ವಿಜಯಪುರ: ಜಿಲ್ಲಾಸ್ಪತ್ರೆಯ ನಿಕಟಪೂರ್ವ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಣ್ಣ ಎಲ್. ಲಕ್ಕಣ್ಣವರ ಅವರನ್ನು ವಿಜಯಪುರ ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಇತ್ತೀಚೆಗಷ್ಟೇ ವಿಜಯಪುರ ಜಿಲ್ಲಾಸ್ಪತ್ರೆಯಿಂದ ಡಾ. ಲಕ್ಕಣ್ಣವರ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ, ಯಾವುದೇ ಸ್ಥಳ ತೋರಿಸಿರಲಿಲ್ಲ. ಈಗ ಅವರನ್ನು ವಿಜಯಪುರ ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಎರಡು ವರ್ಷಗಳ ಅವಧಿಗೆ ನಗರಾಭಿವೃದ್ಧಿ ಇಲಾಖೆಯ ವಶಕ್ಕೆ ನೀಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ.