ಹಳ್ಳಿಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಸಹಕಾರ ಅಗತ್ಯ- ಜಿ. ಪಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಸಹಕಾರ ಅತಿಮುಖ್ಯವಾಗಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಅಗತ್ಯ ಸಹಕಾರ ನೀಡುವ   ಗ್ರಾಮ ಪಂಚಾಯತಿ ಅಭಿವೃದ್ಧಿ ಕೈ ಜೋಡಿಸುವಂತೆ ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಮನವಿ ಮಾಡಿದ್ದಾರೆ. 

ಬಸವನ ಬಾಗೇವಾಡಿ ತಾಲೂಕಿನ ಕಣಕಾಲ ಮತ್ತು ಮುತ್ತಗಿ ಗ್ರಾಮಗಳಿಗೆ ಭೇಟಿ ನೀಡಿ ನಾನಾ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಅವರು, ಕಣಕಾಲ ಗ್ರಾಮದಲ್ಲಿ ಸರಕಾರಿ ಜಾಗ ಅತಿಕ್ರಮಣವಾಗಿರುವ ಕುರಿತು ಗ್ರಾಮಸ್ಥರೊಂದಿಗೆ ಚರ್ಚಿಸಿದರು.  ಅತೀಕ್ರಮಣವಾಗಿದೆ ಎನ್ನಲಾದ ಸ್ಥಳದಲ್ಲಿ ಹಲವಾರು ವರ್ಷಗಳಿಂದ ವಾಸಿಸುತ್ತಿದ್ದು, ನಮಗೆ ಇಲ್ಲೇ ವಾಸಿಸಲು ಅವಕಾಶ ನೀಡಲು  ಗ್ರಾಮಸ್ಥರು ಮನವಿ ಮಾಡಿದರು.  ಇದಕ್ಕೆ ಸ್ಪಂದಿಸಿದ ಅವರು ಈ ವಿಷಯದ ಕುರಿತು ಸಂಬAಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಅವರು ತಿಳಿಸಿದರು.

ವಿಜಯಪುರ ಜಿ. ಪಂ. ಸಿಇಓ ರಾಹುಲ ಶಿಂಧೆ ಅಂಗನವಾಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಗ್ರಾಮದ ಶಿಶು ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳೊಡನೆ ಮಾತನಾಡಿದರು.  ಕೇಂದ್ರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಮಕ್ಕಳಿಗೆ ಅಗತ್ಯಕ್ಕನುಸಾರ ಹೆಚ್ಚಿನ ಕುರ್ಚಿ ಮತ್ತು ಮೇಜುಗಳನ್ನು ವಿತರಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದ ಅವರು,  ಗ್ರಾಮದಲ್ಲಿ ಸ್ವಚ್ಛತೆಗೆ ಪ್ರಥಮಾಧ್ಯತೆ ನೀಡಬೇಕು. ಅಲ್ಲಲ್ಲಿ ಇರುವ ಕೊಳಚೆಯನ್ನು ನಿವಾರಿಸಿ, ಡಿಡಿಟಿ ಪೌಡರ್ ಸಿಂಪಡಿಸಬೇಕು. ಜಾಸ್ತಿ ನೀರು ನಿಲ್ಲುವ ಸ್ಥಳದಲ್ಲಿ ಸಮುದಾಯ ಇಂಗು ಗುಂಡಿ ನಿರ್ಮಾಣ ಮಾಡಬೇಕು. ಲಭ್ಯವಿರುವ ಗ್ರಾಮ ಪಂಚಾಯತಿ ಅನುದಾನ, 15ನೇ ಹಣಕಾಸು ಯೋಜನೆಯ ಅನುದಾನವನ್ನು ಸದುಪಯೋಗಪಡಿಸಿಕೊಂಡು ಗ್ರಾಮದ ನೈರ್ಮಲ್ಯ ಕಾಪಾಡಿಕೊಳ್ಳಬೇಕು. ಹೆಚ್ಚಿನ ಕಾಮಗಾರಿಗಳು ಅವಶ್ಯಕವಿದ್ದಲ್ಲಿ  ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿಯಮಾನುಸಾರ ಕಾಮಗಾರಿಗಳನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು.

ಗ್ರಾಮಸ್ಥರ ಮನವಿಯನುಸಾರ ಗ್ರಾಮದ ಆರೋಗ್ಯ ಕೇಂದ್ರಕ್ಕೆ ನಿಯಮಾನುಸಾರ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ದುರಸ್ಥಿಯಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ತುರ್ತಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ದುರಸ್ತಿಗೊಳಿಸಿ,ಜನರಿಗೆ ನೀರು ಬಳಸಲು ಅವಕಾಶ ಕಲ್ಪಿಸಲು ಸ್ಥಳದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕಿನ ಮುತ್ತಗಿ ಗ್ರಾಮಕ್ಕೆ ಭೇಟಿ ನೀಡಿದ ಅವರು ಪ್ರಗತಿಯಲ್ಲಿರುವ ರಾಜೀವ ಗಾಂಧಿ ಸೇವಾ ಕೇಂದ್ರದ ಕಾಮಗಾರಿಯನ್ನು ವೀಕ್ಷಣೆ ಮಾಡಿ, ಕಾಮಗಾರಿಯನ್ನು ಅತ್ಯಂತ ಗುಣಮಟ್ಟದಿಂದ ನಿರ್ವಹಿಸಲು ಮತ್ತು ತುರ್ತಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ತಿಳಿಸಿದರು. ನಂತರ ಗ್ರಾಮ ಪಂಚಾಯತಿಗೆ ಭೇಟಿ ನೀಡಿದರು. ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಯಲ್ಲಿ ಅನುಮೋದನೆಗೆ ಬಾಕಿಯಿರುವ ಸಿಬ್ಬಂದಿಗಳು ಅರ್ಹವಿದ್ದಲ್ಲಿ ಅಂತಹವರ ವಿವರವನ್ನು ಅನುಮೋದನೆಗಾಗಿ ಜಿಲ್ಲಾ ಪಂಚಾಯತಿಗೆ ಸಲ್ಲಿಸಲು ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕರು (ಪಂರಾ) ಅವರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿ. ಪಂ. ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ದೇವರ ಹಿಪ್ಪರಗಿ ಕಾರ್ಯ ನಿರ್ವಹಣಾಧಿಕಾರಿ ಭಾರತಿ ಚೆಲುವಯ್ಯ, ಗ್ರಾ. ಪಂ. ಅಧ್ಯಕ್ಷೆ ಶರಣಮ್ಮ ಕುಂಬಾರ ಬಸವನ ಬಾಗೇವಾಡಿ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಪ್ರಕಾಶ ದೇಸಾಯಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಸದಸ್ಯರು, ಸೇರಿದಂತೆ ಜಿ. ಪಂ., ಇತರೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌