ಪಶು ಸಖಿಯರು ಸೇವಾ ಮನೋಭಾವದಿಂದ ಕಾರ್ಯನಿರ್ವಹಣೆ ಮಾಡಬೇಕು- ಜಿ. ಪಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ(ಡೇ-ಎನ್‌ಆರ್‌ಎಲ್‌ಎಂ) ಹಾಗೂ ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವಿಜಯಪುರ ಇವರುಗಳ ಸಹಯೋಗದೊಂದಿಗೆ ರುಡಸೆಟ್ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಆರು ದಿನಗಳ ಮೊದಲನೇ ಮಾಡ್ಯೂಲ್ ಪಶು ಸಖಿಯರ ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಆರು ದಿನಗಳ ಈ ಪಶು ಸಖಿಯರ ತರಬೇತಿ ಕಾರ್ಯಾಗಾರವು ಬಹಳ ಉಪಯುಕ್ತವಾದ ತರಬೇತಿಯಾಗಿದೆ.  ಈಗಾಗಲೇ ಕಳೆದ ಒಂದು ವರ್ಷದಿಂದ ನಮ್ಮ ಜಿಲ್ಲೆಯ ಎಲ್ಲಾ ತಾಲೂಕುಗಳ ಪಶು ಚಿಕಿತ್ಸಾಲಯಗಳಲ್ಲಿ ಎಲ್ಲ ಪಶು ಸಖಿಯರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲಾ ಪಂಚಾಯತ ವಿಜಯಪುರದಿಂದ ಈಗಾಗಲೇ ಒಂದು ವರ್ಷದ ಪಶು ಸಖಿಯರ ಗೌರವಧನವನ್ನು ಪಾವತಿಸಲಾಗಿದೆ.  ಪಶು ಸಖಿಯರು ತರಬೇತಿಯಲ್ಲಿ ಕಲಿಯುವ ವಿಷಯಗಳನ್ನು ತಮ್ಮ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು. ಎಲ್ಲ ರೈತ್ತರನ್ನು ಸಂಘಟಿಸುವುದು ನಿಮ್ಮ ಕಾರ್ಯವಾಗಬೇಕು. ರೈತ್ತರನ್ನು ಸಂಘಟಿಸುವ ಮೂಲಕ ಅವರಿಗೆ ಸರಕಾರ ಮತ್ತು ಇಲಾಖೆಯಿಂದ ಸಿಗುವ ಎಲ್ಲ ಸೌಲಭ್ಯಗಳ ಮಾಹಿತಿಯನ್ನು ಒದಗಿಸಬೇಕು.  ಗ್ರಾಮದ ಎಲ್ಲ ರೈತ್ತರಿಗೆ ಮತ್ತು ತಮ್ಮ ಗ್ರಾಮದ ಪ್ರತಿ ವ್ಯಕ್ತಿಗೆ ಮಾಹಿತಿ ನೀಡುವ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

 

ಪಶು ಪಶುಸಂಗೋಪನೆ ಇಲಾಖೆ ಮತ್ತು ರೈತರ ನಡುವೆ ಇರುವ ಅಂತರವನ್ನು ತಗ್ಗಿಸಿ ಎರಡರ ನಡುವೆ ಸೇತುವೆಯಾಗಿ ಕಾರ್ಯ ನಿರ್ವಹಿಸಲು ಮತ್ತು ವಿಸ್ತರಣೆ ಚಟುವಟಿಕೆಗಳನ್ನು ಸಮರ್ಪಕವಾಗಿ ತಲುಪಿಸಲು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಿಗೆ ಒಬ್ಬರಂತೆ ನಮ್ಮ ಜಿಲ್ಲೆಯಲ್ಲಿ 211 ಗ್ರಾಮ ಪಂಚಾಯಿತಿಗಳಿಗೆ ಕೃಷಿ ಸಖಿಯರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಪಶು ಸಖಿಯರು ಗ್ರಾಮೀಣ ಭಾಗದ ರೈತ ಮಹಿಳೆಯರಿಗೆ ಪಶು ಸಂಗೋಪನೆ ಚಟುವಟಿಕೆಗಳ ಸಮಗ್ರ ಮಾಹಿತಿ ನೀಡುವುದು. ಆಯಾ ಗ್ರಾಮದ ಪಶು ವೈದ್ಯರ ಮಾರ್ಗದರ್ಶನದಲ್ಲಿ ರೋಗ ನಿರೋಧಕ ಲಸಿಕೆ, ಪ್ರಥಮ ಚಿಕಿತ್ಸೆ ಕುರಿತು ಹೆಚ್ಚಿನ ಪ್ರಚಾರ ಕಾರ್ಯಕ್ರಮ ಆಯೋಜಿ,ಬೇಕು.  ಪಶು ಸಖಿಯರ ತರಬೇತಿ ಕೇವಲ ಸೈದ್ದಾಂತಿಕವಾಗಿ ಕೊಠಡಿಗೆ ಮಾತ್ರ ಸೀಮಿತವಾಗದೆ, ಪ್ರಾಯೋಗಿಕವಾಗಿ ಪ್ರಾತ್ಯಕ್ಷಿತವಾಗಿ ನಡೆಯಬೇಕು ಅಂದಾಗ ಮಾತ್ರ ಪಶು ಸಖಿಯರ ತರಬೇತಿ ಅರ್ಥಪೂರ್ಣವಾಗಿ ಯಶಸ್ವಿಯಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ. ಅಶೋಕ ಘೋಣಸಗಿ ಸೇರಿದಂತೆ ಪಶು ಸಂಗೋಪನೆ ಇಲಾಖೆ ಮತ್ತು ಜಿಲ್ಲಾ ಪಂಚಾಯಿತಿ ಎನ್‌ ಆರ್‌ ಎಲ್‌ ಎಂ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌