ನಾನಾ ಮತಗಟ್ಟೆ, ಶಾಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಭೇಟಿ, ಪರಿಶೀಲನೆ

ವಿಜಯಪುರ: ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಮತದಾರರ ಪಟ್ಟಿಯ ವೀಕ್ಷಕರಾದ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ್ ಅವರು ಇಂಡಿ ವಿಧಾನಸಭಾ ಮತಕ್ಷೇತ್ರದ ನಾನಾ ಮತಗಟ್ಟೆಗಳಿಗೆ ಹಾಗೂ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂಡಿ ತಾಲೂಕಿನ ಹೊರ್ತಿ ಸರಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಭೇಟಿ ನೀಡಿದ ಅವರು, ಮಕ್ಕಳ ಹಾಜರಾತಿ ಮತ್ತು ನಿರ್ಮಾಣ ಹಂತದ ಕಟ್ಟಡ ಪರಿಶೀಲನೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು. ನಂತರ ಸರಕಾರಿ […]

ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿ- ಡಾ.ರಿ ಚರ್ಡ್ ವಿನ್ಸೆಂಟ್ ಡಿಸೋಜಾ ಅಧಿಕಾರಿಗಳಿಗೆ ಸೂಚನೆ

ವಿಜಯಪುರ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ಉದ್ಭವಿಸಬಹುದಾದ ಸಮಸ್ಯೆಗಳನ್ನು ಯೋಜನಾಬದ್ಧವಾಗಿ ಮತ್ತು ವ್ಯವಸ್ಥಿತವಾಗಿ ಯಾವುದೇ ಸಮಸ್ಯೆ ಬರದಂತೆ ನಿರ್ವಹಿಸಬೇಕು ಎಂದು ವಾಣಿಜ್ಯ ಮತ್ತು ಕೈಗಾರಿಕಾ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬರ ಪರಿಸ್ಥಿತಿ ಇರುವುದರಿಂದ ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಲೋಪಗಳಿಗೆ ಆಸ್ಪದ […]

ಶುದ್ಧ ಅಂತಿಮ ಮತದಾರ ಪಟ್ಟಿ ಪ್ರಕಟಣೆಗೆ ಸಹಕರಿಸಿ: ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ್

ವಿಜಯಪುರ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅರ್ಹತಾ ದಿನಾಂಕ : 01-01-2024ಕ್ಕೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ 5 ಮತಗಟ್ಟೆಗಳನ್ನು ವಿಲೀನಗೊಳಿಸಲಾಗಿದ್ದು, 18 ಹೊಸ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಮನ್ವಯತೆ ಸಾಧಿಸಲು ಬಿಎಲ್‍ಎಗಳ ನೇಮಕ ಮಾಡಿಕೊಂಡು ಶುದ್ಧ ಅಂತಿಮ ಮತದಾರರ ಪಟ್ಟಿಗೆ ಸಹಕರಿಸುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಮತದಾರರ ಪಟ್ಟಿಯ ವೀಕ್ಷಕರಾದ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಹೇಳಿದ್ದಾರೆ. ಜಿಲ್ಲಾಧಿಕಾರಿಗಳ […]

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್. ಡಿ. ಕುಮಾನಿ ಅವರನ್ನು ಸನ್ಮಾನಿಸಿ ಗೌರವಿಸಿದ ಕಾರ್ಪೋರೇಟರ್ ಪ್ರೇಮಾನಂದ ಬಿರಾದಾರ

ವಿಜಯಪುರ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಿ ಹಿರಿಯ ಸಮಾಜ ಸೇವಕ ಸಿದ್ರಾಮಪ್ಪ ದುಂಡಪ್ಪ ಕುಮಾನಿ ಅವರ ನಿವಾಸಕ್ಕೆ ತೆರಳಿದ ಕಾರ್ಪೋರೇಟರ್ ಪ್ರೇಮಾನಂದ ಬಿರಾದಾರ ಸನ್ಮಾನಿಸಿ ಗೌರವಿಸಿದರು. ಜಲಗನರದ ಸ್ನೇಹಿತರೊಂದಿಗೆ ಸಿದ್ರಾಮಪ್ಪ ದುಂಡಪ್ಪ ಕುಮಾನಿ ಅವರ ಮನೆಗೆ ತೆರಳಿದ ಅವರು, ಗೌರವ ಸಮರ್ಪಿಸಿ ಆಶೀರ್ವಾದರು. ಬಳಿಕ ಮಾತನಾಡಿದ ಪ್ರೇಮಾನಂದ ಬಿರಾದಾರ, ವಿಜಯಪುರ ನಗರದಲ್ಲಿ ಯಾವುದೇ ಸೌಲಭ್ಯವಿಲ್ಲದೇ ಪರದಾಡುತ್ತಿದ್ದ ಹಮಾಲರಿಗೆ ಪ್ರತ್ಯೇಕವಾಗಿ ಒಂದು ಬಡಾವಣೆ ಮಾಡಲು ಕುಮಾನಿ ಅವರು ಕಾರಣರಾಗಿದ್ದಾರೆ.  ಮೂರ್ನಾಲ್ಕು ದಶಕಗಳ ಹಿಂದೆ ಅವರು ಮಾಡಿದ ಸಮಾಜಪ ಸೇವೆಯಿಂದಾಗಿ […]

ಜೈಲಿನ ಕೈದಿಗಳಿಗೆ ಉನ್ನತ ಶಿಕ್ಷಣ- ಕೌಶಲ್ಯಾಧಾರಿತ ವೃತ್ತಿಪರ ಕೋರ್ಸ್ಗಳ ಅಧ್ಯಯನ ಕೇಂದ್ರ ಉದ್ಘಾಟನೆ

ವಿಜಯಪುರ: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನಗರದ ಕೇಂದ್ರ ಕಾರಾಗೃಹದಲ್ಲಿ ಮೈಸೂರು ಗಂಗೋತ್ರಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಬಂಧಿಗಳಿಗೆ ಉನ್ನತ ಶಿಕ್ಷಣ ಮತ್ತು ಕೌಶಲ್ಯಾಧಾರಿತ ವೃತ್ತಿಪರ ಕೋರ್ಸ್‍ಗಳ ಅಧ್ಯಯನ ಕೇಂದ್ರಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಕೇಂದ್ರದ ಉದ್ಘಾಟನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಕಾರಾಗೃಹದ ಬಂಧಿಗಳು ಬಿಡುಗಡೆಯ ನಂತರದ ಭವಿಷ್ಯದ ಬದುಕನ್ನು ರೂಪಿಸಿಕೊಳ್ಳಲು ಉನ್ನತ ಶಿಕ್ಷಣ ಕೇಂದ್ರಗಳು ಅತೀ ಅಗತ್ಯವಾಗಿವೆ.  ಬಂದಿಗಳ ಭವಿಷ್ಯದ ಕೌಶಲ್ಯಾಭಿವೃದ್ದಿ ತರಬೇತಿಗಳನ್ನು ಆಯೋಜಿಸಲು ಜಿಲ್ಲಾಡಳಿತದಿಂದ ಸಹಕಾರ ನೀಡಲಾಗುವುದು.  […]