ಜಿಲ್ಲಾ ಪ್ರವಾಸಿ ತಾಣಗಳಲ್ಲಿ ಬುದ್ಧವಿಹಾರ ಸೇರ್ಪಡೆ- ಯಾತ್ರಿ ನಿವಾಸ ನಿರ್ಮಾಣಕ್ಕೆ ಅನುದಾನ- ಸಚಿವ ಎಚ್. ಕೆ. ಪಾಟೀಲ ವಾಗ್ದಾನ

ವಿಜಯಪುರ: ಜಿಲ್ಲಾ ಪ್ರವಾಸದಲ್ಲಿರುವ ಕರ್ನಾಟಕ ಸರಕಾರದ ಪ್ರವಾಸೋದ್ಯಮ ಸಚಿವ ಎಚ್. ಕೆ.  ಪಾಟೀಲ ಅವರು ನಗರದ ಸಾರಿಪುತ್ರ- ಬೋಧಿಧಮ್ಮ ಬುದ್ಧವಿಹಾರಕ್ಕೆ ಭೇಟಿ ನೀಡಿದರು. ಬುದ್ಧವಿಹಾರ ನಿರ್ಮಾಣ ಸಮಿತಿಯ ಆಡಳಿತ ಮಂಡಳಿಯ ಮನವಿಗೆ ಸ್ಪಂದಿಸಿದ ಸಚಿವ ಎಚ್.ಕೆ. ಪಾಟೀಲ ಅವರು, ಭಂತೆ ಬೋಧಿಧಮ್ಮ ಅವರಿಂದಆಶೀರ್ವಾದ ಪಡೆದು ಮಾತನಾಡಿದರು. ಬಳಿಕ ಮಾತನಾಡಿದ ಅವರು ಹೃದಯ ಭಾಗದಲ್ಲಿರುವ ಬುದ್ಧ ವಿಹಾರವನ್ನು ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಸೇರಿಸುವುದಲ್ಲದೆ ವಿಹಾರದ ಆವರಣದಲ್ಲಿ ಯಾತ್ರಿ ನಿವಾಸ ನಿರ್ಮಿಸಿ ಕೊಡುವುದಾಗಿ ವಾಗ್ದಾನ ಮಾಡಿದರು.  ಅಲ್ಲದೇ, ಯಾತ್ರಿ ನಿವಾಸದ […]

ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಯೊಂದಿಗೆ ಪ್ರವಾಸೋದ್ಯಮಕ್ಕೆ ಒತ್ತು ನೀಡಿ- ಎಚ್. ಕೆ. ಪಾಟೀಲ

ವಿಜಯಪುರ: ಐತಿಹಾಸಿಕ ತಾಣಗಳಿಂದ ಕೂಡಿರುವ ವಿಜಯಪುರ ಜಿಲ್ಲೆಯಲ್ಲಿರುವ ಸ್ಮಾರಕಗಳ ರಕ್ಷಣೆ, ಸಂರಕ್ಷಣೆ ಸೇರಿದಂತೆ ಪ್ರವಾಸೋದ್ಯಮ ಉತ್ತೇಜನಕ್ಕೆ ಪೂರಕವಾಗಿ ಕ್ರಮವಹಿಸುವಂತೆ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್. ಕೆ. ಪಾಟೀಲ ಅವರು ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರವಾಸೋದ್ಯಮ ಸೇರಿದಂತೆ ನಾನಾ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಭಾರತೀಯ ಪುರಾತತ್ವ ಇಲಾಖೆ, ಕರ್ನಾಟಕ ಪ್ರಾಚ್ಯವಸ್ತು ಸಂಗ್ರಹಾಲಯ, ಪ್ರವಾಸೋದ್ಯಮ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯತೆಯಿಂದ  ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕು. ಸ್ಮಾರಕಗಳ ರಕ್ಷಣೆಗೆ ಒತ್ತು ನೀಡಿ, ಸ್ಮಾರಕಗಳಲ್ಲಿ ಸ್ವಚ್ಛತೆಗೆ […]

ನ. 24, 25 ರಂದು ಭಾವಸಾರ ಕ್ಷತ್ರೀಯ ಭವನ ಉದ್ಘಾಟನೆ- ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಭಾಗಿ

ವಿಜಯಪುರ: ನಗರದ ಭಾವಸಾರ ಕ್ಷತ್ರೀಯ ಸಮಾಜದ ನೂತನ ಸಾಂಸ್ಕೃತಿಕ ಭವನ ಉದ್ಘಾಟನೆ ಸಮಾರಂಭ ನ. 24 ಮತ್ತು 25 ರಂದು ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ ಎಂದು ಭಾವಸಾರ ಕ್ಷತ್ರೀಯ ಸಮಾಜದ ಜಿಲ್ಲಾಧ್ಯಕ್ಷ ರಾಜೇಶ ದೇವಗಿರಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ನಗರದ ಬಿಎಲ್.ಡಿ.ಇ ಎಂಜಿನಿಯರಿಂಗ್ ಕಾಲೇಜ್ ಎದುರಿನ ಆನಂದ ನಗರದಲ್ಲಿ ರೂ. 2.65 ಕೋ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಭಾವಸಾರ ಕ್ಷತ್ರೀಯ ಸಮಾಜದ ಸಾಂಸ್ಕೃತಿಕ ಭವನವನ್ನು ನ.24 ರಂದು  […]