ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ: ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ಸಶಸ್ತ್ರ ಪಡೆಗಳ ಧ್ವಜ ಸದಾವಕಾಶ- ಡಿಸಿ ಟಿ. ಭೂಬಾಲನ್

ವಿಜಯಪುರ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಆಚರಿಸಲಾಯಿತು.

ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಈ ಸಂದರ್ಭದಲ್ಲಿ ಸಶಸ್ತ್ರ ಪಡೆಗಳ ಸಾಂಕೇತಿಕ ಧ್ವಜ ಬಿಡುಗಡೆಗೊಳಿಸಿ, ನಂತರ ಸಾಂಕೇತಿಕವಾಗಿ ಧ್ವಜ ಸ್ವೀಕರಿಸಿ, ದೇಣಿಗೆ ನೀಡುವುದರ ಮೂಲಕ ಸಾರ್ವಜನಿಕರಿಗೆ ಧ್ವಜಗಳನ್ನು ಮಾರಾಟ ಮಾಡಿ ದೇಣಿಗೆ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು,ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯನ್ನು ದೇಶದ ಎಲ್ಲ ಭಾಗಗಳಲ್ಲಿ ಪ್ರತಿ ವರ್ಷ ಇದೇ ದಿನ ಡಿ.7ರಂದು ಆಚರಿಸಲಾಗುತ್ತಿದೆ. ಸಶಸ್ತ್ರ ಪಡೆಗಳ ಧ್ವಜ ಬಿಡುಗಡೆ ಮಾಡಲಾಗುತ್ತದೆ. ಕೃತಜ್ಞತೆ ಸಲ್ಲಿಸಲು ಹಾಗೂ ಬೆಂಬಲ ವ್ಯಕ್ತಪಡಿಸಲು ಧ್ವಜ ದಿನಾಚರಣೆ ಒಂದು ಸದಾವಕಾಶ ಒದಗಿಸಿ ಕೊಡುತ್ತದೆ.ವೀರ ಯೋಧರ ಕುಟುಂಬಕ್ಕೆ ಬೆಂಬಲ ಒದಗಿಸಲು ಈ ದಿನಾಚರಣೆ ವೇದಿಕೆ.ಈ ನಿಧಿಯನ್ನು ಯುದ್ಧ ಸಂತ್ರಸ್ತರಿಗೆ,ಮಾಜಿ ಸೈನಿಕರು ಅವರ ಅವಲಂಬಿತರ ಸಲುವಾಗಿ ಹಮ್ಮಿಕೊಂಡ ನಾನಾ ಕಲ್ಯಾಣ ಮತ್ತು ಕ್ಷೇಮಾಭಿವೃದ್ಧಿ ಕಾರ್ಯಕ್ರಮಗಳಿಗೆ ವಿನಿಯೋಗಿಸಲಾಗುತ್ತಿದೆ.

ವಿಜಯಪುರ ಡಿಸಿ ಕಚೇರಿಯಲ್ಲಿ ಸಶಸ್ತ್ರಪಡೆಗಳ ಧ್ವಜ ದಿನ ಆಚರಿಸಲಾಯಿತು

ಜಿಲ್ಲಾ ಮಟ್ಟದಲ್ಲಿ ಸೈನಿಕ ಕಲ್ಯಾಣ ಇಲಾಖೆಯು ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರ ಕುಟುಂಬಗಳಿಗೆ ಬಹಳಷ್ಟು ಕೆಲಸ ನಿರ್ವಹಿಸುತ್ತಿದೆ. ಮುಂಬರುವ ದಿನಗಳಲ್ಲಿ ಯೋಧರ ಹಾಗೂ ಅವರ ಕುಟುಂಬದ ದೃಷ್ಟಿಯಿಂದ ಇನ್ನೂ ರಚನಾತ್ಮಕವಾಗಿ ಕಾರ್ಯನಿರ್ವಹಿಸಬೇಕು. ಸೇವಾನಿರತರು ಹಾಗೂ ನಿವೃತ್ತ ಯೋಧರು ಹಾಗೂ ಅವರ ಅವಲಂಬಿತ ಕುಟುಂಬಕ್ಕೆ ಸಮಸ್ಯೆ ಉಂಟಾದರೆ ಅಧಿಕಾರಿ,ಸಿಬ್ಬಂದಿ ತಕ್ಷಣ ಸ್ಪಂದಿಸಬೇಕು .ಸಾರ್ವಜನಿಕರು ಧ್ವಜ ಖರೀದಿಸುವ ಮೂಲಕ ದೇಶದ ಸೈನಿಕರಿಗೆ ಬೆಂಬಲಿಸಬೇಕು ಎಂದು ಅವರು ಹೇಳಿದರು.

ಜಿಲ್ಲೆಯು 2022ನೇ ಸಾಲಿನ ಸಶಸ್ತ್ರ ಪಡೆಗಳ ಧ್ವಜ ನಿಧಿಗೆ ನಿಗದಿಪಡಿಸಲಾದ ಗುರಿ ಸಾಧಿಸಿರುವುದರಿಂದ ಈ ನಿಧಿಯು ಮಾಜಿ ಸೈನಿಕರು ಮತ್ತು ಅವರ ಅವಲಂಬಿತರ ಕಲ್ಯಾಣ ಕಾರ್ಯಕ್ರಮಗಳಿಗೆ ಅಮೂಲ್ಯ ನೆರವು ನೀಡಲಿದ್ದು, ಜಿಲ್ಲೆಯ ಕೊಡುಗೆಯನ್ನು ಪ್ರಶಂಸಿಸುವ ಉದ್ದೇಶದಿಂದ ಪೆÇ್ರೀತ್ಸಾಹಕ ಪಾರಿತೋಷಕ್ಕೆ ಜಿಲ್ಲೆಯು ಭಾಜನವಾಗಿದ್ದು ಹೆಮ್ಮೆ ಮೂಡಿಸುತ್ತಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಅವರು ಮಾತನಾಡಿ, ಮಾಜಿ ಸೈನಿಕರು ಮತ್ತು ಅವರ ಅವಲಂಬಿತರ ಸಲುವಾಗಿ ಆಯೋಜಿಸಲಾದ ನಾನಾ ಕಲ್ಯಾಣ ಮತ್ತು ಕ್ಷೇಮಾಭಿವೃದ್ಧಿ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಧ್ವಜವನ್ನು ಹೆಚ್ಚೆಚ್ಚು ಖರೀದಿಸುವ ಮೂಲಕ ಕೈ ಜೋಡಿಸಬೇಕು ಎಂದು ಅವರು ಹೇಳಿದರು.

ಸೈನಿಕ ಶಾಲೆಯ ಪ್ರಾಂಶುಪಾಲರು ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಬಿμï್ಟ, ಕರ್ನಲ್ ಭೀಮಾಶಂಕರ್ ಹಿಪ್ಪರಗಿ, ಸೈನಿಕ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಶ್ರೀಮತಿ ಜಿ.ಆರ್.ವಿನೂತ, ಮಾಜಿ ಸುಬೇದಾರ ಕ್ಯಾಪ್ಟನ್ ಸೂರ್ಯವಂಶಿ, ಶೇಗುಣಸಿ, ಲೆಫ್ಟಿನೆಂಟ್ ಎಂ.ಸುಭಾನಿ, ಆಯುμï ಇಲಾಖೆಯ ಡಾ.ಆರ್.ಎಸ್. ಪಾಟೀಲ್ ಸೇರಿದಂತೆ ಇತರೆ ಮಾಜಿ ಸೈನಿಕರು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌