ವೈದ್ಯ ವಿದ್ಯಾಥಿ೯ಗಳು ಸೈನಿಕರಂತೆ ಸಮಯ ಪ್ರಜ್ಞೆ, ಚುರುಕುತನ, ಶ್ರದ್ದೆ, ಸರಳತೆ ಅಳವಡಿಸಿಕೊಳ್ಳಬೇಕು- ಡಾ. ಶ್ರೀಪಾದ ಹೆಗಡೆ
ಬಾಗಲಕೋಟೆ: ಇಂದಿನ ವೈದ್ಯ ವಿದ್ಯಾಥಿ೯ಗಳು ವೃತ್ತಿ ಜೀವನದಲ್ಲಿ ಯಶಸ್ಸು ಕಾಣಬೇಕಾದರೆ ಸೈನಿಕರಂತೆ ಸಮಯ ಪ್ರಜ್ಞೆ, ಚುರುಕುತನ, ಶ್ರದ್ದೆ ಮತ್ತು ಸರಳತೆ ಗುಣಗಳನ್ನು ಳವಡಿಸಿಕೊಳ್ಳಬೇಕು ಎಂದು ದೆಹಲಿಯ ಎನ್. ಸಿ. ಎಚ್. ಪದಾಧಿಕಾರಿ ಡಾ. ಶ್ರೀಪಾದ ಹೆಗಡೆ ಹೇಳಿದ್ದಾರೆ. ನಗರದ ಬಿ.ವಿ.ವಿ.ಎಸ್ ಹೋಮಿಯೋಪಥಿಕ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆಯೋಜಿಸಿದ 2023- 24 ನೇ ವರ್,ದ ಬಿಎಚ್ಎಂಎಸ್ ಪದವಿ ಕೋಸ೯ನ ಶೈಕ್ಷಣಿಕ ವರ್ಷಾರಂಭ ಕಾಯ೯ಕ್ರಮ ಉದ್ಫಾಟಿಸಿ ಅವರು ಮಾತನಾಡಿದರು. ಹೋಮಿಯೋಪಥಿ ಕಾಲೇಜಿಗೆ ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು ಒದಗಿಸಿದ ಸಂಸ್ಥೆಯ ಚೇರಮನ್ ಡಾ.ವೀರಣ್ಣ […]
ಸಾಧನೆ ನಿರಂತರವಾಗಿರಬೇಕು – ಎಸ್. ಎಂ. ಪಾಟೀಲ ಗಣಿಹಾರ
ವಿಜಯಪುರ: ಸಾಧನೆ ನಿರಂತರವಾಗಿರಬೇಕು. ಸಾಧಕರಿಗೆ ಶಕ್ತಿ ತುಂಬವ ಕೆಲಸ ಮಾಡಬೇಕು ಎಂದು ಮಧುವನ ಗೆಳೆಯರ ಬಳಗದ ಮುಖಂಡ ಎಸ್. ಎಂ. ಪಾಟೀಲ ಗಣಿಹಾರ ಹೇಳಿದ್ದಾರೆ. ನಗರದ ಹೊಟೇಲ್ ಮಧುವನ ಇಂಟರನ್ಯಾಷನಲ್ ನಲ್ಲಿ ಮಧುವನ ಗೆಳೆಯರ ಬಳಗದ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾನಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಮಹನೀಯರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದ್ದು ತುಂಬ ಸಂತಸವನ್ನುಂಟು ಮಾಡಿದೆ. ಇವರ ಸಾಧನೆ […]
ವಿಕಲಚೇತನರ ಕಲ್ಯಾಣಕ್ಕೆ ಸದಾ ಬದ್ಧನಾಗಿದ್ದೇನೆ- ಕೀಳರಿಮೆ ಭಾವನೆ ತೊರೆದು ಸ್ವಾವಲಂಬಿಗಳಾಗಿ ಬದುಕಿ- ಎಂ. ಬಿ. ಪಾಟೀಲ
ವಿಜಯಪುರ: ವಿಶೇಷ ಚೇತನರು ತಮ್ಮಲ್ಲಿರುವ ಕೀಳರಿಮೆ ಭಾವನೆ ತೊರೆದು ಸಕಾರಾತ್ಮಕ ಯೋಚನೆಯೊಂದಿಗೆ ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಂಡು ಸ್ವಾವಲಂಬಿಗಳಾಗಿ ಜೀವನ ನಡೆಸುವಂತೆ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ. ಬಿ. ಪಾಟೀಲ ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ […]
ಅಪಘಾತ ರಹಿತ ಚಾಲನೆ: ಮುಖ್ಯಮಂತ್ರಿಗಳಿಂದ ಬಸವ ನಾಡಿನ ಆರು ಚಾಲಕರಿಗೆ ಪದಕ
ವಿಜಯಪುರ: ಶಕ್ತಿ ಗ್ಯಾರಂಟಿಗೆ ಶತಕೋಟಿ ಸಂಭ್ರಮದ ಅಂಗವಾಗಿ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ಆರು ಜನ ಚಾಲಕರು ಅಪಘಾತ ರಹಿತ ಚಾಲನೆಗೆ ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಿಂದ ಚಿನ್ನದ ಪದಕ ಪಡೆದುಕೊಂಡಿದ್ದಾರೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಮೊಹಮ್ಮದ ಫೈಜ್ ಅವರು ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಿಜಯಪುರ ನಿಗಮದ ಚಾಲಕರಾದ ಮುದ್ದೇಬಿಹಾಳ ಘಟಕದ ಸಿ. ಎಸ್. ಕಸಬೇಗೌಡರ, ಸಿಂದಗಿಯ ಪಿ. […]
ಲೋಕಸಭೆ ಟಿಕೆಟ್ ನನಗೆ ಸಿಗಲಿದೆ- ಹೈಕಮಾಂಡ್ ಮೇಲೆ ಸಂಪೂರ್ಣ ವಿಶ್ವಾಸವಿದೆ- ರಮೇಶ ಜಿಗಜಿಣಗಿ
ವಿಜಯಪುರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಈ ಬಾರಿಯೂ ನನಗೇ ಟಿಕೆಟ್ ಸಿಗುತ್ತದೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ವಿಷಯದಲ್ಲಿ ನಮ್ಮ ರಾಷ್ಟ್ರೀಯ ನಾಯಕರು ಯಾರಿಗೆ ಟಿಕೆಟ್ ಕೊಡುತ್ತಾರೆ ಅವರು ಅಭ್ಯರ್ಥಿಯಾಗುತ್ತಾರೆ. ನಾನೇ ಅಭ್ಯರ್ಥಿಯಾಗಬೇಕು ಎಂದು ಹಟ ಇಲ್ಲ. ಯಾರು ಗೆಲ್ಲುತ್ತಾರೆ? ಗೆಲ್ಲಲು ಸಾಧ್ಯವಿದೆ ಅದರ ಕುರಿತು ಪಕ್ಷದವರು ಯೋಚನೆ ಮಾಡಿ ಟಿಕೆಟ್ ಕೊಡುತ್ತಾರೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ. ಪಕ್ಷದವರು ನನಗೇ […]
ಸಾರವಾಡ ದ್ಯಾಮವ್ವದೇವಿ, ಬುರಣಾಪುರ ರಸ್ತೆಯ ಘತ್ತರಗಿ ಭಾಗಮ್ಮ ಜಾತ್ರಾ ಮಹೋತ್ಸವದಲ್ಲಿ ಸಚಿವ ಎಂ. ಬಿ. ಪಾಟೀಲ ಭಾಗಿ
ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಇಂದು ಸೋಮವಾರ ಬಬಲೇಶ್ವರ ತಾಲೂಕಿನ ಸಾರವಾಡ ದ್ಯಾಮವ್ವದೇವಿ ಮತ್ತು ವಿಜಯಪುರ ನಗರದ ಬುರಣಾಪುರ ರಸ್ತೆಯಲ್ಲಿರುವ ಘತ್ತರಗಿ ಭಾಗಮ್ಮ ದೇವಿಯ ಜಾತ್ರೆಯಲ್ಲಿ ಪಾಲ್ಗೋಂಡು ದೇವಿಯ ಆಶೀರ್ವಾದ ಪಡೆದರು. ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ನಡೆಯುತ್ತಿರುವ ದ್ಯಾಮವ್ವದೇವಿ ದೇವಸ್ಥಾನದ ಉದ್ಘಾಟನೆ ಮತ್ತು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೋಂಡ ಸಚಿವರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಾರವಾಡ ಗ್ರಾಮಸ್ಥರು […]
ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ- ಸಂವಿಧಾನದ ಆಶಯದಂತೆ ನಡೆದುಕೊಳ್ಳೋಣ- ಎಡಿಸಿ ಮಹಾದೇವ ಮುರಗಿ ಕರೆ
ವಿಜಯಪುರ: ಸಂವಿಧಾನದ ಪ್ರಸ್ತಾವನೆಯ ಆಶಯವನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಂಡು, ಸಂವಿಧಾನಕ್ಕನುಗುಣವಾಗಿ ಕಾರ್ಯನಿರ್ವಹಿಸಬೇಕು ಹಾಗೂ ನಡೆದುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಹೇಳಿದರು. ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತದ ಸಂವಿಧಾನದ ಪ್ರಸ್ತಾವನೆಯನ್ನು ಅಧಿಕಾರಿ,ಸಿಬ್ಬಂದಿಗೆ ಬೋಧಿಸಿ, ಮಾತನಾಡಿದ ಅವರು,ಎಲ್ಲರಿಗೂ ರಕ್ಷಣೆ ಒದಗಿಸುತ್ತದೆ. ಸಂವಿಧಾನವು ದೇಶದ ಬಹು ದೊಡ್ಡ ಶಕ್ತಿಯಾಗಿದೆ. ಅದು, ಜನರನ್ನು ಸಶಕ್ತಗೊಳಿಸಿದೆ. ಡಾ. ಬಿ. ಆರ್. ಅಂಬೇಡ್ಕರ ಅವರು ದೇಶಕ್ಕೆ ಬಹು ದೊಡ್ಡ ಸಂವಿಧಾನ […]
ಸಕ್ಕರೆ ಕರ್ಖಾನೆ ಮಾಲೀಕರೊಂದಿಗೆ ಡಿಸಿ ಟಿ. ಭೂಬಾಲನ್ ಸಭೆ- ಸಕಾಲದಲ್ಲಿ ಕಬ್ಬಿನ ಬಿಲ್ ಪಾವತಿಸಲು ಸೂಚನೆ
ವಿಜಯಪುರ: ಕಬ್ಬು ನುರಿಸಿದ 14 ದಿನಗಳಲ್ಲಿ ಸಕ್ಕರೆ ಕರ‍್ಖಾನೆಗಳು ನೇರವಾಗಿ ರೈತರ ಖಾತೆಗಳಿಗೆ ಎಫ್‍ಆರ್‍ಪಿ ದರದಂತೆ ಕಬ್ಬಿನ ಬಿಲ್ಲನ್ನು ಜಮೆ ಮಾಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಸಕ್ಕರೆ ಕರ‍್ಖಾನೆಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಕ್ಕರೆ ಕಾರ್ಕಾನೆಗಳ ಮಾಲೀಕರು ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಬ್ಬಿನ ಬಿಲ್ ಪಾವತಿಸುವಲ್ಲಿ ಯಾವುದೇ ವಿಳಂಬ ಧೋರಣೆ ಅನುಸರಿಸದೇ ಸಕಾಲದಲ್ಲಿ ಮತ್ತು ನಿಗದಿತ ದರದನ್ವಯ ಬಿಲ್ ಪಾವತಿ ಮಾಡಬೇಕು. ಸಕ್ಕರೆ ಕರ‍್ಖಾನೆ ಮಾಲಿಕರು […]
ಸಂವಿಧಾನ ಸಮಾನತೆ ನೀಡಿದ್ದರೂ ಮಹಿಳೆಯರು ಇನ್ನೂ ವಂಚಿತರಾಗುತ್ತಿರುವುದು ವಿಷಾಧನೀಯ- ಪ್ರೊ. ಚಂದ್ರಮ್ಮ
ವಿಜಯಪುರ: ನಮ್ಮ ಸಂವಿಧಾನವು ಮಹಿಳೆಯರಿಗಾಗಿ ಸಮಾನ ವೇತನ ಕಾಯಿದೆ, ಮಾತೃತ್ವ ಸವಲತ್ತು ಕಾಯಿದೆ, ಬಹು ಪತ್ನಿತ್ವ ನಿಷೇಧ ಕಾಯಿದೆ, ಅಂತರ್ಜಾತಿ ವಿವಾಹ ಕಾಯಿದೆ ಸೇರಿದಂತೆ ಹಲವಾರು ವಿಧಿಗಳನ್ನು ನೀಡಿದ್ದರು ಇಂದಿಗೂ ಹಲವು ಕಡೆಗಳಲ್ಲಿ ಮಹಿಳೆಯರು ಇದರಿಂದ ವಂಚಿತರಾಗುತ್ತಿರುವುದು ವಿಷಾದನೀಯ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದ ಪ್ರಭಾರ ಕುಲಸಚಿವೆ ಪ್ರೊ. ಚಂದ್ರಮ್ಮ ಎಂ. ಅಭಿಪ್ರಾಯಪಟ್ಟಿದ್ದಾರೆ. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಮಹಿಳಾ ಅಧ್ಯಯನ ಕೇಂದ್ರ ಹಾಗೂ ಡಾ. ಬಿ. ಆರ್. […]