ವಿಜಯಪುರ: ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ರಕ್ಷಣೆಯೊಂದಿಗೆ ಪರಿಸರ ರಕ್ಷಣೆ ಕುರಿತು ಜಾಗೃತಿ ಮೂಡಿಸಲು ಡಿ.24ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ವೃಕ್ಷೋತ್ಥಾನ್ ಹೆರಿಟೇಜ್ ರನ್-2023 ಆಯೋಜಿಸಲಾಗಿದ್ದು, ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವೃಕ್ಷೋಥಾನ್ ಹೆರಿಟೇಜ್ ರನ್- 2023ರ ಅಂಗವಾಗಿ ಜಿಲ್ಲೆಯ ನಾನಾ ಕಾಲೇಜುಗಳ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿರು.
ಈ ಓಟದಲ್ಲಿ 800 ಮೀಟರ್ 3, 5, 10 ಮತ್ತು 21 ಕಿ.ಮೀಗಳ ಓಟ ನಡೆಯಲಿದ್ದು, ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಿಂದ ಆರಂಭಗೊಮಡು, ನಗರದ ನಾನಾ ಸ್ಮಾರಕಗಳು ಮುಂಭಾಗದಲ್ಲಿ ಈ ಓಟ ನಡೆಯಲಿದೆ. ಬೇರೆ-ಬೇರೆ ಜಿಲ್ಲೆ ರಾಜ್ಯಗಳಿಂದ ಹೆರಿಟೇಜ್ ರನ್ ಕಾರ್ಯಕ್ರಮದಲ್ಲಿ ಓಟಗಾರರು ಭಾಗವಹಿಲಿದ್ದು, ಜಿಲ್ಲೆಯ ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ www.vrukshathon.co.in ನೋಂದಾಯಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮ ವಹಿಸಲು ಸೂಚನೆ ನೀಡಿದರು.
ಅರಣ್ಯೀಕರಣ, ಪರಿಸರ ಜಾಗೃತಿ, ಐತಿಹಾಸಿಕ ಸ್ಮಾರಕಗಳ ರಕ್ಷಣೆ ಹಾಗೂ ಅಭಿವೃದ್ಧಿ ಜೊತೆಗೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದು ಹಾಗೂ ಆರೋಗ್ಯದ ಕುರಿತಾಗಿ ಜಾಗೃತಿ ಉಂಟು ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಕೋಟಿ ವೃಕ್ಷ ಅಭಿಯಾನಕ್ಕೆ ಪುನಶ್ಚೇತನ ನೀಡಿ,ಕೋಟಿ ವೃಕ್ಷ ಅಭಿಯಾನ ಇನ್ನಷ್ಟು ಹೆಚ್ಚು ಬಲಗೊಳಿಸುವ ಅಗತ್ಯತೆ ಇದ್ದು, ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಲು ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ 8 ರಿಂದ 12 ವಯೋಮಾನದ ಮಕ್ಕಳು, ಹಿರಿಯ ನಾಗರಿಕರು ಹಾಗೂ ವಿಕಲಚೇತನರು .
ಎನ್ಎಸ್ಎಸ್, ಎನ್‌ಸಿಸಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳು (ಎನ್‌ಜಿಒ) ಅವರು ಪಾಲ್ಗೊಳ್ಳಬೇಕು. ಅತಿ ಹೆಚ್ಚು ನೋಂದಾಯಿಸಿಕೊಂಡವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.
ಜಿಲ್ಲೆಯ ವಿವಿಧ ಕಾಲೇಜಿನ ಪ್ರತಿನಿಧಿಗಳು ಆಸಕ್ತಿ ವಹಿಸಿ ವಿದ್ಯಾರ್ಥಿಗಳು ಸೇರಿದಂತೆ ಬೋಧಕ ಹಾಗೂ ಬೋಧಕ ಸಿಬ್ಬಂದಿ ಪಾಲ್ಗೊಳ್ಳುವುದಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ಜಾಲ ತಾಣಗಳ ಮೂಲಕ ವಿದ್ಯಾರ್ಥಿಗಳಿಗೆ ಮಾಹಿತಿ ಹಂಚಿಕೊಳ್ಳಲಾಗುವುದು ಎಂದು ಹೇಳಿದರು.
ಕೋಟಿ ವೃಕ್ಷ ಅಭಿಯಾನದ ಸಂಚಾಲಕರಾದ ಡಾ. ಮುರುಗೇಶ ಪಟ್ಟಣಶೆಟ್ಟಿ ವೃಕ್ಷೋಥಾನ ಹೆರಿಟೇಜ್ ರನ್-2023ರ ಕುರಿತಾಗಿ ವಿಸ್ತೃತ ರೂಪರೇಷ ಕುರಿತು ಮಾತನಾಡಿದರು.
ಈ ಸಭೆಯಲ್ಲಿ ಪ್ರಾದೇಶಿಕ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಭಾಗ್ಯವಂತೆ ಮಸೂದಿ,ಬಿ.ಪಿ.ಚವ್ಹಾಣ, ಡಾ. ಮಲ್ಲಿಕಾರ್ಜುನ ಬಿಎಲ್ ಡಿಇ ಇಂಜಿನೀಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ವಿ ಜಿ ಸಂಗಮ್ ಸೇರಿದಂತೆ ನಾನಾ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಉಪಸ್ಥಿತರಿದ್ದರು.