ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಪ್ರದೀಪನಾ ಸಮಾರಂಭ- ಸ್ವಾಮೀಜಿ, ಆಡಳಿತ ಮಂಡಳಿ ಪದಾಧಿಕಾರಿಗಳು ಭಾಗಿ
ವಿಜಯಪುರ: ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ 2023-24ನೇ ಕಬ್ಬು ನುರಿಸುವ ಹಂಗಾಮಿನ ಕೇನ್ ಕ್ಯಾರಿಯರ್ ಮತ್ತು ಬಾಯ್ಲರ್ ಪ್ರದೀಪನಾ ಸಮಾರಂಭ ನಡೆಯಿತು. ಕಾರ್ಖಾನೆಯ ಅಧ್ಯಕ್ಷ ಕುಮಾರ ಚಂದ್ರಕಾಂತ ದೇಸಾಯಿ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬೀಳೂರಿನ ಶ್ರೀ ಮುರುಗೇಂದ್ರ ಮಹಾಸ್ವಾಮಿ ಸಾನಿಧ್ಯ ವಹಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿ, ಮೂರು ದಶಕಗಳ ಹಿಂದೆ ಈ ಭಾಗದ ಒಡನಾಟ ಹಾಗೂ ರೈತರ ಜೀವನ ಶೈಲಿಯನ್ನು ನಾನು ನೋಡಿದ್ದೇನೆ. ಕೃಷ್ಣಾನದಿ ಮತ್ತು ನಂದಿ […]
ಕಾಲುವೆಗಳು ರೈತರ ಆಸ್ತಿ- ನೀರಿನಾಸೆಗೆ ಒಡೆಯಬೇಡಿ- ಎಂಎಲ್‌ಸಿ ಸುನೀಲಗೌಡ ಪಾಟೀಲ ಕಳಕಳಿ
ವಿಜಯಪುರ: ಕಾಲುವೆಗಳು ರೈತರ ಆಸ್ತಿ. ನೀರಿಗಾಗಿ ಯಾರೂ ಅವುಗಳನ್ನು ಒಡೆದು ಹಾನಿ ಮಾಡಬಾರದು ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ಮತ್ತು ಕರ್ನಾಟಕ ನೀರಾವರಿ ನಿಗಮದ ವತಿಯಿಂದ 2022-23ನೇ ವರ್ಷದ ಎಸ್.ಸಿ.ಪಿ, ಟಿ.ಎಸ್.ಪಿ. ಯೋಜನೆ ಅಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ವೈಯಕ್ತಿಕ ಕೊಳವೆ ಭಾವಿ ಕೊರೆದು, ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆಗೆ ಭೂಮಿಪೂಜೆ ನೇರವೇರಿಸಿ ಅವರು ಮಾತನಾಡಿದರು. ನೀರಾವರಿಯಿಂದಾಗಿ […]
ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಮೊದಲ ತೆರೆದ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ- ಡಾ. ಆರ್. ಎಸ್. ಮುಧೋಳ
ವಿಜಯಪುರ: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ ಎಂದು ವಿವಿ ಕುಲಪತಿ ಡಾ. ಆರ್. ಎಸ್. ಮುಧೋಳ ಹೇಳಿದರು. ಆಸ್ಪತ್ರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಅತ್ಯಾಧುನಿಕ ಸೌಲಭ್ಯಗಳು ಮತ್ತು ಜನಪರ ಆರೋಗ್ಯ ಸೇವೆಗಳ ಮೂಲಕ ಜನರನ್ನು ತಲುಪುತ್ತಿದೆ. ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಮತ್ತು ಸಚಿವರಾದ ಶ್ರೀ […]