ನಾನಾ ನಿಗಮ ಮಂಡಳಿಗಳ ನೇಮಕಾತಿಗೆ ಅ. 28, 29ರಂದು ಸ್ಪರ್ಧಾತ್ಮಕ ಪರೀಕ್ಷೆ- ವ್ಯವಸ್ಥಿತ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ
ವಿಜಯಪುರ: ನಾನಾ ನಿಗಮ ಮಂಡಳಿಗಳ ನೇಮಕಾತಿಗೆ ಜಿಲ್ಲೆಯ 64 ಪರೀಕ್ಷಾ ಕೇಂದ್ರಗಳಲ್ಲಿ ಅಕ್ಟೋಬರ್ 28 ಹಾಗೂ 29 ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅತ್ಯಂತ ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚನೆ ನೀಡಿದ್ದಾರೆ. ನಗರದ ಗಾಂಧಿಚೌಕ್ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜ್ ಶಾರದಾ ಭವನದಲ್ಲಿ ಆಯೋಜಿಸಲಾಗಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ವ್ಯವಸ್ತಿತ ಪರೀಕ್ಷೆಗಾಗಿ 21 ಮಾರ್ಗಾಧಿಕಾರಿಗಳ ತಂಡ, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ವೀಕ್ಷಕರಂತೆ 64 ವೀಕ್ಷಕರು ಪ್ರತಿ […]
ಕಾಲಕಾಲಕ್ಕೆ ಆರೋಗ್ಯ ತಪಾಸಣೆ ನಡೆಸಿ ಪೌರ ಕಾರ್ಮಿಕರ ಆರೋಗ್ಯ ಕಾಪಾಡಲು- ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ
ವಿಜಯಪುರ: ಜಿಲ್ಲೆಯ ಪೌರಕಾರ್ಮಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಂಡು ಆರೋಗ್ಯ ಜಾಗೃತಿ ಮೂಡಿಸಬೇಕು. ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕಾರ್ಮಿಕರಿಗೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ನಡೆಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿನ 2013ರ 3ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸಮಾಜದ ಸ್ವಾಸ್ಥ ಕಾಪಾಡುವ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಕಾರ್ಮಿಕರ ಆರೋಗ್ಯ ತಪಾಸಣೆ ಅತಿ ಮುಖ್ಯವಾಗಿದೆ. […]