ಡಾ. ಬಿ. ಆರ್. ಅಂಬೇಡ್ಕರ್ ಇಡೀ ಮಾನವ ಕುಲಕ್ಕೆ ಆದರ್ಶ- ಸಚಿವ ಸತೀಶ ಜಾರಕಿಹೊಳಿ

ವಿಜಯಪುರ: ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಕೇವಲ ಒಂದು ಜಾತಿ, ಸಮುದಾಯಕ್ಕೆ ಸೀಮಿತವಾಗಿಲ್ಲ ಇಡೀ ಮಾನವ ಕುಲಕ್ಕೆ ಸೀಮಿತವಾದ ಸಂವಿಧಾನ ಸಾಮಾಜಿಕ, ರಾಜಕೀಯ ಆರ್ಥಿಕ, ಶೈಕ್ಷಣಿಕವಾಗಿ ಬೆಳೆಯಲು ಸಾಧ್ಯವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಇಂಡಿ ತಾಲೂಕಿನ ಹಳಗುಣಕಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಎಚ್. ಸಿ. ಮಹದೇವಪ್ಪ ಅವರೊಂದಿಗೆ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಮತ್ತು ಉದ್ಘಾಟನೆ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡಿ ಅವರು ಮಾತನಾಡಿದರು.

ವಿಶ್ವಕಂಡ ಅಪರೂಪದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ಮಾಡಿದೆ. ಪ್ರತಿಮೆ ಅನಾವರಣಕ್ಕೆ ಮಾತ್ರ ಸೀಮೀತವಾಗದೇ ಅವರ ಹೋರಾಟ, ತ್ಯಾಗ ಪ್ರತಿದಿನ ಸ್ಮರಣೆಯಾಗಬೇಕು. ಅವರು ನೀಡಿದ ಸಂವಿಧಾನದ ಕೊಡುಗೆ ಅಪಾರವಾಗಿದ್ದು, ಡಾ.ಬಿ.ಆರ್.ಅಂಬೇಡ್ಕರ್ ಅವರ ತ್ಯಾಗ ನಮಗೆ ಸ್ಪೂರ್ತಿದಾಯಕ ಹಾಗೂ ಅವರÀ ಆದರ್ಶಗಳು ನಮಗೆ ದಾರಿದೀಪವಾಗಿವೆ ಎಂದು ಅವರು ಹೇಳಿದರು.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಳಗುಣಕಿ ಗ್ರಾಮದಲ್ಲಿ ಸಚಿವ ಸತೀಶ ಜಾರಕಿಹೊಳಿ ನಾನಾ ಅಭಿವದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು

 

ಕಳೆದ ಬಾರಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸರಕಾರದ ಸಂದರ್ಭದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅವರ ನೇತೃತ್ವದಲ್ಲಿ ಈ ಭಾಗದಲ್ಲಿ ರಸ್ತೆ, ವಸತಿ ಶಾಲೆಗಳನ್ನು ಅಭಿವೃದ್ದಿಪಡಿಸಲಾಗಿದೆ. ಇನ್ನೂ ಸಹ ಈ ಭಾಗದಲ್ಲಿ ಅಭಿವೃದ್ದಿ ಕೆಲಸಗಳು ಆಗಬೇಕಾಗಿದೆ. ಆರ್ಥಿಕ-ಸ್ಥಿತಿಗತಿಗಳನ್ನು ನೋಡಿಕೊಂಡು ನಮ್ಮ ಸರ್ಕಾರದ ಅವಧಿಯಲ್ಲಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಂಪೂರ್ಣ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಅಭಿವೃದ್ದಿ ಕಾಮಗಾರಿಗಳಿಗೆ ಯಾವುದೇ ಅನುದಾನದ ಕೊರತೆಯಿಲ್ಲ. ಗ್ಯಾರಂಟಿ ಯೋಜನೆಗಳು ಜನಪರ ಯೋಜನೆಗಳಾಗಿದ್ದು, ಈ ಯೋಜನೆಗಳಿಂದ ಯಾವುದೇ ಅಭಿವೃದ್ದಿ ಕಾಮಗಾರಿಗಳು ಕುಂಠಿತವಾಗಿಲ್ಲ ಎಂದು ಅವರು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್. ಸಿ. ಮಹದೇವಪ್ಪ ಮಾತನಾಡಿ, ವಿಜಯಪುರ ಜಿಲ್ಲೆ ಐತಿಹಾಸಿಕ ಚರಿತ್ರೆವುಳ್ಳ ಜಿಲ್ಲೆಯಾಗಿದೆ. 12ನೇ ಶತಮಾನದ ಬಸವಾದಿ ಶರಣರು ಕಾಯಕ ತತ್ವವನ್ನು ಅಳವಡಿಸಿಕೊಂಡು ಬಂದಿದ್ದು, ಅಸಮಾನತೆಯನ್ನು ತೊಡೆದು ಹಾಕಿ ಸಮಾನತೆಯ ಸಮಾಜ ನಿರ್ಮಾಣ ಮಾಡಿ ಸಂವಿಧಾನದ ಆಶಯದಂತೆ ಸಮಾನ ಸಮಾಜಕ್ಕೆ ನಮ್ಮ ಸರ್ಕಾರ ಶ್ರಮಿಸುತ್ತ, ಹಲವು ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಸರ್ಕಾರ ಜಾರಿಗೊಳಿಸಿದ ಶಕ್ತಿ ಯೋಜನೆ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಜನಪರ ಯೋಜನೆಗಳಿಂದ ಬಡ ಹಾಗೂ ಮಧ್ಯಮ ವರ್ಗದವರಿಗೆ ಅನುಕೂಲ ಕಲ್ಪಿಸಿವೆ. ಸ್ವತಂತ್ರವಾಗಿ ಬದಕುಲು ಹಾಗೂ ಸ್ವಾಭಿಮಾನ ಬದುಕು ಕಟ್ಟಿಕೊಡಲು ಅವಕಾಶ ಕಲ್ಪಿಸಿದೆ. ಈ ಯೋಜನೆಯಿಂದ ಕೋಟ್ಯಾಂತರ ಕುಟುಂಬಗಳಿಗೆ ಆಸರೆ ದೊರೆತಿದ್ದು, ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, ಇಂಡಿ ವಿಧಾನಸಭಾ ಕ್ಷೇತ್ರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಲೋಕೋಪಯೋಗಿ ಇಲಾಖೆಯಿಂದ ಸರಕಾರಿ ಪದವಿಪುರ್ವ ಕಾಲೇಜ್ ಇಂಡಿ ಕಟ್ಟಡ ನಿರ್ಮಾಣ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲಧಾರೆ ಜಲಜೀವನ ಮಿಶನ್ ಯೋಜನೆಯ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ, ವಿಜಯಪುರ, ಇಂಡಿ ತಾಲೂಕು 702 ಗ್ರಾಮೀಣ ಜನ ವಸತಿಗಳು ಹಾಗೂ 5 ಪಟ್ಟಣ ಪಂಚಾಯತಿಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಯೋಜನೆಯಡಿಯಲ್ಲಿ ಇಂಡಿ ಮತಕ್ಷೇತ್ರದ 143 ಜನವಸತಿಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಾಮಗಾರಿ, ಜಲಜೀವನ ಮಿಷನ್ ಯೋಜನೆಯಡಿ ಇಂಡಿ ಮತಕ್ಷೇತ್ರದ 143 ಜನವಸತಿಗಳಿಗೆ ಕೈಗೊಳ್ಳಲಾದ ವಿವಿಧ ಹಂತದಲ್ಲಿರುವ ಕಾಮಗಾರಿಗಳು, ಇಂಧನ ಕೆಪಿಟಿಸಿಎಲ್ ಇಲಾಖೆಗಳ ನಿಂಬಾಳ ಕೆ.ಡಿ. ಗ್ರಾಮದಲ್ಲಿ 110 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ ನಿರ್ಮಾಣ ಹಾಗೂ ಗ್ರಾಮೀಣ ಅಭಿರ್ವದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇಂಡಿ ಮತಕ್ಷೇತ್ರದ ನಾನಾ ಗ್ರಾಮಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಸೇರಿದಂತೆ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಸಮಾರಂಭ ನೆರವೇರಿಸುವ ಮೂಲಕ ಈ ಭಾಗದಲ್ಲಿ ಅಭಿವೃದ್ದಿಗೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು

ತಾಲೂಕಿನಲ್ಲಿ ಮಿನಿ ವಿಧಾನಸೌಧ ನಿರ್ಮಾಣವಾಗಿದೆ, ಲಿಂಬೆ ಅಭಿವೃದ್ದಿ ಮಂಡಳಿ ಸ್ಥಾಪಿಸಲಾಗಿದೆ.  ಲಿಂಬೆ ಬೆಳೆಗೆ ಜಿಐ ಟ್ಯಾಗ್ ಸಿಕ್ಕಿದೆ.  ಇದರಿಂದ ಬೆಳೆಗಾರರಿಗೆ ಪ್ರೊತ್ಸಾಹ ದೊರೆಯುವುದರಿಂದ ಆರ್ಥಿಕ ಸಬಲತೆಗೆ ಅವಕಾಶ ಕಲ್ಪಿಸಿದೆ.  ತಾಲೂಕಿನಲ್ಲಿ ಮೇಗಾ ಮಾರುಕಟ್ಟೆ ನಿರ್ಮಾಣದಿಂದ 400 ಕುಟುಂಬಗಳಿಗೆ ಆಸರೆ ದೊರೆಯಲಿದೆ ಎಂದು ಹೇಳಿದರು.

ನಾಗಪುರದ ನಾಗಬೋಧಿಜಿ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು.  ಈ ಸಂದರ್ಭದಲ್ಲಿ ನಾಗಠಾಣ ಶಾಸಕರಾದ ವಿಠಲ್ ಕಟಕಧೊಂಡ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲೀಕ ಮಾನವರ, ಇಂಡಿ ತಹಶೀಲ್ದಾರರಾದ ವಿಜಯಕುಮಾರ ಕಡಕಬಾವಿ ಸೇರಿದಂತೆ ವಿವಿಧ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌