ಎಸ್.ಡಿ.ಪಿ.ಐ ವತಿಯಿಂದ ಬೆಳಗಾವಿ ಚಲೋ, ಅಂಬೇಡ್ಕರ್ ಜಾಥಾ- ಗುಮ್ಮಟನಗರಿಯಲ್ಲಿ ಬೃಹತ್ ಜಾಥಾ, ಸಾರ್ವಜನಿಕ ಸಭೆ
ವಿಜಯಪುರ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್.ಡಿ.ಪಿ.ಐ) ವತಿಯಿಂದ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ- ಅಂಬೇಡ್ಕರ್ ಜಾಥಾ ಡಿಸೆಂಬರ್ 6 ರಂದು ಬೆಂಗಳೂರಿನ ವಿಧಾನ ಸೌಧದಿಂದ ಪ್ರಾರಂಭವಾಗಿದ್ದು ಡಿಸೆಂಬರ್ 11 ರಂದು ಬೆಳಗಾವಿಯ ಸುವರ್ಣ ಸೌಧದವರೆಗೆ ನಡೆದು ಸಮಾರೋಪವಾಗಲಿದೆ. ಇದರ ಭಾಗವಾಗಿ ನಗರದಲ್ಲಿ ರಾಜ್ಯ ನಾಯಕರ ಜೊತೆ ಸೇರಿ ನೂರಾರು ಕಾರ್ಯಕರ್ತರು ಜಾಥಾ ಮತ್ತು ಸಾರ್ವಜನಿಕರ ಸಭೆ ನಡೆಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಜಾಥಾದ ಸಂಚಾಲಕ ಮತ್ತು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಆರ್. ಭಾಸ್ಕರಪ್ರಸಾದ, […]
ವಿಜ್ಞಾನ ವಿಷಯದ ಫೋನ್ ಇನ್ ಕಾರ್ಯಕ್ರಮ ಯಶಸ್ವಿ- ವಿಷಯ ತಜ್ಞರಿಂದ ಪರಿಹಾರ ಕಂಡುಕೊಂಡ ವಿದ್ಯಾರ್ಥಿಗಳು
ವಿಜಯಪುರ: ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ವಿಜ್ಞಾನ ವಿಷಯದ ಪೋನ್ ಇನ್ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ವಿಷಯ ತಜ್ಞರಿಂದ ವಿದ್ಯಾರ್ಥಿಗಳು ವಿಜ್ಞಾನ ವಿಷಯದ ಕುರಿತ ಕಲಿಕಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿದ್ದಾರೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎನ್. ಎಚ್. ನಾಗೂರ ಅವರು ತಿಳಿಸಿದ್ದಾರೆ. ಜಿಲ್ಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ವಿಷಯದ ವಿಜಯಪುರದ ಉರ್ದು ಶಿಕ್ಷಕರ ತರಬೇತಿ ಸಂಸ್ಥೆಯ ಸಭಾಭವನದಲ್ಲಿ ಸಂಜೆ 6 ರಿಂದ […]
ಮಾನವ ಹಕ್ಕುಗಳ ಪಾಲನೆ ನಾಗರಿಕರ ಹೊಣೆ- ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ
ವಿಜಯಪುರ: ಮಾನವ ಹಕ್ಕುಗಳ ಪಾಲನೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಹೊಣೆಯಾಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಪರಿಪಾಲಿಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಗೆ ಚಾಲನೆ ನೀಡಿದ ಅವರು ಮಾನವ ಹಕ್ಕುಗಳ ದಿನಾಚರಣೆಯ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಹಕ್ಕು ಮತ್ತು ಕರ್ತವ್ಯಗಳನ್ನು ಸರಿಯಾಗಿ ಪಾಲನೆ ಮಾಡಬೇಕು.ಮಾನವ ಹಕ್ಕುಗಳ ಪಾಲನೆ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಬೇಕು. ಮಾನವ ಹಕ್ಕುಗಳು ಸ್ವಾಭಾವಿಕವಾಗಿ ಪ್ರದತ್ತವಾದ […]