ಮತದಾರರ ಕರಡು ಪಟ್ಟಿ ಪ್ರಕಟ- ತಿದ್ದುಪಡಿ, ಸೇರ್ಪಡೆ, ಡಿಲೀಟ್ ಆಕ್ಷೇಪಣೆ ಸಲ್ಲಿಸಲು ಡಿ. 12ರ ವರೆಗೆ ಅವಕಾಶ- ಡಿಸಿ ಟಿ. ಭೂಬಾಲನ್
ವಿಜಯಪುರ: ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಹೆಸರು ಸೇರ್ಪಡೆ, ತೆಗೆದು ಹಾಕುವುದು, ತಿದ್ದಪುಡಿ ಸೇರಿದಂತೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು 9ನೇ ಡಿಸೆಂಬರ್ 2023ರ ವರೆಗ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಟಿ. ಭೂಬಾಲನ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನಾನಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು, ಕೇಂದ್ರ ಚುನಾವಣೆ ಆಯೋಗದ ನಿರ್ದೇಶನದಂತೆ 25.09.2023ರ ಅನ್ವಯ ಮತದಾರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅರ್ಹತೆ ದಿನಾಂಕ 01.01.2024ಕ್ಕೆ ಸಂಬಂಧಿಸಿದಂತೆ […]
ವಿದ್ಯುತ್, ನೀರು ಪೂರೈಕೆ ಸಮಸ್ಯೆ ಬಗೆಹರಿಸಲು ಆಗ್ರಹ- ಸಾಲಮನ್ನಾಕ್ಕೆ ಒತ್ತಾಯ- ನಾನಾ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಕೆ
ವಿಜಯಪುರ: ಸಮರ್ಪಕ ವಿದ್ಯುತ್ ಪೂರೈಸಬೇಕು ಮತ್ತು ಕಾಲುವೆಗಳಿಗೆ ಸರಿಯಾಗಿ ನೀರು ಹರಿಸುವಂತೆ ಆಗ್ರಹಿಸಿ ಭಾರತೀಯ. ಕಿಸಾನ ಸಂಘದ ರಾಜ್ಯಾಧ್ಯಕ್ಷ ಭೀಮಸೇನ್ ಕೋಕರೆ ಅವರ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೇರಿದಂತೆ ನಾನಾ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಬರ ಹಿನ್ನೆಲೆಯಲ್ಲಿ ಬೆಳೆಗಳು ನಷ್ಟವಾಗುತ್ತಿವೆ. ಮಳೆಯಾಗದ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಕೆಲವು ರೈತರು ನೀರಿದ್ದರೂ ವಿದ್ಯುತ್ ಸಮಸ್ಯೆಯಿಂದಾಗಿ ಬೆಳೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ಅವರು ಅಳಲು ತೋಡಿಕೊಂಡರು. ರೈತರ […]
ಹೃದಯಾಘಾತ, ಪ್ರಾಥಮಿಕ ಚಿಕಿತ್ಸೆ ಕುರಿತು ಕಾರ್ಯಾಗಾರ- ಡಾ. ಚುಳಕೆ, ಡಾ. ಕಡೇಲಿ ಅವರಿಂದ ಪ್ರಾತ್ಯಕ್ಷಿಕೆ ಮೂಲಕ ವಿವರಣೆ
ವಿಜಯಪುರ: ಹೃದಯಾಘಾತ ಮತ್ತು ಪ್ರಥಮ ಚಿಕಿತ್ಸೆ ಕುರಿತ ಕಾರ್ಯಾಗಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಸಂಗನಬಸವ ಮಹಾಸ್ವಾಮೀಜಿ ಫಾರ್ಮಸಿ ಕಾಲೇಜಿನಲ್ಲಿ ಗುರುವಾರ ನಡೆಯಿತು. ಪಾರ್ಮಸಿ ಕಾಲೇಜು ಮತ್ತು ರಾಘವೇಂದ್ರ ಕಾರ್ಡಿಯೊ ಕೇರ್ ಸಂಯುಕ್ತಾಶ್ರಯದಲ್ಲಿ ನಡೆದ ಈ ಕಾರ್ಯಾಗಾರವನ್ನು ಕಾಲೇಜಿನ ಪ್ರಭಾರಿ ಪ್ರಾಚಾರ್ಯ ಡಾ. ಸಿ. ಸಿ. ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹೃದಯ ರೋಗ ಖ್ಯಾತ ವೈದ್ಯರಾದ ಡಾ. ಕಿರಣ್ ಚುಳಕಿ ಮತ್ತು ಡಾ. ದೀಪಕ ಕಡೇಲಿ ಅವರು ಹೃದಯಾಘಾತ ಸಂಭವಿಸಿದಾಗ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವರವಾಗಿ ಪ್ರಾತ್ಯಕ್ಷಿಕೆ […]
ವಿಜಯಪುರ ಮೇಯರ್, ಉಪಮೇಯರ್ ಚುನಾವಣೆ ಮುಂದೂಡಿಕೆ- ಸಂಜಯ ಶೆಟ್ಟೆಣ್ಣವರ
ವಿಜಯಪುರ: ಇದೇ ತಿಂಗಳು 30 ನಡೆಯಬೇಕಿದ್ದ ಮೇಯರ್ ಮತ್ತು ಉಪಮೇಯರ್ ಚುನಾವಣೆಯನ್ನು ಮುಂದೂಡಲಾಗಿದೆ. ಎರಡೂ ಸ್ಥಾನಗಳಿಗೆ ನಿಗದಿಯಾಗಿದ್ದ ಮೀಸಲಾತಿಯನ್ನು ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಿದೆ. ಈ ಅರ್ಜಿಯ ವಿಚಾರಣೆ ಅ.30 ರಂದು ನಡೆಯಲಿದೆ. ಹೀಗಾಗಿ ಅಲ್ಲಿಯವರೆಗೆ ಚುನಾವಣೆ ನಡೆಸದಂತೆ ಹೈಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಅ. 30 ರಂದು ನಡೆಯಬೇಕಿದ್ದಮೇ ಯರ್ ಮತ್ತು ಉಪಮೇಯರ್ ಚುನಾವಣೆಯನ್ನು ಮುಂದೂಡಲಾಗಿದೆ […]
ವಿಜಯಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಶಿವಾನಂದ ಪಾಟೀಲ, ಉಪಾಧ್ಯಕ್ಷರಾಗಿ ರಾಜಶೇಖರ ಗುಡದಿನ್ನಿ ಅವಿರೋಧವಾಗಿ ಪುನರಾಯ್ಕೆ
ವಿಜಯಪುರ: ರಾಜ್ಯದ ಪ್ರತಿಷ್ಠಿತ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಸಚಿವ ಶಿವಾನಂದ ಎಸ್. ಪಾಟೀಲ ಮತ್ತು ಉಪಾಧ್ಯಕ್ಷರಾಗಿ ರಾಜಶೇಖರ ಬಿ. ಗುಡದಿನ್ನಿ ಪುನರಾಯ್ಕೆಯಾಗಿದ್ದಾರೆ. 2023 ರಿಂದ 2028ರ ವರೆಗೆ ಐದು ವರ್ಷಗಳ ಅವಧಿಗಾಗಿ ನಡೆದ ಚುನಾವಣೆಯಲ್ಲಿ ಜವಳಿ, ಕಬ್ಬು, ಸಕ್ಕರೆ ಅಭಿವೃದ್ಧಿ ಮತ್ತು ಎ.ಪಿಎಂ.ಸಿ ಸಚಿವ ಶಿವಾನಂದ ಎಸ್. ಪಾಟೀಲ ಮತ್ತು ಉಪಾಧ್ಯಕ್ಷರಾಗಿ ರಾಜಶೇಖರ ಬಿ. ಗುಡದಿನ್ನಿ ಅವಿರೋಧವಾಗಿ ಆಯ್ಕೆಯಾದರು. ಶಿವಾನಂದ ಎಸ್. ಪಾಟೀಲ ಅವರು 1997 ರಿಂದ 2023ರ ವರೆಗೆ ಸತತವಾಗಿ […]