ಕೇಂದ್ರ ಬರ ಅಧ್ಯಯನ ತಂಡ ನ. 4ರಂದು ವಿಜಯಪುರ ಜಿಲ್ಲೆಗೆ ಭೇಟಿ- ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ಜಿಲ್ಲೆಯಲ್ಲಿ ಉಂಟಾಗಿರುವ ಬರ ಅಧ್ಯಯನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್‌ ನೇತೃತ್ವದ ತಂಡ ನ. 4ರಂದು ಭೇಟಿ ನೀಡಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್‌. ಎಸ್. ಪಾಟೀಲ ಕೂಚಬಾಳ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ತಂಡದಲ್ಲಿ ಸಂಸದರಾದ ರಮೇಶ ಜಿಗಜಿಣಗಿ, ಪಿ. ಸಿ. ಗದ್ದಿಗೌಡರ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಚಿವ ಮುರುಗೇಶ ನಿರಾಣಿ, ಮಾಜಿ ಶಾಸಕರಾದ ಪಿ. ರಾಜೀವ, ವೀರಣ್ಣ ಚರಂತಿಮಠ, ಎ. ಎಸ್‌. ಪಾಟೀಲ ನಡಹಳ್ಳಿ, ಸಿದ್ದು ಸವದಿ ಇರಲಿದ್ದಾರೆ ಎಂದು ತಿಳಿಸಿದರು. […]

ಶ್ರೀ ಸಿದ್ಧಾರೂಢರ ತತ್ವಾದರ್ಶಗಳು ಎಲ್ಲರಿಗೂ ದಾರಿದೀಪವಾಗಿವೆ- ಬೀದರಿನ ಡಾ. ಶಿವಕುಮಾರ ಮಹಾಸ್ವಾಮೀಜಿ

ವಿಜಯಪುರ: ಶ್ರೀ ಸಿದ್ಧಾರೂಢರ ತತ್ವಾದರ್ಶಗಳು ಇಂದಿಗೂ ಎಲ್ಲರಿಗೂ ದಾರಿದೀಪವಾಗಿವೆ ಎಂದು ಬೀದರಿನ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಹೇಳಿದ್ದಾರೆ. ನಗರದ ಸೋಲಾಪುರ ರಸ್ತೆ ಬಳಿಯ ಸಂಸ್ಕೃತಿ ಕಾಲನಿ ಹತ್ತಿರವಿರುವ ಶ್ರೀ ಸಿದ್ಧಾರೂಢರ ಮಠದಲ್ಲಿ ಮೂರು ದಿನಗಳ ಕಾಲ ನಡೆದ ಶ್ರೀ ಸಿದ್ಧಾರೂಢರ ಮೂರ್ತಿ ಪ್ರತಿಷ್ಠಾಪನೆಯ 17ನೇ ವಾರ್ಷಿಕೋತ್ಸವ ಹಾಗೂ ಮಾತೋಶ್ರೀ ಪಾರ್ವತಮ್ಮನವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ 5ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶ್ರೀ ಸಿದ್ಧಾರೂಢರು ತಮ್ಮ ಅವಧಿಯಲ್ಲಿ ಅನೇಕ ಪವಾಡಗಳನ್ನು ಮಾಡುವ ಮೂಲಕ ಗಮನ ಸೆಳೆದಿದ್ದಾರೆ.  12ನೇ […]

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳೇ ಹೊಣೆ- ಅಕ್ರಮ ತಡೆಯದಿದ್ದರೆ ಕಠಿಣ ಕ್ರಮ- ಸಚಿವ ಎಂ. ಬಿ. ಪಾಟೀಲ ಎಚ್ಚರಿಕೆ

ವಿಜಯಪುರ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವ ಹಿನ್ನಲೆಯಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಗಂಭೀರವಾಗಿ ತೆಗೆದುಕೊಳ್ಳಬೇಕು. ನೀರಿನ ವಿಷಯದಲ್ಲಿ ಯಾವುದೇ ನೆಪ ಸಹಿಸುವುದಿಲ್ಲ. ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಲ್ಲಿ ಲೋಪ ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಕ್ರಮ ವಹಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.   ನಗರದ ಕಂದಗಲ್ ಶ್ರೀ […]