ದಿಂಡವಾರ ಗ್ರಾಮದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಜನಜಾಗೃತಿ ಕಾರ್ಯಕ್ರಮ

ವಿಜಯಪುರ: ರಾಷ್ಟ್ರೀಯ ತಂಬಾಕು ನಿಯಂತ್ರಣ ಜನಜಾಗೃತಿ ಕಾರ್ಯಕ್ರಮದಡಿ ಬಸವನ ಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದಲ್ಲಿ ಅಂಗಡಿಗಳಿಗೆ ತೆರಳಿ ಜನಜಾಗೃತಿ ಮೂಡಿಸಲಾಯಿತು. 

ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಶರಣಬಸು ಗುದ್ದಿ ನೇತೃತ್ವದಲ್ಲಿ ಎಸ್. ಡಿ. ಎಂ. ಸಿ ಅಧ್ಯಕ್ಷರು, ಶಾಲೆಯ ಮುಖ್ಯ ಶಿಕ್ಷಕರು ದಸ್ತಗೀರಸಾಬ ವಾಲಿಕಾರ ಮತ್ತೀತತರು ಈ ಜಾಗೃತಿ ಮೂಡಿಸಿದರು.

ತಂಬಾಕು ಉತ್ಪನ್ನಗಳ ಬಳಕೆಯಿಂದ ಜನಸಾಮಾನ್ಯರಿಗೆ ಹಲವಾರು ರೀತಿಯ ಗಂಭೀರ ಸ್ವರೂಪದ ಕಾಯಿಲೆಗಳು ಬರುತ್ತbz.  ಯುವಜನತೆ ಹೆಚ್ಚಾಗಿ ತಂಬಾಕು ವ್ಯಸನಕ್ಕೆ ದಾಸರಾಗುತ್ತಿರುವುದರಿಂದ  ತಂಬಾಕು ಪದಾರ್ಥಗಳ ಮಾರಾಟವನ್ನು ಶಾಲೆ, ಕಾಲೇಜುಗಳ ನೂರು ಗಜ ಅಂತರದೊಳಗೆ ಮಾರಾಟ ಮಾಡದಂತೆ ಗುಲಾಬಿ ಹೂವು ನೀಡಿ ಮನವಿ ಮಾಡಿದರು.

ಅಲ್ಲದೇ, ತಂಬಾಕು ಉತ್ಪನ್ನ ಮಾರಾಟ ಮಾಡದಂತೆ ಎಚ್ಚರಿಕೆ ನೀಡಿ ತಂಬಾಕು ಸೇವನೆಯ ದುಷ್ಪರಿಣಾಮಗಳು ಹಾಗೂ ಕೋಟಪಾ -2003 ಕಾಯಿದೆಯ ಬಗ್ಗೆ ಅರಿವು ಮೂಡಿಸಿದರು.

Leave a Reply

ಹೊಸ ಪೋಸ್ಟ್‌