ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ ವಿತರಣೆ- ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಳ್ಳಲು ಸಕಲ ನೆರವು- ಡಿಸಿ ಟಿ. ಭೂಬಾಲನ
ವಿಜಯಪುರ: ನ್ಯಾಶನಲ್ ಪೋರ್ಟಲ್‌ನಲ್ಲಿ ನೊಂದಣಿಯಾದ ವಿಜಯಪುರ ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುತಿನ ಚೀಟಿ ವಿತರಿಸಿದರು. ನ್ಯಾಶನಲ್ ಪೋರ್ಟಲ್‌ನಲ್ಲಿ ನೊಂದಣಿ ಮಾಡಿಕೊಂಡ ಜಿಲ್ಲೆಯ 100 ಲಿಂಗತ್ವ ಅಲ್ಪಸಂಖ್ಯಾತರಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುತಿನ ಚೀಟಿಯನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯ ಮುಖ್ಯವಾಹಿನಿಯಲ್ಲಿ ತಮ್ಮ ಬದುಕು ಕಟ್ಟಿಕೊಳ್ಳಲು ಜಿಲ್ಲಾಡಳಿತದಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ ಅವರು, ಮಹಾನಗರ ಪಾಲಿಕೆಯಿಂದ ಲಿಂಗತ್ವ ಅಲ್ಪಸಂಖ್ಯಾತರಿಗೆ ವಸತಿ ಕಲ್ಪಿಸುವ ಕುರಿತು ಸಹ ಪರಿಶೀಲನೆ ನಡೆಸಿ, […]
ಡಿ.16, 17 ರಂದು ಕರ್ನಾಟಕ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆ- ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಎಡಿಸಿ ಸೂಚನೆ
ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ರಾಜ್ಯ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಕಿರಿಯ ಲೆಕ್ಕ ಸಹಾಯಕರ ಸಿ ಗ್ರೂಪ್ ಹುದ್ದೆಗಳ ನೇಮಕಾತಿಗೆ ಡಿ. 16 ಮತ್ತು 17 ರಂದು ವಿಜಯಪುರದ ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆಯಗಳು ವ್ಯವಸ್ಥಿತವಾಗಿ ನಡೆಸುವಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಿ. 16 ರಂದು ಸರkeರಿ ಬಾಲಕರ […]
ಅತಿಥಿ ಉಪನ್ಯಾಸಕರ ಸಮಸ್ಯೆಗೆ ಸ್ಪಂದಿಸಲು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ
ವಿಜಯಪುರ: ರಾಜ್ಯ ಸರಕಾರ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ, ವಿದ್ಯಾರ್ಥಿಗಳ ತರಗತಿಗಳು ಸುಗಮವಾಗಿ ನಡೆಸುವಂತೆ ಆಗ್ರಹಿಸಿ ಬೃಹತ್ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ಪ್ರಾಂತ ಕಾರ್ಯದರ್ಶಿ ಸಚೀನ ಕುಳಗೇರಿ, ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದಾಗಿ ಪದವಿ ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಹಿನ್ನಡೆಯಾಗುತ್ತಿದೆ. […]