ವಿಜಯಪುರ: ಜಿಲ್ಲೆಯ ಆರ್. ಬಿ. ಎಸ್. ಕೆ ಕಾರ್ಯಕ್ರಮದಲ್ಲಿ ಸಾಧಿಸಿದ ಪ್ರಗತಿ ಇತರರಿಗೆ ಮಾದರಿಯಾಗಿದೆ. ಹೆಮ್ಮೆ ಪಡುವಂಥ ಸಾಧನೆಯಲ್ಲಿ ಭಾಗಿಯಾದ ಎಲ್ಲ ಇಲಾಖೆಯ ಅಧಿಕಾರಿಗಳ ಸಮನ್ವಯದಿಂದ ಯಶಸ್ವಿ ಅನುಷ್ಟಾನಗೊಂಡಿದೆ. ಮುಂಬರುವ ದಿನಗಳಲ್ಲಿ ತಾವೆಲ್ಲರೂ ಇನ್ನಷ್ಟು ಅನುಕೂಲ ಕಲ್ಪಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಹೇಳಿದ್ದಾರೆ.
ಡಿ. 12ರಂದು ಜಿ. ಪಂ. ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಶ್ರಮಿಸಿದ ತಂಡದ ವೈದ್ಯಾಧಿಕಾರಿಗಳಿಗೆ, ತಾಲೂಕಾ ಆರೋಗ್ಯ ಅಧಿಕಾರಿಗಳಿಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಟ್ಟದ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖೆಯ ಅಧಿಕಾರಿಗಳಿಗೆ ಆಯೋಜಿಸಿದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಅನಾರೋಗ್ಯಕ್ಕೆ ಒಳಗಾದÀ ಮಕ್ಕಳನ್ನು ಗುರುತಿಸಿ, ಅವರಿಗೆ ಸೂಕ್ತ ಚಿಕಿತ್ಸೆ ಔಷಧೋಪಚಾರ ಮತ್ತು ಸಮಾಲೋಚನೆ ಮೂಲಕ ಚಿಕಿತ್ಸಾ ಪರಿಹಾರ ಕಲ್ಪಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದಕ್ಕೆ ಪೂರಕವಾಗಿ ಸಂಬAಧಪಡುವ ಇಲಾಖೆ ಅಧಿಕಾರಿಗಳು ಸಮನ್ವಯ ಸಾಧಿಸಿ, ಕಾರ್ಯನಿರ್ವಹಿಸುವಂತೆ ತಿಳಿಸಿದರು. ಸದ್ಯ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಅನೇಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಯಡಿ ರಕ್ತ ತಪಾಸಣೆ ಕೈಗೊಳ್ಳಲಾಗುತ್ತಿದೆ. ರಕ್ತ ಹೀನತೆಯಿಂದ ಬಳಲುವ ಮಕ್ಕಳಿಗೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಅನುಕೂಲವಿರುತ್ತದೆ. ಈ ಕುರಿತು ಹೆಚ್ಚಿನ ಅರಿವು ಮೂಡಿಸಬೇಕು ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮದಡಿಯಲ್ಲಿ 18ದೊಳಗಿನ ಮಕ್ಕಳಿಗೆ ಜಿಲ್ಲೆಯಾದ್ಯಂತ ಫೆಬ್ರವರಿ-2022 ರಿಂದ ಈವರೆಗೆ 12,92,602 ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಗಿದೆ. ಈ ಪೈಕಿ 59,942 ನಾನಾ ಆರೋಗ್ಯ ಸಮಸ್ಯೆಯಿರುವ ಮಕ್ಕಳಿದ್ದು,ಇದರಲ್ಲಿ 912 ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ಮಾಡಿಸಲಾಗಿದ್ದು, 189 ಮಕ್ಕಳಿಗೆ ಹೃದಯ ಸಂಬAಧಿ ಶಸ್ತ್ರಚಿಕಿತ್ಸೆ, 35 ಮಕ್ಕಳಿಗೆ ಕಣ್ಣಿನ ಚಿಕಿತ್ಸೆ, 26 ಮಕ್ಕಳಿಗೆ ಸೀಳು ತುಟಿ ಚಿಕಿತ್ಸೆ ಮತ್ತು ಇತರೆ ಆರೋಗ್ಯ ಸಮಸ್ಯೆ ಹೊಂದಿರುವ 662 ಮಕ್ಕಳಿಗೆ ಆರ್.ಬಿ.ಎಸ್.ಕೆ ಹಾಗೂ ಎ.ಬಿ.ಎ.ಆರ್.ಕೆ ಕಾರ್ಯಕ್ರಮದಡಿ ಉಚಿತ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದೆ. ಅವಶ್ಯಕತೆ ಅನುಸಾರ ವಿಜಯಪುರದ ಬಿ.ಎಲ್.ಡಿ.ಇ, ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಗಳಿಗೆ ಹಾಗೂ ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಉಚಿತ ಶಸ್ತ್ರಚಿಕಿತ್ಸೆ ಒದಗಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಆರ್.ಸಿ.ಎಚ್ ಅಧಿಕಾರಿಗಳಾದ ಡಾ. ಕೆ. ಡಿ. ಗುಂಡಬಾವಡಿ ಸಭೆಯಲ್ಲಿ ಮಾಹಿತಿ ಒದಗಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಸವರಾಜ ಹುಬ್ಬಳ್ಳಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶರಾದ ಡಾ.ಸಿ.ಕೆ ಹೊಸಮನಿ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ಕವಿತಾ ದೊಡಮನಿ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಮಹಾದೇವ ನಿಂಲಗಿ,ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿಗಳಾದ ಸುರೇಶ ಹೊಸಮನಿ,ತಾಲೂಕಿನ ಎಲ್ಲ ಬಿ.ಇ.ಒ, ಸಿಡಿಪಿಓ, ಟಿ.ಎಚ್.ಓ ಅವರು ಉಪಸ್ಥಿತರಿದ್ದರು.