾಟಕದಲ್ಲಿಯೇ ಅತಿಹೆಚ್ಚು ಕರೆಂಟ್ ಉತ್ಪಾದನೆ ಆಗುತ್ತಿತ್ತು ಎಂದು ಹೇಳಿದ ಅವರು, ಆದರೆ ಈ ಸರಕಾರ ಬಂದ ಮೇಲೆ ವಿದ್ಯುತ್ ಸಮಸ್ಯೆ ಹೆಚ್ಚಾಗಿದೆ.  ಇದು ದುರ್ದೈವದ […]

ಸಿ ಎಂ ಇಬ್ರಾಹಿಂ ಜೆಡಿಎಸ್ ಬಿಡಲ್ಲ- ಜಿ. ಟಿ. ದೇವೇಗೌಡ

ವಿಜಯಪುರ: ಜೆ. ಡಿ. ಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಜೆಡಿಎಸ್ ತೊರೆಯುವುದಿಲ್ಲ ಎಂದು ಜಾತ್ಯತೀತ ಜನತಾ ದಳದ ಕೋರ್ ಕಮಿಟಿ ಅಧ್ಯಕ್ಷ ಜಿ. ಟಿ. ದೇವೇಗೌಡ ಹೇಳಿದ್ದಾರೆ. ವಿಜಯಪುರ ನಗರದ ಕಿತ್ತೂರು ರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೋಳ್ಳಲು ಆಗಮಿಸಿದ್ದ ಜೆಡಿಎಸ್ ಹಿರಿಯ ಮುಖಂಡರೂ ಆಗಿರುವ ಜಿ. ಟಿ. ದೇವೇಗೌಡ, ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಬಿಜೆಪಿ ಜೆಡಿಎಸ್ ಮೈತ್ರಿಯ ಕಾರಣದಿಂದ ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಸಿ. ಎಂ. ಇಬ್ರಾಹಿಂ ಪಕ್ಷ […]