ವಿಜಯಪುರ: ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ಅಕ್ಟೋಬರ್ 16 ರಂದು ಸೋಮವಾರ ಮತ್ತು ಅಕ್ಟೋಬರ್ 17ರಂದು ಮಂಗಳವಾರ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅ. 16ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಸಭೆ ನಡೆಸಲಿದ್ದಾರೆ. ನಂತರ ಜಿಲ್ಲೆಯಲ್ಲಿರುವ ವಿದ್ಯುತ್ ಲೋಡ್ ಶೆಡ್ಡಿಂಗ್ ಸಮಸ್ಯೆ, ಮುಂದಿನ ಜನತಾ ದರ್ಶನ ಕಾರ್ಯಕ್ರಮ ನಿಗದಿ ಮಾಡುವುದು, ಕೋಟಿ ವೃಕ್ಷ ಅಭಿಯಾನ ಅಂಗವಾಗಿ ಆಯೋಜಿಸಲಾಗಿರುವ ಮ್ಯಾರಾಥಾನ್ ಸಿದ್ಧತೆಗಳು ಹಾಗೂ ಇತರೆ ವಿಷಯಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಸಂಜೆ 6 ಗಂಟೆಗೆ ಜ್ಞಾನಯೋಗಶ್ರಮಕ್ಕೆ ಭೇಟಿ ನೀಡಿ ಅಧ್ಯಕ್ಷರು ಮತ್ತು ಇತರ ಸ್ವಾಮೀಜಿಗಳ ಜೊತೆ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಗುರುನಮನ ಕಾರ್ಯಕ್ರಮದ ಕುರಿತು ಚರ್ಚೆ ನಡೆಸಲಿದ್ದಾರೆ.
ಅಕ್ಟೋಬರ್ 17ರಂದು ಮಂಗಳವಾರ ಬೆಳಿಗ್ಗೆ 10 ಮಧ್ಯಾಹ್ನ 1 ಗಂಟೆಯವರೆಗೆ ತಮ್ಮ ನಿವಾಸದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಲಿದ್ದಾರ. ನಂತರ ಬಬಲೇಶ್ವರ ವಿಧಾನಸಭೆ ಕ್ಷೇತ್ರದ ಶಿರಬೂರ ಗ್ರಾಮಕ್ಕೆ ಭೇಟಿ ನೀಡಿ ಇತ್ತೀಚಿಗೆ ನಿಧನರಾದ ಬಸನಗೌಡ ಪಾಟೀಲ ಅವರ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ.
ಬಳಿಕ ಸಂಜೆ ಬೆಳಗಾವಿ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯ.ಲ್ಲಿ ತಿಳಿಸಲಾಗಿದೆ.