ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು- ಬಿ. ಎಂ. ಕೋಕರೆ
ವಿಜಯಪುರ: ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರಕಾರ ನೇಮಕಾತಿಯಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು ಎಂದು ರಾಜ್ಯ ವ್ಹಾಲಿಬಾಲ್ ಸಂಸ್ಥೆಯ ಉಪಾಧ್ಯಕ್ಷ ಬಿ. ಎಂ. ಕೋಕರೆ ಆಗ್ರಹಿಸಿದ್ದಾರೆ. ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಔಷಧಿಯ ಮಹಾವಿದ್ಯಾಲಯ ಮತ್ತು ಸಂಶೋಧನೆ ಕೇಂದ್ರದ ಆಶ್ರಯದಲ್ಲಿ ಬುಧವಾರ ಪ್ರಾರಂಭವಾದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕಲಬುರಗಿ ವಲಯ ಪುರುಷರ ಹಾಗೂ ಮಹಿಳೆಯರ ವಿಭಾಗದ ವ್ಹಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು. ವಿಜಯಪುರ […]
ಯುದ್ಧಪೀಡಿತ ಇಸ್ರೆಲ್ ನಿಂದ ಬಸವನಾಡಿಗ ವಾಪಸ್ಸಾದ ಸಹಾಯಕ ಪ್ರಾಧ್ಯಾಪಕ ಸುಮೇಶ ಕೆ. ಜಿ.
ವಿಜಯಪುರ: ಯುದ್ಧ ಪೀಡಿತ ಇಸ್ರೆಲಿನಲ್ಲಿ ಸಿಲುಕಿದ್ದ ಬಸವನಾಡು ವಿಜಯಪುರದ ಸಹಾಯಕ ಪ್ರಾಧ್ಯಾಪಕ ಸುಮೇಶ ಕೆ. ಜಿ. ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ಇಸ್ರೇಲ್ ನ ಜೆರುಸೆಲಂನಿಂದ ವಿಮಾನ ಮೂಲಕ ಸ್ವದೇಶಕ್ಕೆ ಆಗಮಿಸಿದ ಅವರು, ವಿಜಯಪುರಕ್ಕೆ ಬಂದ ಬಳಿಕ ಜಿಲ್ಲಾಧಿಕಾರಿ ಟಿ. ಭೂಬಾಲನ ಅವರನ್ನು ಭೇಟಿ ಮಾಡಿದರು. ಅಲ್ಲದೇ, ಇಸ್ರೆಲ್ ನಲ್ಲಿ ತಾವು ಎದುರಿಸಿದ ಪರಿಸ್ಥಿತಿಯ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಸುಮೇಶ ಕೆ. ಜಿ. ಅವರಿಗೆ ಸಿಹಿ ತಿನ್ನಿಸಿ ಸಂತಸ ವ್ಯಕ್ತಪಡಿಸಿದರು. ಈ […]
ರಾಜ್ಯ ಕುರುಬರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ರವಿ ಕಿತ್ತೂರ ಅವಿರೋಧ ಆಯ್ಕೆ
ವಿಜಯಪುರ: ಜಿಲ್ಲಾಸ್ಪತ್ರೆಯ ಎ ಆರ್ ಟಿ ವಿಭಾಗದ ಹಿರಿಯ ಆಪ್ತ ಸಮಾಲೋಚಕಮುಖ್ಯಸ್ಥ ರವಿ ಕಿತ್ತೂರ ಅವರು ರಾಜ್ಯ ಪ್ರದೇಶ ಕುರುಬರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 35 ಜನ ಪದಾಧಿಕಾರಿಗಳು ಚುನಾವಣೆಯಲ್ಲಿ 34 ಜನ ಅವಿರೋಧವಾಗಿ ಆಯ್ಕೆಯಾಗಿದ್ದು, ಇವರಲ್ಲಿ ರವಿ ಕಿತ್ತೂರ ಅವರು ಸಂಘಟನಾ ಕಾರ್ಯದರ್ಶಿಯಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಕಳೆದ ಬಾರಿ ಅವರು ಸಹ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರ ಮಾರ್ಗದರ್ಶನದಲ್ಲಿ ಸಚಿವರಾದ ಬೈರತಿ ಸುರೇಶ, ಮಾಜಿ ಸಚಿವರಾದ ಎಚ್. […]
ಡಾ. ಸಂಗಣ್ಣ ಎಲ್. ಲಕ್ಕಣ್ಣವರ ವಿಜಯಪುರ ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿಯಾಗಿ ವರ್ಗಾವಣೆ
ವಿಜಯಪುರ: ಜಿಲ್ಲಾಸ್ಪತ್ರೆಯ ನಿಕಟಪೂರ್ವ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಣ್ಣ ಎಲ್. ಲಕ್ಕಣ್ಣವರ ಅವರನ್ನು ವಿಜಯಪುರ ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಇತ್ತೀಚೆಗಷ್ಟೇ ವಿಜಯಪುರ ಜಿಲ್ಲಾಸ್ಪತ್ರೆಯಿಂದ ಡಾ. ಲಕ್ಕಣ್ಣವರ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ, ಯಾವುದೇ ಸ್ಥಳ ತೋರಿಸಿರಲಿಲ್ಲ. ಈಗ ಅವರನ್ನು ವಿಜಯಪುರ ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಎರಡು ವರ್ಷಗಳ ಅವಧಿಗೆ ನಗರಾಭಿವೃದ್ಧಿ ಇಲಾಖೆಯ ವಶಕ್ಕೆ ನೀಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಅಧಿಸೂಚನೆ […]