ಗುಮ್ಮಟ ನಗರಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ 67ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಗೌರವ ಸಮರ್ಪಣೆ

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಹಾಗೂ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ನಗರದ  ಅಂಬೇಡ್ಕರ್ ವೃತ್ತದಲ್ಲಿನ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಿದರು.

ವಿಜಯಪುರದಲ್ಲಿ ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಅಂಗವಾಗಿ ಜಿಲ್ಲಾಡಳಿತದಿಂದ ಗೌರವ ನಮನ ಸಲ್ಲಿಸಲಾಯಿತು

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಮಹಾದೇವ ಮುರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಬಸಣೆಪ್ಪ ಕಲಶೆಟ್ಟಿ,ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಪುಂಡಲಿಕ ಮಾನವರ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಮುಖಂಡರು ಭಾಗವಹಿಸಿದ್ದರು.

Leave a Reply

ಹೊಸ ಪೋಸ್ಟ್‌