ವಿಜಯಪುರ: ಇದೇ ತಿಂಗಳು 30 ನಡೆಯಬೇಕಿದ್ದ ಮೇಯರ್ ಮತ್ತು ಉಪಮೇಯರ್ ಚುನಾವಣೆಯನ್ನು ಮುಂದೂಡಲಾಗಿದೆ.
ಎರಡೂ ಸ್ಥಾನಗಳಿಗೆ ನಿಗದಿಯಾಗಿದ್ದ ಮೀಸಲಾತಿಯನ್ನು ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಿದೆ. ಈ ಅರ್ಜಿಯ ವಿಚಾರಣೆ ಅ.30 ರಂದು ನಡೆಯಲಿದೆ. ಹೀಗಾಗಿ ಅಲ್ಲಿಯವರೆಗೆ ಚುನಾವಣೆ ನಡೆಸದಂತೆ ಹೈಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಅ. 30 ರಂದು ನಡೆಯಬೇಕಿದ್ದಮೇ ಯರ್ ಮತ್ತು ಉಪಮೇಯರ್ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತ ಸಂಜಯ ಬಿ. ಶೆಟ್ಟೆಣ್ಣವರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದರಿಂದಾಗಿ ಮೇಯರ್ ಮತ್ತು ಉಪಮೇಯರ್ ಚುನಾವಣೆ ಮತ್ತೆ ಮುಂದಕ್ಕೆ ಹೋದಂತಾಗಿದ್ದು, ಆಕಾಂಕ್ಷಿಗಳಲ್ಲಿ ನಿರಾಸೆ ಮೂಡಿದೆ.