ಅಕ್ಟೋಬರ್ 16, 17 ರಂದು ಸಚಿವ ಎಂ. ಬಿ. ಪಾಟೀಲ ವಿಜಯಪುರ ಜಿಲ್ಲಾ ಪ್ರವಾಸ- ಇಲ್ಲಿದೆ ಕಾರ್ಯಕ್ರಮಗಳ ವೇಳಾಪಟ್ಟಿ
ವಿಜಯಪುರ: ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ಅಕ್ಟೋಬರ್ 16 ರಂದು ಸೋಮವಾರ ಮತ್ತು ಅಕ್ಟೋಬರ್ 17ರಂದು ಮಂಗಳವಾರ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅ. 16ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಸಭೆ ನಡೆಸಲಿದ್ದಾರೆ. ನಂತರ ಜಿಲ್ಲೆಯಲ್ಲಿರುವ ವಿದ್ಯುತ್ ಲೋಡ್ ಶೆಡ್ಡಿಂಗ್ ಸಮಸ್ಯೆ, ಮುಂದಿನ ಜನತಾ ದರ್ಶನ ಕಾರ್ಯಕ್ರಮ ನಿಗದಿ ಮಾಡುವುದು, ಕೋಟಿ ವೃಕ್ಷ ಅಭಿಯಾನ ಅಂಗವಾಗಿ ಆಯೋಜಿಸಲಾಗಿರುವ […]
ಭೂತನಾಳ ತಾಂಡಾ ಶ್ರೀ ದುರ್ಗಾದೇವಿ ದೇವಾಲಯ ಅಭಿವೃದ್ಧಿಗೆ ಕೇಂದ್ರದಿಂದ ರೂ. 1 ಕೋ. ವಿಶೇಷ ಅನುದಾನ ಮಂಜೂರು ಮಾಡಿಸಿದ ಸಂಸದ ರಮೇಶ ಜಿಗಜಿಣಗಿ
ವಿಜಯಪುರ: ನಗರದ ಹೊರವಲಯದ ಭೂತನಾಳ ತಾಂಡಾದಲ್ಲಿರುವ ಪುರಾತನ ಶ್ರೀ ದುರ್ಗಾದೇವಿ ದೇವಾಲಯದ ಸರ್ವತೋಮುಖ ಪ್ರಗತಿಗಾಗಿ ಸಂಸದ ರಮೇಶ ಜಿಗಜಿಣಗಿ ಪುರಾತತ್ವ ಸಂಗ್ರಹಾಲಯ ಹಾಗೂ ಪರಂಪರೆ ಇಲಾಖೆಯಿಂದ ರೂ. 1 ಕೋ. ಅನುದಾನ ಮಂಜೂರು ಮಾಡಿಸಿದ್ದಾರೆ ಎಂದು ನಗರಸಭೆ ಮಾಜಿ ಸದಸ್ಯ ಬಾಬು ಚವ್ಹಾಣ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸಂಸದರು ಇಲಾಖೆಯೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಂಡು ರೂ. 1 ಕೋ. ವಿಶೇಷ ಅನುದಾನ ಮಂಜೂರು ಮಾಡಿಸಿದ್ದಾರೆ. ಸಂಸದರು ಅಭಿವೃದ್ಧಿ ಪರ ರಾಜಕಾರಣಿಯಾಗಿದ್ದು, ಆಧ್ಯಾತ್ಮಿಕತೆಗೂ […]
ಜಿಲ್ಲೆಯ ಎಲ್ಲ 9 ಸಕ್ಕರೆ ಕಾರ್ಖಾನೆಗಳು ನ. 1ರಿಂದ ಕಬ್ಬು ನುರಿಸುವ ಕಾರ್ಯ ಆರಂಭಿಸಬೇಕು- ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ
ವಿಜಯಪುರ: ಸರಕಾರದ ಆದೇಶದಂತೆ ಜಿಲ್ಲೆಯ ಎಲ್ಲ ಒಂಬತ್ತು ಸಕ್ಕರೆ ಕಾರ್ಖಾನೆಗಳು ನವೆಂಬರ್ 1ರಿಂದ ಕಬ್ಬು ನುರಿಸುವ ಕಾರ್ಯ ಆರಂಭಿಸಿ ಕಬ್ಬು ನುರಿಸಿದ 14 ದಿನಗಳಲ್ಲಿ ನಿಗದಿ ಪಡಿಸಿದ ಎಫ್. ಆರ್. ಪಿ ದರದಂತೆ ಕಬ್ಬಿನ ಬಿಲ್ ಪಾವತಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾದರು. ಪ್ರಸಕ್ತ 2023-24 ನೇ ವರ್ಷದ ಕಬ್ಬು ನುರಿಸುವ ಹಂಗಾಮು ಆರಂಭಿಸುವ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಕ್ಕರೆ ಕಾರ್ಖಾನೆಗಳ ಮಾಲೀಕರ, ವ್ಯವಸ್ಥಾಪಕರು, ನಿರ್ದೇಶಕರುಗಳು, ಮುಖ್ಯ ಕಾರ್ಯ […]