ನೆಹರು ಅವರು ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದಾರೆ- ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ

ಬೆಂಗಳೂರು: ಜವಾಹರಲಾಲ ನೆಹರು ಅವರು ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದಾರೆ.  ಅವರ ದೂರದೃಷ್ಟಿಯ ಫಲವನ್ನು ಪ್ರತಿಯೊಬ್ಬರು  ಅನುಭವಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  

ಮಾಜಿ ಪ್ರಧಾನಿ ಜವಾಹರಲಾಲ ನೆಹರೂ ಅವರ 134ನೇ ಜನ್ಮ ದಿನೋತ್ಸವದ ಅಂಗವಾಗಿ ವಿಧಾನಸೌಧದಲ್ಲಿ ಇರುವ ಪ್ರತಿಮೆಗೆ ಹೂಮಾಲೆ ಹಾಕಿ ಗೌರವ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ ಮೌಲ್ಯಗಳು. ಈ ಮೌಲ್ಯಗಳನ್ನು ಪ್ರಧಾನಮಂತ್ರಿಯಾಗಿ ಭಾರತದಲ್ಲಿ ನೆಲೆಯೂರಿಸಲು ಶ್ರಮಿಸಿದರು.  ಈ ಮೌಲ್ಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ನೆಹರೂ ಅವರಿಗೆ ನಾವು ಸಲ್ಲಿಸುವ ಅರ್ಥಪೂರ್ಣ ಶ್ರದ್ಧಾಂಜಲಿ ಎಂದು ಹೇಳಿದರು.

ಬೆಂಗಳೂರಿನಲ್ಲಿ ಪಂ. ಜವಾಹರಲಾಲ ನೆಹರು ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಎಸ್. ಸಿದ್ಧರಾಮಯ್ಯ ಪಾಲ್ಗೋಂಡು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು

ಮಕ್ಕಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಕಾರಣಕ್ಕೇ ದೇಶದ ಮಕ್ಕಳ ಪಾಲಿಗೆ ಚಾಚಾ ನೆಹರೂ ಆದರು. ಸ್ವಾತಂತ್ರ್ಯ ಹೋರಾಟದಲ್ಲಿ 9 ವರ್ಷಗಳ ಕಾಲ ಜೈಲುವಾಸ ಅನುಭಸಿದ್ದರು. ಸ್ವಾತಂತ್ರ್ಯಾ ನಂತರದಲ್ಲಿ ದೇಶದ ಪ್ರಧಾನಿಯಾಗಿ ಆಧುನಿಕ ಭಾರತದ ಶಿಲ್ಪಿ ಎನ್ನಿಸಿಕೊಂಡರು ಎಂದು ವಿವರಿಸಿದರು.

ನೆಹರೂ ಅವರು ಪ್ರಧಾನಿ ಆಗಿ ವಿರೋಧ ಪಕ್ಷದವರು ಮಾತಾಡುವಾಗ ಸಹನೆಯಿಂದ ಕೇಳಿಸಿಕೊಳ್ಳುತ್ತಿದ್ದರು. ವಿರೋಧ ಪಕ್ಷದವರ ಮಾತಿಗೆ ಗೌರವ ಕೊಡುತ್ತಿದ್ದ ಘನತೆಯ ವ್ಯಕ್ತಿತ್ವ ಅವರದ್ದಾಗಿತ್ತು ಎಂದು ಸ್ಮರಿಸಿದರು.

ಯೋಜನಾ ಆಯೋಗ ರಚಿಸಿದರು. ಪಂಚವಾರ್ಷಿಕ ಯೋಜನೆ ಜಾರಿಗೆ ತಙದರು. ಕೊನೆ ಕ್ಷಣದವರೆಗೂ ಪ್ರಜಾಪ್ರಭುತ್ವ, ಜಾತ್ಯತೀತ ತತ್ವ, ಸಮಾಜವಾದದ ಮೌಲ್ಯಗಳನ್ನು ಜನಮಾನಸಕ್ಕೆ ವಿಸ್ತರಿಸಲು ಶ್ರಮಿಸಿದರು ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಎಚ್ ಡಿ ಕೆಗೆ ಹೊಟ್ಟೆಕಿಚ್ಚು

ಒಂದು ಕೋಟಿಗೂ ಅಧಿಕ ಮಹಿಳೆಯರು ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಇದು ಸಾಧನೆ ಅಲ್ವಾ ? ಈ ಸಾಧನೆಗಳನ್ನು ಎಚ್  ಡಿ ಕೆ ಗೆ ಸಹಿಸಲು ಆಗುತ್ತಿಲ್ಲ. ಈ ಕಾರಣಕ್ಕೇ ಪರದಾಡುತ್ತಿದ್ದಾರೆ ಎಂದು ಇದೇ ವೇಳೆ ಸಿಎಂ ಮಾಧ್ಯಮದವರ ಪ್ರಶ್ನೆಗೆ ಎಸ್. ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದರು.

ಈ ಸಂದರ್ಭದಲ್ಲಿ ಡಿಸಿಎಂ ಡಿ. ಕೆ. ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌