ರಾಷ್ಟ್ರೀಯ ಶರೀರಕ್ರಿಯಾ ಶಾಸ್ತ್ರಜ್ಞರ ಸೊಸಾಯಿಟಿಯ 34ನೇ ರಾಷ್ಟ್ರೀಯ ಸಮ್ಮೇಳನ ಯಶಸ್ವಿ
ವಿಜಯಪುರ: ರಾಷ್ಟ್ರೀಯ ಶರೀರಕ್ರಿಯಾ ಶಾಸ್ತ್ರಜ್ಞರ ಸೊಸಾಯಿಟಿಯ 34ನೇ ರಾಷ್ಟ್ರೀಯ ಸಮ್ಮೇಳನ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ನವೆಂಬರ್ 1 ಬುಧವಾರದಿಂದ ನವೆಂಬರ್ 3ರ ಶುಕ್ರವಾರದ ವರೆಗೆ ನಡೆಯಿತು. ರಾಷ್ಟ್ರೀಯ ಶರೀರಕ್ರಿಯಾ ಶಾಸ್ತ್ರಜ್ಞರ ಸೊಸೈಟಿಯ ಈ ಸಮ್ಮೇಳನವನ್ನು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೊಧನಾ ಕೇಂದ್ರದ ಶರೀರ ಕ್ರಿಯಾ ಶಾಸ್ತ್ರ ವಿಭಾಗ ಆಯೋಜಿಸಿತ್ತು. ಸಮ್ಮೆಳನದ ಮೊದಲ ದಿನ ನಿರಂತರ ವೈದ್ಯಕೀಯ ಶಿಕ್ಷಣ ಹಾಗೂ ಕಾರ್ಯಾಗಾರವನ್ನು ನಡೆಯಿತು. ಈ ಕಾರ್ಯಾಗಾರದಲ್ಲಿ […]
ಮರದ ಕೊಂಬೆ ಬಿದ್ದು ಮೆದುಳಲ್ಲಿ ರಕ್ತಸ್ರಾವವಾಗಿದ್ದ ವ್ಯಕ್ತಿಗೆ ಫೋರ್ಟೀಸ್ ಆಸ್ಪತ್ರೆ ವೈದ್ಯರ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆ- ಡಾ. ರಾಜಕುಮಾರ್ ದೇಶಪಾಂಡೆ
ಬೆಂಗಳೂರು: ಮರದ ಕೊಂಬೆ ತಲೆ ಮೇಲೆ ಬಿದ್ದು ಮೆದುಳಿನ ಭಾಗದಲ್ಲಿ ರಕ್ತ ಸ್ರಾವವಾಗಿ ಸಾವಿನ ದವಡೆಯಲ್ಲಿದ್ದ ವ್ಯಕ್ತಿಗೆ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಫೋರ್ಟಿಸ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ ನಿರ್ದೇಶಕ ಡಾ. ರಾಜಕುಮಾರ್ ದೇಶಪಾಂಡೆ, ೩೫ ವರ್ಷದ ವ್ಯಕ್ತಿ ಬೆಳಗ್ಗಿನ ಜಾವ ಉದ್ಯಾನವನದಲ್ಲಿ ವಾಕಿಂಗ್ ಮಾಡುವ ವೇಳೆ ಮರದ ಕೊಂಬೆಯೊಂದು ನೇರವಾಗಿ ಅವರ ತಲೆ ಮೇಲೆ ಬಿದ್ದ ಪರಿಣಾಮ ತಲೆಗೆ ತೀವ್ರತರವಾದ ಗಾಯವಾಗಿ ಸಾಕಷ್ಟು ರಕ್ತ ಕಳೆದುಕೊಂಡಿದ್ದರು. […]