ವಿಜಯಪುರ: ವಿಜಯಪುರ ನಗರದ ಮನಗೂಳಿ ರಸ್ತೆಯಲ್ಲಿರುವ ಸರಕಾರಿ ಉರ್ದು ಟಿಟಿಐ ಕಾಲೇಜ್‍ನಲ್ಲಿ ಪ್ರಥಮ ಮತ್ತು ದ್ವಿತೀಯ ಡಿ.ಇಎಲ್.ಇಡಿ ಮತ್ತು ಡಿ.ಪಿ.ಎಸ್.ಇ ಪೂರಕ ಪರೀಕ್ಷೆ ಪ್ರಾರಂಭವಾಗಿದ್ದು, ಡಿಸೆಂಬರ್ 16ರವರೆಗೆ ನಡೆಯಲಿವೆ.
ಪಾರರದರ್ಶಕ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷೆ ಕೇಂದ್ರಗಳ ಸುತ್ತಮುತ್ತಲಿನ 200 ಮೀ. ಪ್ರದೇಶವನ್ನು ಕಲಂ 144ರನ್ವಯ ನಿಷೇಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್ ತರುವುದು ಮತ್ತು ಬಳಸುವುದು ನಿಷೇಧಿಸಲಾಗಿದೆ. ಪರೀಕ್ಷಾ ದಿನಗಳಂದು ಬೆಳಿಗ್ಗೆ 8 ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ಕೇಂದ್ರದ ವ್ಯಾಪ್ತಿಯಲ್ಲಿನ ಝರಾಕ್ಸ ಅಂಗಡಿಗಳು, ಕಂಪ್ಯೂಟರ್ ಸೆಂಟರ್‍ಗಳು, ಸೈಬರ್ ಕೆಫೆಗಳು,ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಲಾಗಿದೆ.