ಮತದಾರರ ಕರಡು ಪಟ್ಟಿ ಪ್ರಕಟ- ತಿದ್ದುಪಡಿ, ಸೇರ್ಪಡೆ, ಡಿಲೀಟ್ ಆಕ್ಷೇಪಣೆ ಸಲ್ಲಿಸಲು ಡಿ. 12ರ ವರೆಗೆ ಅವಕಾಶ- ಡಿಸಿ ಟಿ. ಭೂಬಾಲನ್

ವಿಜಯಪುರ: ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಹೆಸರು ಸೇರ್ಪಡೆ, ತೆಗೆದು ಹಾಕುವುದು, ತಿದ್ದಪುಡಿ ಸೇರಿದಂತೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು 9ನೇ ಡಿಸೆಂಬರ್ 2023ರ ವರೆಗ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಟಿ. ಭೂಬಾಲನ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನಾನಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು, ಕೇಂದ್ರ ಚುನಾವಣೆ ಆಯೋಗದ ನಿರ್ದೇಶನದಂತೆ 25.09.2023ರ ಅನ್ವಯ ಮತದಾರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅರ್ಹತೆ ದಿನಾಂಕ 01.01.2024ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಕುರಿತು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ.  27.10.2023 ರಿಂದ 09.12.2023ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.  ನಂತರ ವಿಶೇಷ ಕ್ಯಾಂಪೇನ್‍ಗಳ ಮೂಲಕ ಮತದಾರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತಿದೆ.  ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲು ಅನುಕೂಲವಾಗುವಂತಗೆ ಮತದಾರ ಪರಿಷ್ಕರಣೆಗೆ ನಾನಾ ರಾಜಕೀಯ ಪಕ್ಷಗಳು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ವಿಜಯಪುರದಲ್ಲಿ ಡಿಸಿ ಟಿ. ಭೂಬಾಲನ್ ನೇತೃತ್ವದಲ್ಲಿ ಮತದಾರರ ಪಟ್ಟಿ ಪ್ರಕಟ ಕುರಿತು ನಾನಾ ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಯಿತು

ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ವೋಟರ್ ಹೆಲ್ಪಲೈನ್ ಮೊಬೈಲ್ ಆಪ್ ಅಥವಾ ಎನ್.ವಿ.ಎಸ್.ಪಿ(NVSP) ಪೋರ್ಟಲ್ ಅಥವಾ www.karnataka.gov.in ಮೂಲಕ ಪರಿಶೀಲಿಸಿ ಖಚಿತ ಪಡಿಸಿಕೊಳ್ಳಬಹುದಾಗಿದೆ.  ಅಲ್ಲದೇ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಜನವರಿ-1, ಏಪ್ರಿಲ್-1, ಜುಲೈ-1 ಹಾಗೂ ಅಕ್ಟೋಬರ್-1 ಸೇರಿದಂತೆ 4 ಅರ್ಹತೆ ದಿನಾಂಕಗಳ ಅವಕಾಶ ಕಲ್ಪಿಸಲಾಗಿದೆ.  .ಮತದಾರ ಪಟ್ಟಿಗೆ ಸಂಬಂಧಿಸಿದಂತೆ ಆನ್‍ಲೈನ್ ಫ್ಲಾಟ್ಫಾರ್ಮಗಳಾದ ವಿಎಚ್‍ಎ, ಎನ್‍.ವಿ.ಎಸ್‍/ಪಿ ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಸಂಪರ್ಕಿಸಿ ಗಡುಡ್ ಆ್ಯಪ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ.  ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೇರಿದಂತೆ ರಾಜಕೀಯ ಪಕ್ಷದ ಪ್ರತಿನಿಧಿಗಳಾದ ನಿತೇಶ ತೊರವಿ, ಭೋಗೇಶ ಸೋಲಾಪುರ, ಎಚ್.ಎಸ್. ದಳವಾಯಿ, ರಾಜು ಹಿಪ್ಪರಗಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌