ವಿಜಯಪುರ: ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿಯವರ ನಾಮಕರಣ ಮಾಡಲು ಸಂಘ- ಸxಸ್ಥೆಗಳು, ಗಣ್ಯ ವ್ಯಕ್ತಿಗಳಿಂದ ಅರ್ಜಿಗಳು ಸ್ವೀಕೃತವಾಗಿವೆ. ಈ ಹಿನ್ನಲೆಯಲ್ಲಿ ವಿಜಯಪುರ ರೈಲು ನಿಲ್ದಾಣಕ್ಕೆ ಶ್ರೀ ಸಿದ್ದೇಶ್ವರ ಮಹಾಸ್ವಾಮಿಯವರ ಹೆಸರು ನಾಮಕರಣ ಮಾಡಲು ಜಿಲ್ಲೆಯ ಪ್ರತಿನಿಧಿಗಳ, ಗಣ್ಯವ್ಯಕ್ತಿಗಳು ಹಾಗೂ ಸಾರ್ವಜನಿಕರಿಂದ ಅಭಿಪ್ರಾಯವನ್ನು ಆಹ್ವಾನಿಸಲಾಗಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿಯವರ ಹೆಸರನ್ನು ನಾಮಕರಣ ಮಾಡುವ ಕುರಿತು ಸ್ಪಷ್ಟ ಅಭಿಪ್ರಾಯವನ್ನು ಈ ಪ್ರಕಟಣೆಯ 15 ದಿನಗಳೊಳಗಾಗಿ ಲಿಖಿತ ರೂಪದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸುವಂತೆ ತಿಳಿಸಿದ್ದಾರೆ.