ದಸರಾ ಅಂಗವಾಗಿ ಸಾರ್ವಜನಿಕರೊಂದಿಗೆ ಶಾಸಕ ಯತ್ನಾಳ ಅವರಿಂದ ಬನ್ನಿ ವಿನಿಮಯ

ವಿಜಯಪುರ: ವಿಜಯ ದಶಮಿ ಅಂಗವಾಗಿ ನಗರ ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ಸಾರ್ವಜನಿಕರೊಂದಿಗೆ ಬನ್ನಿ ವಿನಿಮಯ ಮಾಡಿಕೊಂಡರು.

ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬನ್ನಿ ಮುಡಿಯುವ ಕಾರ್ಯಕ್ರಮದಲ್ಲಿ ಪಾಲ್ಗೋಂಡರು

ನಗರದ ಆರಾಧ್ಯ ದೈವ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಾಡಿಗೆ ಒಳಿತಾಗಲಿ ಎಂದು ಪ್ರಾರ್ಥಿಸಿದ ಶಾಸಕರು, ಫಲ್ಲಕ್ಕಿಯೊಂದಿಗೆ ನಗರದ ಎಪಿಎಂಸಿ ಹತ್ತಿರದ ನೀಲಕಂಠೇಶ್ವರ ದೇವಸ್ಥಾನದ ಬಳಿ ತೆರಳಿ ಬನ್ನಿ ಮುಡಿಯುವ ಕಾರ್ಯದಲ್ಲಿ ಭಾಗಿಯಾದರು.

ನಂತರ ಮರಳಿ ಸಿದ್ದೇಶ್ವರ ದೇವಸ್ಥಾನ ಆವರಣಕ್ಕೆ ಆಗಮಿಸಿ, ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಂದ ಆಗಮಿಸಿದ್ದ ರೈತರು, ಮುಖಂಡರು, ಅಭಿಮಾನಿಗಳು, ಹಿತೈಷಿಗಳು, ಮಹಿಳೆಯರು, ಮಕ್ಕಳೊಂದಿಗೆ ಬನ್ನಿ ವಿನಿಮಯ ಮಾಡಿಕೊಂಡು ಶುಭ ಕೋರಿದರು.  ಅಲ್ಲದೇ, ಶ್ರೀ ಸಿದ್ದರಾಮೇಶ್ವರರು ಸುಖ, ಶಾಂತಿ, ಸಮೃದ್ಧಿ ಆರೋಗ್ಯ ದೇವರು ಕರುಣಿಸಲೆಂದು ಹಾರೈಸಿದರು.

Leave a Reply

ಹೊಸ ಪೋಸ್ಟ್‌