ನ. 20ಕ್ಕೆ ಬಸವ ನಾಡಿಗೆ ಸಿಎಂ ಸಿದ್ಧರಾಮಯ್ಯ- ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಭಾಗಿ- ಶಿವಾನಂದ ಎಸ್. ಪಾಟೀಲ

ವಿಜಯಪುರ: ನಗರದಲ್ಲಿ ನ. 20 ರಂದು ನಡೆಯಲಿರುವ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಭಾಗವಹಿಸಲಿದ್ದಾರೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಎಪಿಎಂಸಿ ಸಚಿವ ಶಿವಾನಂದ ಎಸ್. ಪಾಟೀಲ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಮತ್ತು ಸಹಕಾರ ಮಹಾಮಂಡಳದಿಂದ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ನ. 20 ರಂದು ಸೋಮವಾರ ನಡೆಯಲಿದೆ.  ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆಶ್ರಯದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಸಹಕಾರ ಸಂಘ, ಸಂಸ್ಥೆಗಳು ಹಾಗೂ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ ಜಿಲ್ಲಾ ಯೂನಿಯನ್‌ ಹಾಗೂ ಸಹಕಾರ ಸಂಘ ಸಂಸ್ಥೆಗಳ ಸಹಯೋಗವಿದೆ ಎಂದು ತಿಳಿಸಿದರು.

ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಸಚಿವ ಶಿವಾನಂದ ಎಸ್. ಪಾಟೀಲ ಮಾತನಾಡಿದರು

ಈ ಸಂದರ್ಭದಲ್ಲಿ ಸಿಎಂ ಡಿಸಿಸಿ ಬ್ಯಾಂಕಿನ ಶತಮಾನೋತ್ಸವ ಭವನವನ್ನು ಉದ್ಘಾಟಿಸಲಿದ್ದಾರೆ.  ಡಿಸಿಎಂ ಡಿ. ಕೆ. ಶಿವಕುಮಾರ್, ಸಹಕಾರ ಸಚಿವ ಕೆ. ಎನ್. ರಾಜಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಡಿಸಿಸಿ ಬ್ಯಾಂಕಿನ ಅಧ್ಯಕ್ಷರೂ ಆಗಿರುವ ತಾವು ಸೇರಿದಂತೆ ಅನೇಕ ಸಚಿವರು ಜಿಲ್ಲೆಯ ಸಂಸದರು, ಶಾಸಕರು ಹಿರಿಯ ಸಹಕಾರಿಗಳು ಮತ್ತು ಅಧಿಕಾರಿಗಳು ಸಹ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಹೊರ್ತಿಯ ಶಾಂತೇಶ್ವರ ವಿವಿಧೋದ್ದೇಶಗಳ ಸಹಕಾರ ಸಂಘದ ಕೆಲ ಉದ್ಘಾಟನಾ ಕಾರ್ಯಕ್ರಮಗಳನ್ನು ಸಿಎಂ ನೆರವೇರಿಸಲಿದ್ದಾರೆ ಎಂದು ಶಿವಾನಂದ ಎಸ್. ಪಾಟೀಲ ತಿಳಿಸಿದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ರಾಜಶೇಖರ ಗುಡದಿನ್ನಿ, ಎಂ. ಆರ್. ಪಾಟೀಲ, ಬಿ. ಎಸ್. ಪಾಟೀಲ ಯಾಳಗಿ, ಗುರುಶಾಂತ ನಿಡೋಣಿ, ನಿರ್ದೇಶಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌