ಬಂಜಾರಾ ಸಮುದಾಯದ ಜನ ಶ್ರಮಜೀವಿಗಳು- ಸಚಿವ ಎಂ. ಬಿ. ಪಾಟೀಲ
ವಿಜಯಪುರ: ಬಂಜಾರಾ ಸಮುದಾಯದ ಜನ ಶ್ರಮಜೀವಿಗಳು. ಯಾವುದೇ ಜಲಾಷಯ, ಸೇತುವೆ ಸೇರಿದಂತೆ ಕಟ್ಟಡಗಳ ನಿರ್ಮಾಣದಲ್ಲಿ ಬೆವರ ಹನಿ ಇದೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌರ‍್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ಇಂದು ಮಂಗಳವಾರ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ ಎಲ್.ಟಿ. 1ರಲ್ಲಿ ದರ‍್ಗಾದೇವಿ ಮಹಾದ್ವಾರ ಉದ್ಘಾಟಿಸಿ ಅವರು ಮಾತನಾಡಿದರು. ಬಂಜಾರಾ ಮಹಿಳೆಯರೂ ಕೂಡ ಶ್ರಮಜೀವಿಯಾಗಿ ಸಮುದಾಯದ ಸಂಸ್ಕೃತಿ ಮತ್ತು ಪರಂಪರೆಯನ್ನು ಎತ್ತಿ ಹಿಡಿದಿದ್ದಾರೆ. ಭಕ್ತಿ ಮತ್ತು ಶ್ರದ್ಧೆಗೆ ಈ […]
ದಸರಾ ಅಂಗವಾಗಿ ಪಾರೇಖ ಬಡಾವಣೆಯ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಮೆರವಣಿಗೆ
ವಿಜಯಪುರ: ನಾಡಹಬ್ಬ ದಸರಾ ಮತ್ತು ವಿಜಯ ದಶಮಿ ಅಂಗವಾಗಿ ನಗರದ ಜ್ಞಾನಯೋಗಾಶ್ರಮದ ಹತ್ತಿರ ಇರುವ ಪಾರೇಖ ನಗರದಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು. ಇಲ್ಲಿನ ಶ್ರೀ ಮಹಾಲಕ್ಷ್ಮಿ ದೇವಾಲಯದ ಬನ್ನಿಗಿಡದ ಪಲ್ಲಕ್ಕಿಯನ್ನು ಹೊತ್ತ ಬಡಾವಣೆಯ ಹಿರಿಯರು ಮತ್ತು ಯುವಕರು ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು. ಹಿರಿಯರು, ಮಹಿಳೆಯರು ಮತ್ತು ಮಕ್ಕಳೂ ಕೂಡ ಪಲ್ಲಕ್ಕಿ ಉತ್ಸವದ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಪಾಲ್ಗೊಂಡರು.
ಕರ್ನಾಟಕದಲ್ಲಿ ಬಿಜೆಪಿಗೆ ಭವಿಷ್ಯವಿಲ್ಲ- ವಿಧಾನ ಸಭೆ ಚುನಾವಣೆ ಸೋಲಿನಿಂದ ಮೋದಿ, ಶಾ ಚೇತರಿಸಿಕೊಂಡಿಲ್ಲ- ಎಂ. ಬಿ. ಪಾಟೀಲ
ವಿಜಯಪುರ: ರಾಜ್ಯದಲ್ಲಿ ಬಿಜೆಪಿ ಚೇತರಿಕೆ ಕಾಣುವುದಿಲ್ಲ. ಹೀಗಾಗಿ ಆ ಪಕ್ಷದ ಹೈಕಮಾಂಡ್ ಇನ್ನೂ ಪ್ರತಿಪಕ್ಷದ ನಾಯಕನನ್ನು ಆಯ್ಕೆ ಮಾಡುತ್ತಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ ಪರಿಸ್ಥಿತಿ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ. ಅದು ಮುಳುಗುತ್ತಿರುವ ಹಡಗು ಅಲ್ಲ. ಈಗಾಗಲೇ ಮುಳುಗಿ ಹೋಗಿರುವ ಹಡಗು. ಹೀಗಾಗಿ ಈ ಪಕ್ಷಕ್ಕೆ […]