ಶಾಸಕ ಬಿ. ವೈ. ವಿಜಯೇಂದ್ರ ದೀಪಾವಳಿ ಗಿಫ್ಟ್- ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ ಜೆ. ಪಿ. ನಡ್ಡಾ

ವಿಜಯಪುರ: ದೀಪಾವಳಿ ಗಿಫ್ಟ್ ಎಂಬಂತೆ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಪುತ್ರ ಮತ್ತು ಶಿಕಾರಿಪುರ ಶಾಸಕ ಬಿ. ವೈ. ವಿಜಯೇಂದ್ರ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ.

ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ನೇಮಕ ಮಾಡಿ ಜೆ. ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ.  ಈವರೆಗೆ ರಾಜ್ಯಾಧ್ಯಕ್ಷರಾಗಿದ್ದ ನಳೀನಕುಮಾರ ಕಟೀಲ ಅವರ ಬದಲಾವಣೆ ಮಾತು ಬಹಳ ದಿನಗಳಿಂದಲೇ ಕೇಳಿ ಬರುತ್ತಿತ್ತು.  ಈ ಮಧ್ಯೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಸಿ. ಟಿ. ರವಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಹೆಸರುಗಳು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಗಾಗ ಕೇಳಿ ಬಂದಿದ್ದವು.

ಬಿ. ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಜೆ. ಪಿ. ನಡ್ಡಾ ಆದೇಶದ ಪ್ರತಿ

ಈವರೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿದ್ದ ಬಿ. ವೈ. ವಿಜಯೇಂದ್ರ ಅವರನ್ನು ಈಗ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದರಿಂದ ಲಿಂಗಾಯಿತ ಸಮುದಾಯವನ್ನು ಬಿಜೆಪಿ ಜೊತೆ ಹಿಡಿದಿಟ್ಟುಕೊಳ್ಳಲು ಮತ್ತು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರನ್ನು ಸಂಪೂರ್ಣವಾಗಿ ಬಳಸಿಕೊಂಡು ಹೆಚ್ಚೆಚ್ಚು ಲೋಕಸಭೆ ಸ್ಥಾನ ಗಳಿಸಲು ಬಿಜೆಪಿ ಮುಂದಾಲೋಚನೆ ಇದೆ.  ಅಲ್ಲದೇ, ಯುವಕರಾಗಿರುವ ಬಿ. ವೈ. ವಿಜಯೇಂದ್ರ ಅವರನ್ನು ಭವಿಷ್ಯದಲ್ಲಿಯೂ ಪಕ್ಷ ಸಂಘಟನೆಗೆ ಬಳಸಿಕೊಂಡು ಮತ್ತೆ ಗತವೈಭವಕ್ಕೆ ಮರಳುವ ಮುಂದಾಲೋಚನೆಯಿಂದ ಈ ನೇಮನೇಮಕ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಬಿ. ಎಸ್. ಯಡಿಯೂರಪ್ಪ ಮುಖ್ಯಮಂಸ್ಥಿ ಸ್ಥಾನದಿಂದ ಕೆಳಗಿಳಿದ ಮೇಲೆ ಅದರ ಪರಿಣಾಮ ಎಂಬಂತೆ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನೆಡೆಯುಂಟಾಗಿ ಕಾಂಗ್ರೆಸ್ ಭರ್ಜಿರಿಯಾಗಿ ಜಯಗಳಿಸಿ ಅಧಿಕಾರಕ್ಕೆ ಬಂದಿತ್ತು.

ಈಗ ಯುವ ನಾಯಕ ಬಿ. ವೈ. ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ಎಷ್ಟರ ಮಟ್ಟಿಗೆ ಪರಿಣಾಮ ಬೀರಲಿದೆ ಎಂಬುದು ಲೋಕಸಭೆ ಚುನಾವಣೆ ಬಳಿಕ ತಿಳಿಯಲಿದೆ.

Leave a Reply

ಹೊಸ ಪೋಸ್ಟ್‌