ಬಾಲ್ಯವಿವಾಹ ತಡೆಗೆ ವ್ಯಾಪಕ ಜಾಗೃತಿ, ವಿವಾಹ ಪೂರ್ವ ಪತ್ತೆಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಸಮರ್ಪಕ ಜಾರಿ ಸೇರಿದಂತೆ ಮಹಿಳಾ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೊಂದ ಮತ್ತು ಸಂಕಷ್ಟಕ್ಕೊಳಗಾಗಿರುವ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ ಮತ್ತು ಪುನರ್ವಸತಿ ಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಬಿವೃದ್ದಿ ಇಲಾಖೆಯ 2023-24ನೇ ವರ್ಷದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಹಾಗೂ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬಾಲ್ಯವಿವಾಹವನ್ನು ತಡೆಗಟ್ಟುವ […]

ಡಿ. 16ರ ವರೆಗೆ ಡಿಇಎಲ್ ಇಡಿ, ಡಿಪಿಎಸ್ಇ ಪೂರಕ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಟಿ. ಭೂಬಾಲನ ಆದೇಶ

ವಿಜಯಪುರ: ವಿಜಯಪುರ ನಗರದ ಮನಗೂಳಿ ರಸ್ತೆಯಲ್ಲಿರುವ ಸರಕಾರಿ ಉರ್ದು ಟಿಟಿಐ ಕಾಲೇಜ್‍ನಲ್ಲಿ ಪ್ರಥಮ ಮತ್ತು ದ್ವಿತೀಯ ಡಿ.ಇಎಲ್.ಇಡಿ ಮತ್ತು ಡಿ.ಪಿ.ಎಸ್.ಇ ಪೂರಕ ಪರೀಕ್ಷೆ ಪ್ರಾರಂಭವಾಗಿದ್ದು, ಡಿಸೆಂಬರ್ 16ರವರೆಗೆ  ನಡೆಯಲಿವೆ. ಪಾರರದರ್ಶಕ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷೆ ಕೇಂದ್ರಗಳ ಸುತ್ತಮುತ್ತಲಿನ 200 ಮೀ. ಪ್ರದೇಶವನ್ನು ಕಲಂ 144ರನ್ವಯ ನಿಷೇಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು […]

ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹದಲ್ಲಿ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ

ವಿಜಯಪುರ: ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜಭವನದಲ್ಲಿ ಡಿ.7ರಂದು ನಡೆದ ಸಮಾರಂಭದಲ್ಲಿ 2022ನೇ ಸಾಲಿನಲ್ಲಿ ಅತಿ ಹೆಚ್ಚು ಧ್ವಜ ನಿಧಿ ಸಂಗ್ರಹ ಮಾಡಿದ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ ನೀಡಲಾಗಿದೆ. ಸಮಾರಂಭದಲ್ಲಿ ವಿಜಯಪುರ ಜಿಲ್ಲೆ ಅತಿ ಹೆಚ್ಚು ನಿಧಿ ಸಂಗ್ರಹ ಮಾಡಿದ್ದರಿಂದ ಲೆಫ್ಟಿನೆಂಟ್ ಜನರಲ್ ಬಿ.ಕೆ.ರೆಪ್ಸವಾಲ್, ಎ.  ವಿ. ಎಸ್. ಎಂ, ವಿ. ಎಸ್. ಎಂ. ಕಮಾಂಡೆಂಟ್ ಎ.ಎಸ್.ಸಿ. ಸೆಂಟರ್ ಮತ್ತು ಕಾಲೇಜ್ ಬೆಂಗಳೂರು ಇವರಿಂದ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಪ್ರಶಸ್ತಿ […]

ಬಹುಹಳ್ಳಿ ಯೋಜನೆಗಾಗಿ ಕಾಲುವೆಗಳ ಮೂಲಕ ಕುಡಿಯಲು ನೀರು ಬಿಡುಗಡೆ: ನಿಷೇಧಾಜ್ಞೆ ಜಾರಿ ಮಾಡಿ ಡಿಸಿ ಟಿ. ಭೂಬಾಲನ ಆದೇಶ

ವಿಜಯಪುರ: ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಕೆಬಿಜೆಎನ್‍ಎಲ್ ವತಿಯಿಂದ ಕಾಲುವೆಗಳ ಮೂಲಕ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯಡಿ ಜನವಸತಿಗಳಿಗೆ ಕಾಲುವೆಗಳ ಮೂಲಕ ನೀರು ಪೂರೈಸಲಾಗುತ್ತಿದೆ.  ಜಲಸಂಗ್ರಹಾಗಾರ- ಕೆರೆಗಳಲ್ಲಿರುವ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಉಪಯೋಗಿಸುಲು ಅನುಕೂಲವಾಗಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಜಲಸಂಗ್ರಹಗಾರಗಳು ಮತ್ತು ಕೆರೆಗಳ ವ್ಯಾಪ್ತಿಯ 100 ಅಡಿ ಪ್ರದೇಶದಲ್ಲಿ ಡಿ. 7 ರಿಂದ ನೇವರಿ ಜನವರಿ 1ರ ವರೆಗೆ ನಿಷೇಧಾಜ್ಞೆ ಜಾರಿ ಮಾಡಿ  ಜಿಲ್ಲಾಧಿಕಾರಿ ಟಿ. ಭೂಬಾಲನ್ ಆದೇಶ ಹೊರಡಿಸಿದ್ದಾರೆ. ಈ […]