ಬಾಲ್ಯ ವಿವಾಹ ತಡೆಗಟ್ಟಲು ಸಾರ್ವಜನಿಕರ ಸಹಭಾಗಿತ್ವ ಅಗತ್ಯ- ಸಂತೋಷ ಕುಂದರ್
ವಿಜಯಪುರ: ಬಾಲ್ಯ ವಿವಾಹ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು. ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಸಾರ್ವಜನಿಕ ಸಹಕಾರ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಎಸ್. ಕುಂದರ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಶು ಅಭಿವೃದ್ಧಿ ಯೋಜನೆ ವಿಜಯಪುರ ನಗರ ಮತ್ತು ಗ್ರಾಮೀಣ ಇವರ ಸಹಯೋಗದಲ್ಲಿ […]
ಬಸವ ನಾಡಿಗೆ ಬಂದ ಕಿತ್ತೂರು ಚನ್ನಮ್ಮ ವಿಜಯ ವೀರಜ್ಯೋತಿ ಯಾತ್ರೆ- ಅಧಿಕಾರಿಗಳು, ಗಣ್ಯರಿಂದ ಸ್ವಾಗತ
ವಿಜಯಪುರ: ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಹೋರಾಟ ನಮ್ಮೆಲ್ಲರಿಗೂ ಸ್ಪೂರ್ತಿಯಾಗಿದೆ. ಕಿತ್ತೂರು ಚನ್ನಮ್ಮ ಅವರು ಬ್ರಿಟಿಷ್ರ ವಿರುದ್ಧ ಹೋರಾಟ ನಡೆಸಿದರು. ಅವರ ಹೋರಾಟ, ತ್ಯಾಗ, ಬಲಿದಾನ ಹಾಗೂ ಅವರ ದೇಶ ಭಕ್ತಿ ಸ್ಮರಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸೋಣ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಕಿತ್ತೂರು ಚನ್ನಮ್ಮ ಅವರ ವಿಜಯ ವೀರಜ್ಯೋತಿ ಯಾತ್ರೆಯ ರಥಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿ ಮಾತನಾಡಿದರು. ಕಿತ್ತೂರ ಚನ್ನಮ್ಮ ಅವರ ಸ್ವಾತಂತ್ರ‍್ಯ […]
ರಾಜ್ಯ ಸರಕಾರದ ವಿರುದ್ಧ ಗುಮ್ಮಟ ನಗರಿಯಲ್ಲಿ ಬಿಜೆಪಿ ಪ್ರತಿಭಟನೆ
ವಿಜಯಪುರ: ಸರಕಾರಿ ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ವಿದ್ಯುತ್ ಕಡಿತ ಹಾಗೂ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ನಗರದಲ್ಲಿ ಬೃಹತ್ ಪ್ರತಿಭಟನೆ ಜಾಥಾ ನಡೆಸಿದರು. ನಗರದ ಡಾ. ಬಿ. ಆರ್. ಅಂಬೇಡ್ಕರ ವೃತ್ತದಿಂದ ಆರಂಭವಾದ ಜಾಥಾ ಜಿಲ್ಲಾಧಿಕಾರಿಗಳ ಕಚೇರಿ ತಲುಪಿತು. ಈ ಸಂದರ್ಭದಲ್ಲಿ ಯಾವ ಅಧಿಕಾರಿಗಳೂ ಸ್ಥಳದಲ್ಲಿ ಇರದ ಕಾರಣ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಕೆಲ ಹೊತ್ತು ಧರಣಿ […]
ಕಾನಿಪ 37ನೇ ರಾಜ್ಯಮಟ್ಟದ ಪತ್ರಕರ್ತರ ಸಂಘದ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಚಿವ ಎಂ. ಬಿ. ಪಾಟೀಲ
ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕಳೆದ ಫೆ. 4 ಮತ್ತು 5 ರಂದು ನಡೆದ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಸವಿ ನೆನಪಿಗಾಗಿ ಹೊರ ತಂದ ಕರ್ನಾಟಕ ಪತ್ರಕರ್ತರ ಸ್ಮರಣ ಸಂಚಿಕೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ನಗರದಲ್ಲಿ ಬಿಡುಗಡೆ ಮಾಡಿದರು. ಜಿ. ಪಂ. ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ […]
ಔಷಧಿಗಳ ಸಂಶೋಧನೆಗಳನ್ನು ವೈದ್ಯಕೀಯ ಕ್ಷೇತ್ರಕ್ಕೆ ಪರಿಚಯಿಸುವುದು ಸಂಶೋಧಕರ ಮುಖ್ಯ ಕರ್ತವ್ಯವಾಗಿದೆ- ಡಾ. ರಂಜೀತ ಕಾಂತ
ಬಾಗಲಕೋಟೆ: ಹೊಮಿಯೋಪಥಿ ಹೊಸ ಔಷಧಿಗಳ ಸಂಶೋಧನೆಗಳನ್ನು ವೈದ್ಯಕೀಯ ಕ್ಷೇತ್ರಕ್ಕೆ ಪರಿಚಯಿಸುವುದು ಸಂಶೋಧಕರ ಮುಖ್ಯ ಕರ್ತವ್ಯವಾಗಿದೆ ಎಂದು ದೆಹಲಿಯ ಹೋಮಿಯೋಪಥಿ ಸಂಶೋಧಕ ಡಾ. ರಂಜೀತ ಕಾಂತ ಹೇಳಿದ್ದಾರೆ. ನಗರದ ಬಿವಿವಿಎಸ್ ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಹೋಮಿಯೋಪಥಿ ಔಷಧಿಗಳ ಪ್ರಮಾಣಿಕರಣ ಕುರಿತು ಆಯೋಜಿಸಲಾಗಿದ್ದ ಒಂದು ದಿನದ ಮುಂದುವರೆದ ವೈದ್ಯಕೀಯ ಶಿಕ್ಷಣ ಕಾಯಾ೯ಗಾರ ಉದ್ಘಾಟಿಸಿ ಅವರು ಮಾತನಾಡಿದರು. ಆಯುಷ್ ಇಲಾಖೆಯ ಹೋಮಿಯೋಪಥಿ ಉಪನಿದೇ೯ಶಕ ಡಾ. ಅಶ್ವಥನಾರಾಯಣ ಮಾತನಾಡಿ, ಯುವ ವೈದ್ಯರು ದುಡ್ಡಿನ ಹಿಂದೆ ಬೀಳದೇ ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು. […]