ಐತಿಹಾಸಿಕ ಸ್ಮಾರಕಗಳ ವೀಕ್ಷಣೆ ನಡೆಸಿದ ಸಚಿವ ಎಚ್. ಕೆ. ಪಾಟೀಲ
ವಿಜಯಪುರ: ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ ಅವರು ನಮ್ಮ ಸ್ಮಾರಕ ದರ್ಶನ ಮತ್ತು ಸಂರಕ್ಷಣೆಗಾಗಿ ಪ್ರವಾಸ ಕಾರ್ಯಕ್ರಮದ ಅಂಗವಾಗಿ ಪ್ರವಾಸೋದ್ಯಮ ಇಲಾಖೆ ಬಸ್‌ನ ಮೂಲಕ ಪ್ರವಾಸ ಕೈಗೊಂಡು ವಿಜಯಪುರ ಜಿಲ್ಲೆಯ ನಾನಾ ಐತಿಹಾಸಿಕ ಸ್ಮಾರಕಗಳನ್ನು ವೀಕ್ಷಿಸಿದರು. ಈ ಸ್ಮಾರಕಗಳಲ್ಲಿ ಅಳವಡಿಸಲಾಗಿರುವ ಕಲೆ, ಶಿಲ್ಪಕಲೆ, ಸಂಸ್ಕೃತಿಯನ್ನು ಬಿಂಬಿಸುವ ಚಿತ್ರಕಲೆಯನ್ನು ವೀಕ್ಷಿಸಿ, ಐತಿಹಾಸಿಕ ಸ್ಮಾಕರಗಳ ಸಂರಕ್ಷಣೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಬೆಳಿಗ್ಗೆ ಮುತ್ತಗಿಯಲ್ಲಿರುವ ಸ್ಮಾರಕ ಹಾಗೂ ದೇವಾಲಯಗಳ ವೀಕ್ಷಣೆ ನಡೆಸಿ, ವಿಜಯಪುರಕ್ಕೆ ಆಗಮಿಸಿದ ಸಚಿವರು, […]
ಸೈಕ್ಲಿಂಗ್ ವೆಲೊಡ್ರೊಂ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ- ಎನ್. ಮಂಜುನಾಥ ಪ್ರಸಾದ ಸೂಚನೆ
ವಿಜಯಪುರ: ನಗರದ ಹೊರವಲಯದ ಭೂತನಾಳ ಗ್ರಾಮದ ಹತ್ತಿರ ನಿರ್ಮಾಣವಾಗುತ್ತಿರುವ ಸೈಕ್ಲಿಂಗ್ ವೆಲೊಡ್ರೊಂ ಬಾಕಿ ಕಾಮಗಾರಿ ಒಂದು ತಿಂಗಳೊಳಗಾಗಿ ಪೂರ್ಣಗೊಳಿಸುವಂತೆ ಸಹಕಾರ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸೈಕ್ಲಿಂಗ್ ವೆಲೊಡ್ರೊಂ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಕಾಮಗಾರಿಗೆ ಪೂರಕವಾಗಿ ಹೆಚ್ಚುವರಿ ಕಾಮಗಾರಿ ಕೈಗೆತ್ತಿಕೊಳ್ಳಲು ಅವಶ್ಯವಿರುವ ಅನುದಾನ ಕೋರಿ ಸರಕಾರಕ್ಕೆ […]